LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಯಲಹಂಕ ವಲಯ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ದಾಳಿಯಿಂದ ಸೀತಪ್ಪ ಸಾವು

ಬೆಂಗಳೂರು:  ಯಲಹಂಕ ವಲಯ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಕೆಂಪೆಗೌಡನಗರದಲ್ಲಿ ನಿನ್ನೆ ದಿನಾಂಕ:28-07-2025ರ ನಸುಕಿನಜಾವ 3 ಗಂಟೆಗೆ ಸುಮಾರು 68 ವಯಸ್ಸಿನ ಶ್ರೀ ಸೀತಪ್ಪ ರವರು ಬೀದಿನಾಯಿಗಳ ದಾಳಿಯಿಂದ ಮೃತಪಟ್ಟಿರಬಹುದೆಂದು ಅನುಮಾನಿಸಲಾಗಿದೆ.

* ಶ್ರೀ ಸೀತಪ್ಪ ರವರು ಮುಂಜಾನೆ 3 ಗಂಟೆಗೆ ಚಹಾ ಸೇವಿಸಲು ಸ್ಥಳೀಯ ಚಹಾ ಅಂಗಡಿಗೆ ತೆರೆಳಿದಾಗ ಈ ಘಟನೆ ಸಂಭವಿಸಿದೆ ಎಂದು ಸ್ಥಳೀಯರು ವಿಚಾರಣೆ ವೇಳೆಯಲ್ಲಿ ಮಾಹಿತಿ ನೀಡಿರುತ್ತಾರೆ ಹಾಗೂ ಕುಟುಂಬಸ್ಥರು ಶ್ರೀ ಸೀತಪ್ಪ ರವರ ಮನಸ್ಥಿತಿ ಸರಿಯಿರುವುದಿಲ್ಲ ಎಂದು ಮಾಹಿತಿ ನೀಡಿರುತ್ತಾರೆ.

* ಸದರಿ ಘಟನೆಯ ಬಗ್ಗೆ ಯಾವುದೇ ನಿಖರ ಸಾಕ್ಷಾಧಾರಗಳು (CC TV Footage, Witness) ಲಭ್ಯವಿರುವುದಿಲ್ಲ. ಮುಂಜಾನೆಯ ಸಮಯವಾಗಿರುವುದರಿಂದ ಜನ ಸಂಚಾರ ವಿರಳವಾಗಿದ್ದು, ಸಮಯಕ್ಕೆ ಸರಿಯಾಗಿ ಸಹಾಯ ದೊರೆಯದೆ ಇಲ್ಲದಿರುವುದು ವಿಚಾರಣೆ ವೇಳೆ ತಿಳಿದುಬಂದಿರುತ್ತದೆ. ಸ್ವಲ್ಪ ಸಮಯದ ನಂತರ ಸಾರ್ವಜನಿಕರಿಂದ ಸಹಾಯವಾಣಿ 112ಕ್ಕೆ ದೂರು ಸ್ವೀಕೃತವಾದ ಹಿನ್ನಲೆಯಲ್ಲಿ ಸ್ಥಳೀಯ ಪೋಲಿಸರು ಘಟನೆ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಗಾಯಗೊಂಡ ಶ್ರೀ ಸೀತಪ್ಪ ರವರನ್ನು ಯಲಹಂಕ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ಕರೆತಂದಾಗ ಆಸ್ಪತ್ರೆ ವೈದ್ಯರು ಸದರಿಯವರು ಮೃತಪಟ್ಟಿರುವುದಾಗಿ ತಿಳಿಸಿರುವ ಹಿನ್ನಲೆಯಲ್ಲಿ *ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ಶವವನ್ನು ಕಳುಹಿಸಲಾಗಿರುತ್ತದೆ.*

* ಮರಣೋತ್ತರ ಪರೀಕ್ಷೆಯ ವರದಿಯು ನಿರೀಕ್ಷಣೆಯಲ್ಲಿದೆ.

* ಬಿಬಿಎಂಪಿ ಪಶುಪಾಲನಾ ವಿಭಾಗದಿಂದ ಘಟನೆ ನಡೆದ ಸ್ಥಳದಲ್ಲಿರುವ 16 ಬೀದಿನಾಯಿಗಳನ್ನು ಹಿಡಿದು ವೀಕ್ಷಣೆಗಾಗಿ ಯಲಹಂಕ ವಲಯದ ಸಂತಾನ ಹರಣ ಶಸ್ತ್ರ ಚಿಕಿತ್ಸೆ ಕೇಂದ್ರ(ಎಬಿಸಿ ಸೆಂಟರ್)ದಲ್ಲಿ ವೀಕ್ಷಣೆಗಾಗಿ ಇರಿಸಲಾಗಿದೆ. ಇನ್ನುಳಿದ ನಾಯಿಗಳನ್ನು ಹಿಡಿಯಲಾಗುತ್ತಿದೆ.

* *ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಸದರಿ ಮೃತಪಟ್ಟ ವ್ಯಕ್ತಿಯು ನಾಯಿ ಕಡಿತ/ದಾಳಿಯಿಂದ ಮರಣ ಹೊಂದಿರುವುದಾಗಿ ದೃಢಪಟ್ಟಲ್ಲಿ ಪಾಲಿಕೆಯ ವತಿಯಿಂದ ನಿಯಮಾನುಸಾರ ಪರಿಹಾರವನ್ನು ಕುಟುಂಬಸ್ಥರಿಗೆ ನೀಡಲಾಗುವುದು.*
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ