LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ನ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಇನ್ನಿಲ್ಲ

ಬೆಂಗಳೂರು: ಕಾಂಗ್ರೆಸ್ ನ ಹಿರಿಯ ನಾಯಕ , ದಾವಣಗೆರೆಯ ಬಾಪೂಜಿ ಆಸ್ಪತ್ರೆಗಳ ಸಂಸ್ಥಾಪಕ ಶಾಮನೂರು ಶಿವಶಂಕರಪ್ಪ ವಿಧಿವಶರಾಗಿದ್ದಾರೆ.


ಶಾಮನೂರು ಶಿವಶಂಕರಪ್ಪ ಅವರಿಗೆ 94 ವರ್ಷ, ಭಾನುವಾರ ಸಂಜೆ 6 ಗಂಟೆಗೆ ಶಾಮನೂರು ಶಿವಶಂಕರಪ್ಪ ವಿಧಿವಶರಾಗಿದ್ದಾರೆ ಎಂದು ಅಳಿಯ ಹಾಗೂ ಸ್ಪರ್ಶ ಆಸ್ಪತ್ರೆಯ ಮಾಲೀಕ ಡಾ. ಶರಣ್ ಶಿವರಾಜ್ ಪಾಟೀಲ್ ಹೇಳಿದ್ದಾರೆ.


ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅಕ್ಟೋಬರ್ 23ರಂದು ಹಲವು ದಿನಗಳಿಂದ ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು ಹೀಗಾಗಿ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿದ್ದರು.


ಇನ್ನು ಖಾಸಗಿ ಆಸ್ಪತ್ರೆಗೆ ರಾಜಕೀಯ ನಾಯಕರು ಗಣ್ಯರು ಬಂದು ಮಿತ್ರರು ಕಾರ್ಯಕರ್ತರು ಅಭಿಮಾನಿಗಳು ಆಗಮಿಸುತ್ತಿದ್ದಾರೆ. ಇನ್ನು ದಾವಣಗೆರೆಯಲ್ಲಿರುವ ಶಾಮನೂರು ಅವರ ನಿವಾಸಕ್ಕೆ ಅನೇಕ ಕಾರ್ಯಕರ್ತರು ಬೆಂಬಲಿಗರು ಅಭಿಮಾನಿಗಳು ಆಗಮಿಸುತ್ತಿದ್ದಾರೆ.


ಶಾಮನೂರು ಶಿವಶಂಕರಪ್ಪ ಅವರ ಮಕ್ಕಳಾದ ಎಸ್ ಎಸ್ ಮಲ್ಲಿಕಾರ್ಜುನ್, ಎಸ್ ಎಸ್ ಗಣೇಶ್, ಎಸ್ ಎಸ್ ಬಕೇಶ್ ಹಾಗೂ ಪ್ರಭಾ ಮಲ್ಲಿಕಾರ್ಜುನ್ ಮಕ್ಕಳನ್ನು ಅಗಲಿದ್ದಾರೆ.


ವಯೋಜಹಜ ಕಾಯಿಲೆಯಿಂದ ಅಕ್ಟೋಬರ್ 23ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು ಈ ವೇಳೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಕಣ್ಣೀರು ರಾಜಕೀಯ ನಾಯಕರು ಭೇಟಿ ನೀಡಿ ಯುವಕ್ಷೇಮವನ್ನು ವಿಚಾರಿಸಿದ್ದರು.


ಕಳೆದ ಹಲವು ದಿನಗಳಿಂದ ಚಿಕಿತ್ಸೆಗೆ ಕೊಂಚ ಸ್ಪಂದನೆಯನ್ನು ವ್ಯಕ್ತಪಡಿಸುತ್ತಿದ್ದರು. ಆದರೆ ಭಾನುವಾರ ವೈದ್ಯರು ನೀಡುತ್ತಿರುವ ಚಿಕಿತ್ಸೆಗೆ ಯಾವುದೇ ಸ್ಪಂದನೆ ವ್ಯಕ್ತವಾಗುತ್ತಿರಲಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.


ಕಾಂಗ್ರೆಸ್ ನಲ್ಲಿ ವಿವಿಧ ಹುದ್ದೆಗಳನ್ನು ಏರಿದ್ದ ಶಾಮನೂರು ಶಿವಶಂಕರಪ್ಪ ಅವರು ಸಕ್ರಿಯ ರಾಜಕಾರಣಿಯಾಗಿದ್ದರೂ. ಹಲವು ಸಮೂಹ ವಿದ್ಯಾ ಸಂಸ್ಥೆಗಳು, ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡಿದ್ದರು. ಇವರ ಇಡೀ ಕುಟುಂಬವೇ ರಾಜಕೀಯ ಹಿನ್ನೆಲೆಯಿಂದ ಬಂದವರು.


ಅಪವಾದ, ಆರೋಪಗಳಿಂದ ದೂರ.. ದೂರ..!


ಮಾಜಿ ಸಚಿವರು, ಶಾಸಕರು, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಪಕ್ಷದ ಹಿರಿಯ ನಾಯಕರು ಆದ ಶಾಮನೂರು ಶಿವಶಂಕರಪ್ಪ ಅವರ ನಿಧನವಾರ್ತೆ ನೋವುಂಟುಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ  ಟ್ವೀಟ್ ಮಾಡಿ ಸಂತಾಪ ವ್ಯಕ್ತ.

ತಮ್ಮ ಸುದೀರ್ಘ ಸಾರ್ವಜನಿಕ ಜೀವನದಲ್ಲಿ ಅಪವಾದ, ಆರೋಪಗಳಿಂದ ದೂರವಿದ್ದು, ಸಿಕ್ಕ ಅಧಿಕಾರವನ್ನು ಜನಕಲ್ಯಾಣಕ್ಕಾಗಿಯೇ ಮುಡುಪಿಟ್ಟಿದ್ದ ಮುತ್ಸದ್ದಿ ನಾಯಕನ ಅಗಲಿಕೆಯಿಂದ ಸಮಾಜ ಬಡವಾಗಿದೆ.
ದಾವಣಗೆರೆ ಜಿಲ್ಲೆಯನ್ನು ಮಾದರಿ ಜಿಲ್ಲೆಯಾಗಿಸಿದ ಶಿವಶಂಕರಪ್ಪನವರ ಕಾರ್ಯಗಳು ಅವರನ್ನು ಜನಮಾನಸದಲ್ಲಿ ಚಿರಸ್ಥಾಯಿಯಾಗಿಸಲಿದೆ.

ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಪುತ್ರ ಎಸ್.ಎಸ್.ಮಲ್ಲಿಕಾರ್ಜುನ ಮತ್ತವರ ಕುಟುಂಬಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ