LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

RSS ಸದಸ್ಯರಿಂದ ಲೈಂಗಿಕ ಕಿರುಕುಳ ಆರೋಪ: ಯೂಥ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಸದಸ್ಯರಿಂದ ಲೈಂಗಿಕ ಕಿರುಕುಳ ಆರೋಪ ಮಾಡಿ ಕೇರಳದಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಆರ್‌ಎಸ್‌ಎಸ್‌ ವಿರುದ್ಧ ನಗರದ ಸ್ವಾತಂತ್ರ್ಯ ಉದ್ಯಾನವನದ ಬಳಿ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಎಚ್.ಎಸ್‌. ಮಂಜುನಾಥಗೌಡ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಯಿತು.

ಮಂಜುನಾಥ್‌ಗೌಡ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆರ್‌ಎಸ್‌ಎಸ್‌ ಸಂಘಟನೆ ವಿರುದ್ಧ ಘೋಷಣೆ ಕೂಗಿದರು. ಇದೇ ವೇಳೆ ಆರ್‌ಎಸ್‌ಎಸ್‌ ಪ್ರತಿಕೃತಿ ಹಾಗೂ ಟೋಪಿಯನ್ನು ಸುಡಲು ಯತ್ನಿಸಿದರು.

ಈ ವೇಳೆ ಮಂಜುನಾಥಗೌಡ ಮಾತನಾಡಿ, ಕೇರಳದಲ್ಲಿ ಯುವಕರೊಬ್ಬರು ಆರ್‌ಎಸ್‌ಎಸ್‌ ಕಾರ್ಯಕರ್ತರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜ್ಯದಲ್ಲೂ ಹಲವು ಆರ್‌ಎಸ್‌ಎಸ್‌ ಮಾಜಿ ಕಾರ್ಯಕರ್ತರು ಅಲ್ಲಿನ ಅನಾಚಾರ, ಶೋಷಣೆ ಬಗ್ಗೆ ತಿಳಿಸಿದ್ದಾರೆ. ಹನುಮೇಗೌಡ ಎಂಬುವವರು ಆರ್‌ಎಸ್‌ಎಸ್‌ನ ಒಳಸುಳಿಗಳು ಎಂಬ ಪುಸ್ತಕದಲ್ಲಿ ಆರ್‌ಎಸ್‌ಎಸ್‌ನಲ್ಲಿ ಲೈಂಗಿಕ ದೌರ್ಜನ್ಯದ ಬಗ್ಗೆ ಬರೆದಿದ್ದಾರೆ. ಹೀಗಾಗಿ ಆರ್‌ಎಸ್‌ಎಸ್‌ನಲ್ಲಿನ ಲೈಂಗಿಕ ದೌರ್ಜನ್ಯಗಳ ಬಗ್ಗೆ ತನಿಖೆ ಆಗಬೇಕು ಎಂದು ಆಗ್ರಹ ಮಾಡಿದರು.
ಆರ್‌ಎಸ್‌ಎಸ್‌ ಕುತಂತ್ರಗಳ ಬಗ್ಗೆ ಬಿಜೆಪಿಯ ತುಮಕೂರು ಗ್ರಾಮಾಂತರ ಶಾಸಕ ಸುರೇಶ್ ಗೌಡ ಸೇರಿದಂತೆ ಬಿಜೆಪಿಯವರೇ ಹಲವು ಬಾರಿ ಹೇಳಿದ್ದಾರೆ. ಮಹಾತ್ಮಗಾಂಧಿ ಅವರನ್ನು ಕೊಂದಿದ್ದು ಇದೇ ಆರ್‌ಎಸ್‌ಎಸ್‌ನ ಸಂತತಿ ಎಂದು ಆರೋಪ ಮಾಡಿದರು.
ಬಿಜೆಪಿಯವರು ಈಗ ಸರ್ದಾರ್‌ ವಲ್ಲಭಾಬಾಯಿ ಪಟೇಲ್‌ ಫೋಟೋಗೆ ಪೂಜೆ ಮಾಡುತ್ತಾರೆ. ಆದರೆ ಆರ್‌ಎಸ್‌ಎಸ್‌ ಸಮಾಜದ ಸ್ವಾಸ್ಥ್ಯ ಹಾಗೂ ದೇಶಕ್ಕೆ ಕಂಟಕ ಎಂದು ಎರಡು ಬಾರಿ ನಿಷೇಧಿಸಿದ್ದರು. ಶತಮಾನೋತ್ಸವ ಆಚರಿಸಿಕೊಳ್ಳುತ್ತಿದ್ದೇವೆ ಎನ್ನುವ ಈ ಸಂಘಟನೆಯಿಂದ ದೇಶಕ್ಕೆ ಯಾವುದೇ ಪ್ರಯೋಜನವಾಗಿಲ್ಲ. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸದ, ಸ್ವಾತಂತ್ರ್ಯ ಬಂದ 50 ವರ್ಷಗಳವರೆಗೆ ತಮ್ಮ ಕಚೇರಿ ಮೇಲೆ ರಾಷ್ಟ್ರಧ್ವಜವನ್ನೂ ಹಾರಿಸದ ದೇಶದ್ರೋಹಿಗಳು ಆರ್‌ಎಸ್‌ಎಸ್‌ನವರು. ದೇಶದ ಐಕ್ಯತೆ, ಅಭಿವೃದ್ಧಿಗೆ ಅವರು ಮಾರಕ ಎಂದು ಟೀಕಾಪ್ರಹಾರ ನಡೆಸಿದರು.
ಜಾತಿ, ಧರ್ಮಗಳ ನಡುವೆ ಒಡಕು ತಂದು ಸಮಾಜವನ್ನು ಹಾಳು ಮಾಡುವುದಷ್ಟೇ ಅವರ ಉದ್ದೇಶ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಕರಿ ಟೋಪಿ ಎಂದಿದ್ದಕ್ಕೆ ಆರ್‌ಎಸ್‌ಎಸ್‌, ಬಿಜೆಪಿಯವರು ಟೀಕೆ ಮಾಡುತ್ತಿದ್ದಾರೆ. ಕಪ್ಪು ಪ್ರತಿಭಟನೆ ಸಂಕೇತ. ಕರಿ ಟೋಪಿ ಇಟ್ಟುಕೊಂಡಿರುವ ಇವರು ದೇಶಕ್ಕಾಗಿ ಒಂದು ಹೋರಾಟವನ್ನೂ ಮಾಡಿಲ್ಲ. ಇವರಿಗೆ ದೇಶದ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ ಎಂದು ಮಂಜುನಾಥ್‌ ಕಿಡಿ ಕಾರಿದರು.
ಪ್ರತಿಭಟನೆಯನ್ನು ನೂರಾರು ಕಾರ್ಯಕರ್ತರು ಭಾಗವಹಿಸಿ ಆರ್‌ಎಸ್‌ಎಸ್‌ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರ ಹಾಕಿದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ