LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶಾರುಖಾನ್ ಹುಟ್ಟುಹಬ್ಬ, ಕರ್ನಾಟಕ ರಾಜ್ಯೋತ್ಸವ ಆಚರಣೆ

ಬೆಂಗಳೂರು: ಬಾಲಿವುಡ್ ನಟ ಶಾರುಖ್ ಖಾನ್ ಹುಟ್ಟುಹಬ್ಬ ಹಾಗೂ ಕರ್ನಾಟಕ ರಾಜ್ಯೊತ್ಸವನ್ನು ರವೀಂದ್ರ ಕಲಾಕ್ಷೇತ್ರದಲ್ಲಿ ಅದ್ದೂರಿಯಾಗಿ ಆಚರಣೆ ಮಾಡಲಾಯಿತು.


ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಸಮಿತಿ ಬೀದಿಬದಿ ವ್ಯಾಪಾರಿಗಳ ವಿಭಾಗ ಉಪಾದ್ಯಕ್ಷರಾದ ಹಿಘ್ಬುಲ್ ರೆಹಮಾನ್ ಅವರ ನೇತೃತ್ವದಲ್ಲಿ 70ನೇ ಕರ್ನಾಟಕ ರಾಜ್ಯೋತ್ಸವ, ಶಾರುಖ್ ಖಾನ್  ಹುಟ್ಟುಹಬ್ಬವನ್ನು  ಕೇಕ್ ಕತ್ತರಿಸುವ ಮೂಲಕ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ವಿಶೇಚವಾಗಿ ಆಚರಣೆ ಮಾಡಲಾಯಿತು.


ಬೆಂಗಳೂರು ಕೇಂದ್ರದಲ್ಲಿನ ಬೀದಿಬದಿ ವ್ಯಾಪಾರಿಗಳನ್ನು ಗಮನದಲ್ಲಿಟ್ಟುಕೊಂಡು ಕನ್ನಡ ನಾಡಿನ ಭಾಷೆ, ಸಂಸ್ಕೃತಿ, ಆಚಾರ,‌ವಿಚಾರದ ಬಗ್ಗೆ ಸಂಭ್ರಮಿಸುವ ಕೆಲಸವನ್ನು ಅನ್ಯಧರ್ಮದವರು ಮಾಡುತ್ತಿರುವುದು ಹೆಗ್ಗಳಿಕೆಯ ವಿಚಾರವಾಗಿದೆ.


ಅಲ್ಲದೆ ಸಂಜೆ 6 ಗಂಟೆಯಿಂದ ರಾತ್ರಿ 10 ಗಂಟೆಯ ಯನಕ ಕರ್ನಾಟಕ ರಾಜ್ಯೋತ್ಸವ ಹಿನ್ನಲೆ ಕನ್ನಡದ ಹಾಡುಗಳು ಹಾಗೂ ಶಾರುಖ್ ಖಾನ್ ಅವರ ನಟನೆಯ ಗೀತೆಗಳನ್ನು  ಗಾಯಕರು ಹಾಡುವ ಮೂಲಕ ನೆರೆದಿದ್ದವರನ್ನು ರಂಜಿಸಿದರು.


ಅಲ್ಲದೆ ಕಾರ್ಯಕ್ರಮಕ್ಕೆ BBMPಯ ಮಾಜಿ ಸದಸ್ಯ ಹಾಗೂ ಆರ್ ವಿ ದೇವರಾಜ್ ಪುತ್ರ ಯುವರಾಜ್  ಅವರು ಆಗಮಿಸಿ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಮುಂದಿನ ಶಾಸಕ ಯುವರಾಜ್ ಎಂದು ಅಭಿಮಾನಿಗಳು ಘೋಷಣೆ ಕೂಗಿದರು. ಕ್ಷೇತ್ರದಲ್ಲಿ ಶಾಸಕನಾಗುವ ಅರ್ಹತೆ ಇದ್ದರೆ ಮಾತ್ರ ಜನರು ಹೇಳಲಿ, ಇಲ್ಲ ಅಂದ್ರೆ ಬೇಡ ಎನ್ನುವ ಮೂಲಕ ಜನರ ನೀವೆ ನಿರ್ಧಾರ ಮಾಡಿ ಎಂದು ತಿಳಿಸಿದರು.


ಇನ್ನು ಇದೇ ವೇಳೆ ಬೀದಿಬದಿ ಬೆಂಗಳೂರು ನಗರ ಕೇಂದ್ರದ ವ್ಯಾಪಾರಿಗಳನ್ನು  ವೇದಿಕೆ ಮೇಲೆ ಸನ್ಮಾನಿಸಿದರು. ಈ ವೇಳೆ ಕಾಂಗ್ರೆಸ್ ನ ಕಾರ್ಯಕರ್ತರು ಮುಖಂಡರು ಉಪಸ್ಥಿತರಿದ್ದರು.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ