LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶೆಟ್ಟರ್ ಮತ್ತೆ ಬಿಜೆಪಿಗೆ ಹೋಗಿದ್ದು ಶೋಭೆಯಲ್ಲ: ಎಂ ಬಿ ಪಾಟೀಲ

ಬೆಂಗಳೂರು: ಜಗದೀಶ್ ಶೆಟ್ಟರ್ ಅವರಂಥ ಹಿರಿಯರು ಮತ್ತು ಮಾಜಿ ಮುಖ್ಯಮಂತ್ರಿಗಳೊಬ್ಬರು ತರಾತುರಿಯಲ್ಲಿ ಪುನಃ ಬಿಜೆಪಿಗೆ ಹಿಂದಿರುಗಿ ಹೋಗಿರುವುದು ಅವರಿಗೆ ಶೋಭೆಯಲ್ಲ. ಈ ಬಗ್ಗೆ ಅವರು ಯೋಚಿಸಬೇಕಿತ್ತು. ಏಕೆಂದರೆ, ಬಿಜೆಪಿಯಿಂದ ಅಪಮಾನಿತರಾದಾಗ ಕಾಂಗ್ರೆಸ್ ಅವರನ್ನು ಚೆನ್ನಾಗಿ ನಡೆಸಿಕೊಂಡಿತ್ತು ಎಂದು ಸಚಿವ ಎಂ ಬಿ ಪಾಟೀಲ ಪ್ರತಿಕ್ರಿಯಿಸಿದ್ದಾರೆ.

ಗುರುವಾರ ಬೆಳಿಗ್ಗೆ ನಡೆದ ಅನಿರೀಕ್ಷಿತ ರಾಜಕೀಯ ಬೆಳವಣಿಗೆ ಕುರಿತು ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, `ಕಾಂಗ್ರೆಸ್ಸಿನಲ್ಲಿ ಅವರಿಗೆ ಒಳ್ಳೆಯ ಭವಿಷ್ಯವಿತ್ತು. ಲೋಕಸಭೆ ಚುನಾವಣೆಯಲ್ಲಿ ಅವರಿಗೆ ಪಕ್ಷದಿಂದ ಧಾರವಾಡ ಕ್ಷೇತ್ರದ ಟಿಕೆಟ್ ಕೊಡಬೇಕೆಂಬ ಆಲೋಚನೆ ಇತ್ತು. ಬಿಜೆಪಿ ಅವರ ಮೇಲೆ ಒತ್ತಡ ಹೇರಿತೋ, ಆಮಿಷ ಒಡ್ಡಿತೋ ಗೊತ್ತಿಲ್ಲ’ ಎಂದು ಉತ್ತರಿಸಿದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅವರಿಗೆ ಟಿಕೆಟ್ಟನ್ನೇ ನಿರಾಕರಿಸಿತ್ತು. ಆಗ ನಾವು ಅವರನ್ನು ಕಾಂಗ್ರೆಸ್ಸಿಗೆ ಕರೆತಂದೆವು. ಚುನಾವಣೆಯಲ್ಲಿ ಸೋತರೂ ಅವರನ್ನು ಎಂಎಲ್ಸಿ ಮಾಡಿದ್ದೆವು. ಪಕ್ಷದ ವೇದಿಕೆಗಳಲ್ಲಿ ಆದ್ಯತೆ ಕೊಟ್ಟಿದ್ದೆವು. ಅವರ ಅಭಿಪ್ರಾಯಗಳಿಗೆ ಬೆಲೆ ಕೊಡುತ್ತಿದ್ದೆವು. ಆದರೂ ಶೆಟ್ಟರ್ ಹೀಗೇಕೆ ಮಾಡಿದರೋ ಗೊತ್ತಿಲ್ಲ ಎಂದು ಅವರು ಬೇಸರ ಹೊರಹಾಕಿದರು.

ಶೆಟ್ಟರ್ ಅವರು ಮರಳಿ ಬಿಜೆಪಿಗೆ ಹೋಗುತ್ತಾರೆಂದು ಸುದ್ದಿ ಮಾಧ್ಯಮಗಳಲ್ಲೇ ಬರುತ್ತಲೇ ಇತ್ತು. ಆದರೆ ನಾವು ಅದನ್ನು ನಂಬಿರಲಿಲ್ಲ. ಈಗ ಅವರು ನಮ್ಮ ಪಕ್ಷವನ್ನು ತೊರೆದಿರುವುದು ಆಶ್ಚರ್ಯಕರ ಮತ್ತು ಅನಿರೀಕ್ಷಿತ. ಲೋಕಸಭೆ ಚುನಾವಣೆಯಲ್ಲಿ ಲಿಂಗಾಯತರ ಮತಗಳ ಮೇಲೆ ಕಣ್ಣಿಟ್ಟುಕೊಂಡು ಬಿಜೆಪಿ ನಾಯಕರು ಹೀಗೆ ಗಾಳ ಹಾಕಿದ್ದಾರೆ ಎನಿಸುತ್ತದೆ ಎಂದು ಪಾಟೀಲ ವಿಶ್ಲೇಷಿಸಿದರು.

ಇದೇನೇ ಇದ್ದರೂ ಲೋಕಸಭೆ ಚುನಾವಣೆಯಲ್ಲಿ ನಾವು ಹೆಚ್ಚಿನ ಸೀಟುಗಳನ್ನು ಗೆಲ್ಲುತ್ತೇವೆ. ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಮತದಾರರಿಗೆ ಗೌರವವಿದೆ. ಶೆಟ್ಟರ್ ನಿರ್ಗಮನದ ಹಿನ್ನೆಲೆಯಲ್ಲಿ ಲಿಂಗಾಯತರನ್ನು ಡಿಸಿಎಂ ಮಾಡಬೇಕೋ, ಬೇಡವೋ ಎನ್ನುವ ಬಗ್ಗೆ ಹೈಕಮಾಂಡ್ ನಿರ್ಧರಿಸಲಿದೆ. ಈ ಬಗ್ಗೆ ಪಕ್ಷದ ನಾಯಕರಿಗೆ ಏನು ಹೇಳಬೇಕೋ ಅದನ್ನು ನಾನೂ ನಾಲ್ಕು ಗೋಡೆಗಳ ಮಧ್ಯೆ ಹೇಳಿದ್ದೇನೆ ಎಂದು ಅವರು ವಿವರಿಸಿದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ