LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀ ಅದಿಶಕ್ತಿ ದೇವಾಲಯ ಜೀರ್ಣೋದ್ಧಾರ ಪೂಜಾ ಕಾರ್ಯಕ್ರಮಕ್ಕೆ ಅದ್ದೂರಿ ಚಾಲನೆ

ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರ ಪಾಲಿಕೆಗಳ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ಸಹಾಯ, ಸಹಕಾರ ಮತ್ತು ಬೆಂಬಲಗಳಿಂದ ಜೀರ್ಣೋದ್ಧಾರಗೊಂಡಿರುವ ಏಳು ಸುತ್ತಿನಕೋಟೆ ಸಪ್ತಮಾತೃಕಾ ಸಹಿತ ಶ್ರೀ ಆದಿಶಕ್ತಿ ದೇವಾಲಯದ ಉದ್ಘಾಟನೆ ಮತ್ತು ದೇವತಾ ಪೂಜಾ ಕಾರ್ಯಕ್ರಮ ಮೂರು ದಿನಗಳ ಕಾಲ ಜರುಗುಲಿದೆ.

ಮೊದಲನೇ ದಿನದಲ್ಲಿ ನಾಡಿನ ಖ್ಯಾತ ಜ್ಯೋತಿಷಿಗಳು ಮತ್ತು ಆಗಮ ಶಾಸ್ತ್ರಜ್ಞರೂ ಆದ ಡಾ.ಭಾನು ಪ್ರಕಾಶ್ ಶರ್ಮಾ ಅವರ ನೇತೃತ್ವದಲ್ಲಿ ದೇವತಾ ಕಾರ್ಯಗಳು ಮತ್ತು ಪೂಜಾ ಕೈಂಕರ್ಯಗಳಾದ
ಗಣಪತಿಪೂಜೆ, ವಾಸ್ತು ಹೋಮ, ಪೂಜೆ, ಪುಣ್ಯಾಹ, ಪಂಚಗವ್ಯ, ರಾಕ್ಷೋಘ್ನ ಹೋಮ, ಅಗಮ ಪಂಡಿತರಿಂದ ಪೂಜಾ ಕಾರ್ಯ ಆರಂಭವಾಯಿತು.

ಜಿಬಿಎ-ಪಾಲಿಕೆಗಳ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಎ.ಅಮೃತ್ ರಾಜ್ ರವರು, ನೌಕರರ ಸಂಘ, ಸಹಕಾರ ಸಂಘದ ಪದಾಧಿಕಾರಿಗಳು ನೌಕರರು ಪೂಜಾ ಕಾರ್ಯದಲ್ಲಿ ಭಾಗವಹಿಸಿದ್ದರು.

ಸರಿ ಸಮಾರು 2ಕೋಟಿ ರೂಪಾಯಿ ವೆಚ್ಚದಲ್ಲಿ ನವೀಕರಣಗೊಂಡಿರುವ ದೇವಾಲಯವನ್ನು ಗುರುವಾರ ಬೆಳಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿರವರು ಉದ್ಘಾಟನೆ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಶಾಸಕರಾದ ರಿಜ್ವಾನ್ ಅರ್ಷದ್, ಮುಖ್ಯ ಆಯುಕ್ತರಾದ ಮಹೇಶ್ವರರಾವ್ ರವರು ಹಾಗೂ ಗಣ್ಯ ಮಹನೀಯರುಗಳು ಭಾಗವಹಿಸಲಿದ್ದಾರೆ.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ