LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಾನು ಹೇಳುವುದೆಲ್ಲ ಸತ್ಯ ಎನ್ನುವ ಸಿದ್ದರಾಮಯ್ಯ ಬರೀ ಸುಳ್ಳು ಹೇಳುತ್ತಿದ್ದಾರೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ಬಗ್ಗೆ ವಾಗ್ದಾಳಿ ನಡೆಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಕೇವಲ ಕೇಂದ್ರ ಸರ್ಕಾರವನ್ನು ನಿಂದನೆ ಮಾಡಿ ಮೆಚ್ಚುಗೆ ಪಡೆಯಲು ಹೊರಟಿದ್ದಾರೆ ಎಂದು ಕಿಡಿಕಾರಿದರು.

ಬಜೆಟ್ ವಿರುದ್ಧ ಬಿಜೆಪಿ ಜೆಡಿಎಸ್ ಪಕ್ಷಗಳು ಕೆಂಗಲ್ ಹನುಮಂತಯ್ಯ ಅವರ ಪ್ರತಿಮೆ ಬಳಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗಿಯಾಗಿ ಅವರು ಮಾತನಾಡಿದರು.

ರಾಜ್ಯದಲ್ಲಿ 15ನೇ ಬಜೆಟ್ ಮಂಡಿಸಿರುವ ದಾಖಲೆ ಬಗ್ಗೆ ಚರ್ಚೆ ಆಗುತ್ತಿದೆ. ದೇಶದಲ್ಲಿ ಅಮೃತಕಾಲದ ಬಗ್ಗೆ ಚರ್ಚೆ ನಡೆಯುತ್ತಿದೆ. ಸಿದ್ದರಾಮಯ್ಯ ಬಜೆಟ್ ನೋಡಿದರೆ ಅಮೃತಕಾಲ ಅಲ್ಲ, ವಿನಾಶಕಾಲಕ್ಕೆ ನಾಂದಿ ಆಗಿದೆ ಎನ್ನಬಹುದು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಬಜೆಟ್ ನಿಜಕ್ಕೂ ವಿನಾಶಕ್ಕೆ ದಾರಿ ಮಾಡಿಕೊಡುವ ಬಜೆಟ್ ಆಗಿದೆ. ಈಗಾಗಲೇ ಜಂಟಿ ಅಧಿವೇಶನದಲ್ಲಿ ಹಲವಾರು ಸುಳ್ಳುಗಳನ್ನು ರಾಜ್ಯಪಾಲರಿಂದ ಹೇಳಿಸಿದ್ದಾರೆ. ಬಜೆಟ್ ಕೂಡ ಸುಳ್ಳುಗಳಿಂದ ಕೂಡಿದೆ ಎಂದು ಅವರು ಆರೋಪ ಮಾಡಿದರು.

ಪರಿಷತ್ತಿನಲ್ಲಿ ಸಿದ್ದರಾಮಯ್ಯ ಅವರು ನಾನೇಳೋದೆಲ್ಲಾ ಸತ್ಯ ಅಂದಿದ್ದಾರೆ. ನೂರು ಬಾರಿ ಸುಳ್ಳು ಹೇಳಿ, ಅದನ್ನೇ ಸತ್ಯ ಮಾಡ್ತೀವಿ ಅಂತಾರೆ.. ಹಾಗೆ ಮಾಡಿದ್ದಾರೆ ಈ ಬಜೆಟ್ ನಲ್ಲಿ. ಪ್ರತಿ ವಿಷಯದಲ್ಲಿ, ಅದರಲ್ಲಿಯೂ ನೀರಾವರಿ ವಿಚಾರದಲ್ಲಿ ಕೇಂದ್ರದ ಮುಂದೆ ಹೋಗ್ತೀವಿ ಅಂತಾರೆ. ಅಭಿವೃದ್ಧಿ ವಿಚಾರಕ್ಕೂ ಕೇಂದ್ರದ ಮುಂದೆ ಹೋಗ್ತೀವಿ ಅಂತಾರೆ. ಹಾಗಂತ ಬಜೆಟ್ ನಲ್ಲಿ ಹೇಳಿಕೊಂಡಿದ್ದಾರೆ. ನೋಡಿದರೆ ಎಲ್ಲೆಡೆ ನಿಂದನೆ ಮಾಡಿದ್ದಾರೆ ಎಂದರು ಅವರು.

ಕಳೆದ ಮೂರು ವರ್ಷದ ಅವಧಿಯಲ್ಲಿ ಬಿಜೆಪಿ ಆಡಳಿತದಲ್ಲಿ ಯಾವ ಯೋಜನೆ ರೂಪಿಸಿದ್ದರು, ಅದೇ ಯೋಜನೆಯಗಳನ್ನೇ ಮತ್ತೆ ಉಲ್ಲೇಖ ಮಾಡಿದ್ದಾರೆ. ಇವರಲ್ಲಿ ಯಾವುದೇ ಹೊಸ ವಿಚಾರ, ಅಭಿವೃದ್ಧಿ ಯಾವುದೂ ಇಲ್ಲ. ಹಿಂದಿನ ಸರ್ಕಾರದ ಕಾರ್ಯಕ್ರಮ ಹೇಳಿಕೊಂಡಿದ್ದಾರೆ ವಿನಾ, ಯಾವುದೇ ಹೊಸ ವಿಚಾರ ಇಲ್ಲ ಎಂದು ಅವರು ಹೇಳಿದರು.

ತೆಲಂಗಾಣ, ಆಂಧ್ರದ ಜತೆ ಸಮಾಲೋಚನೆ ಮಾಡುತ್ತೇವೆ ಎಂದರು. ಇದುವರೆಗೆ ಯಾವುದೇ ಚರ್ಚೆಯೂ ಆಗಲಿಲ್ಲ. ಮೇಕೇದಾಟಿಗೆ ಪಾದಯಾತ್ರೆ ಮಾಡಿದ್ದೂ, ಮಾಡಿದ್ದೆ. ಅಧಿಕಾರಕ್ಕೆ ಬಂದರೂ ಏನೂ ಮಾಡಲಿಲ್ಲ. ತಪ್ಪು ಮಾಡಿರೋದು ಇವರು ಎಂದ ಅವರು, 15ನೇ ವೇತನ ಆಯೋಗದಲ್ಲಿ ರಾಜ್ಯಕ್ಕೆ 3 ಸಾವಿರ ಕೋಟಿ ರೂಪಾಯಿ ಅನುದಾನ ಇಟ್ಟಿದ್ದರೂ ಎನ್ನು ಕೊಡಲಿಲ್ಲ ಎಂದು ದೂರಿದ್ದಾರೆ ಎಂದು ಕುಮಾರಸ್ವಾಮಿ ಅವರು ದೂರಿದರು.

ಕೇಂದ್ರ ಸರಕಾರ ಹಣ ಕೊಡಲಿಲ್ಲ ಅಂತಾರೆ, ಹಾಗಾದರೆ ಇವರ ಕಾರ್ಯಕ್ರಮ ಏನು? ದಿನವೂ ಬೆಳಗ್ಗೆ ಪತ್ರಿಕೆ ತೆಗೆದರೆ ಐದು ಗ್ಯಾರಂಟಿ ಜತೆಗೆ ಇವರ ಮುಖವೂ ಇರಲೇಬೇಕು.ವಿನಾಶ ಕಾಲ ಏನಿದೆ, ಈ ಬಜೆಟ್‌ನಲ್ಲಿ ಇದೆ. 14 ಬಜೆಟ್ ಕೊಟ್ಟಿರುವ ಸಿದ್ದರಾಮಯ್ಯ ಅವರು 15ನೇ ಬಜೆಟ್ ನಲ್ಲಿ ಏನೂ ಕೊಟ್ಟಿಲ್ಲ. ಇದನ್ನು ನೋಡಿದರೆ ಸಿದ್ದರಾಮಯ್ಯ ಅವರ ಬಜೆಟ್ ಅಲ್ಲ, ಬೇರೆಯವರ ಬಜೆಟ್ ಅನ್ನೋದು ಸ್ಪಷ್ಟವಾಗಿದೆ ಎಂದು ಕುಮಾರಸ್ವಾಮಿ ಅವರು ಟೀಕಿಸಿದರು.

ಪ್ರತಿಭಟನೆಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಪ್ರತಿಪಕ್ಷ ನಾಯಕ ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ಶಾಸಕಾಂಗ ಪಕ್ಷ ಉಪ ನಾಯಕಿ ಶಾರದಾ ಪೂರ್ಯ ನಾಯಕ್ ಸೇರಿದಂತೆ ಜೆಡಿಎಸ್ ಪಕ್ಷದ ಶಾಸಕರೆಲ್ಲರೂ ಹಾಜರಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ