LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅರಣ್ಯ, ಕಂದಾಯ ಭೂಹಕ್ಕುಗಳಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರ

ಬೆಂಗಳೂರು: ಶರಾವತಿ ಹಾಗೂ ಇನ್ನಿತರೆ ಯೋಜನೆಗಳ ಮುಳುಗಡೆ ಸಂತ್ರಸ್ತರು ಮತ್ತು ಪಾರಂಪರಿಕ ಅರಣ್ಯ ವಾಸಿಗಳ ಅರಣ್ಯ ಹಾಗೂ ಕಂದಾಯ ಭೂ ಹಕ್ಕುಗಳಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ವಿಧಾನ ಸೌಧದಲ್ಲಿ ಮಹತ್ವದ ಸಭೆ ನಡೆಯಿತು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎಸ್. ಮಧು ಬಂಗಾರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಉನ್ನತ ಮಟ್ಟದ ಸಭೆಯಲ್ಲಿ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಗೋಪಾಲಕೃಷ್ಣ ಬೇಳೂರು, ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀಮತಿ ಶಾರದಾ ಪೂರ್ಯಾ ನಾಯಕ್, ವಿಧಾನ ಪರಿಷತ್ ಸದಸ್ಯರಾದ ಶ್ರೀಮತಿ ಬಲ್ಕೀಸ್ ಬಾನು, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿಗಳಾದ ಶ್ರೀ ಅಂಜುಂ ಪರ್ವೇಜ್ ಹಾಗೂ ಹಿರಿಯ ವಕೀಲರಾದ ಶ್ರೀ ರಮೇಶ್ ಹೆಗ್ಡೆ, ಶ್ರೀ ಜಯಂತ್, ಶ್ರೀ ಶೇಖರ್ ಸೇರಿದಂತೆ ಕಂದಾಯ ಹಾಗೂ ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳು ಭಾಗವಹಿಸಿದ್ದರು. ಶಿವಮೊಗ್ಗ ಜಿಲ್ಲಾಧಿಕಾರಿ ಶ್ರೀ ಗುರುದತ್ತ ಹೆಗಡೆ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಪಾಲ್ಗೊಂಡರು.

ಸಭೆಯಲ್ಲಿ ಪ್ರಮುಖವಾಗಿ ಶಿವಮೊಗ್ಗ ಜಿಲ್ಲೆಯಲ್ಲಿನ ಸೊಪ್ಪಿನ ಬೆಟ್ಟ ಹಾಗೂ ಕಾನು ಭೂಮಿಗಳ ಅನಧೀಕೃತ ಸಾಗುವಳಿ ಸಕ್ರಮಗೊಳಿಸುವಿಕೆ, ಹಂಗಾಮಿ ಮನೆದಳ ಪತ್ರಗಳನ್ನು ಖಾಯಂಗೊಳಿಸುವುದು, ಕಂದಾಯ ದಾಖಲೆಗಳಲ್ಲಿ ತಪ್ಪಾಗಿ ನಮೂದಿಸಲಾಗಿರುವ ಸೂಚಿತ ಅರಣ್ಯ (ಪಿಎಫ್) ಎಂಬ ಉಲ್ಲೇಖವನ್ನು ಕೈಬಿಡುವುದು, ಕರ್ನಾಟಕ ಅರಣ್ಯ ಕಾಯ್ದೆ 1963 ರ ಸೆಕ್ಷನ್ 4 ರ ಅಡಿಯಲ್ಲಿ ಮೀಸಲು ಅರಣ್ಯದ ಅಂತಿಮ ಅಧಿಸೂಚನೆಗೆ ಕಾಲಮಿತಿ ನಿಗದಿಪಡಿಸುವುದು ಮತ್ತು ಅನುಮೋದನೆ ನೀಡುವುದು, ಮೈಸೂರು ಸರ್ಕಾರದಿಂದ ನೀಡಲಾದ ಹಕ್ಕುಪತ್ರಗಳಿಗೆ ಇ-ಸ್ವತ್ತು ದಾಖಲೆ ಸೃಜಿಸುವುದು, ಸರ್ಕಾರದ ವಿವಿಧ ನೀರಾವರಿ ಹಾಗೂ ವಿದ್ಯುತ್ ಯೋಜನೆಗಳ ಮುಳುಗಡೆ ಸಂತ್ರಸ್ತರ ಪುನರ್ವಸತಿ ಜಮೀನುಗಳನ್ನು ಅರಣ್ಯ ಭೂಮಿ ಇಂಡೀಕರಣ ಪ್ರಸ್ತಾವನೆಯಿಂದ ಕೈಬಿಡುವುದು, 27.04.1978 ರ ಪೂರ್ವದ ಮೂರು ಎಕರೆ ಅರಣ್ಯ ಭೂಮಿಯನ್ನು ಸಕ್ರಮಗೊಳಿಸುವುದು ಮತ್ತು ಅರಣ್ಯ ಹಕ್ಕು ಮಾನ್ಯತಾ ಕಾಯ್ದೆ 2006 ರ ಅಡಿಯಲ್ಲಿ ಅರಣ್ಯ ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸುವ ವಿಷಯಗಳ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು.

ಜೊತೆಗೆ, ಶಿವಮೊಗ್ಗ ಜಿಲ್ಲೆಯ ವಿವಿಧ ತಾಲ್ಲೂಕುಗಳ ವ್ಯಾಪ್ತಿಯಲ್ಲಿನ ವಾರಾಹಿ, ಚಕ್ರ, ಸಾವೆಹಕ್ಲು, ಭದ್ರ, ತುಂಗ ಹಾಗೂ ಇನ್ನಿತರೆ ವಿದ್ಯುತ್ ಮತ್ತು ನೀರಾವರಿ ಯೋಜನೆಗಳ ಮುಳುಗಡೆ ಸಂತ್ರಸ್ತರ ಭೂ ಹಕ್ಕಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ 0.05 ಗುಂಟೆ ಒಳಗಿನ ವಿಸ್ತೀರ್ಣದ ರೆವಿನ್ಯೂ ನಿವೇಶನವನ್ನು ಭೂ ಪರಿವರ್ತನೆ ಮಾಡುವ ಕುರಿತು ಸಭೆಯಲ್ಲಿ ಗಮನ ಸೆಳೆಯಲಾಯಿತು.

ಈ ಎಲ್ಲಾ ವಿಚಾರಗಳ ಬಗ್ಗೆ ಸರ್ಕಾರವು ಅಗತ್ಯ ಕ್ರಮ ಕೈಗೊಂಡು, ಅರಣ್ಯ ಮತ್ತು ಕಂದಾಯ ಭೂ ಹಕ್ಕಿನ ಶಿವಮೊಗ್ಗ ಜಿಲ್ಲೆಯ ಮುಳುಗಡೆ ಸಂತ್ರಸ್ತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡುವಂತೆ ಸಚಿವರು ಮುಖ್ಯ ಕಾರ್ಯದರ್ಶಿಗಳ ಗಮನಕ್ಕೆ ತಂದರು.

ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಿದ್ದಾರೆ. ಈ ಮೂಲಕ ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಶಿವಮೊಗ್ಗ ಜಿಲ್ಲೆಯ ಮುಳುಗಡೆ ಸಂತ್ರಸ್ತರು ಹಾಗೂ ಅರಣ್ಯವಾಸಿಗಳ ಸಮಸ್ಯೆಗಳಿಗೆ ಶೀಘ್ರದಲ್ಲೇ ಪರಿಹಾರ ದೊರೆಯುವ ಆಶಾಭಾವನೆ ಮೂಡಿದೆ.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ