LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜಿಬಿಎ ವ್ಯಾಪ್ತಿಯಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿ : ವೆಂಕಟಾ ಚಲಪತಿ

ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು *ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾದ ವೆಂಕಟಾ ಚಲಪತಿ* ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.news_1782387665_1_528.webp

ನಗರದಲ್ಲಿ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನದ ಕುರಿತು ಇಂದು ವರ್ಚುವಲ್ ಮೂಲಕ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಜುಲೈ 28ರಿಂದ ಆಗಸ್ಟ್ 1ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಎಲ್ಲಾ ರೀತಿಯ ಸಿದ್ಧತೆಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

*ಪೋಲಿಯೋ ಬೂತ್‌ಗಳ ಸ್ಥಾಪನೆ:*

ಜಿಬಿಎ ವ್ಯಾಪ್ತಿಯ ಎಲ್ಲಾ ವಾರ್ಡ್‌ಗಳಲ್ಲಿ ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಲು ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ನಮ್ಮ ಕ್ಲಿನಿಕ್‌ಗಳು, ಹೆರಿಗೆ ಆಸ್ಪತ್ರೆಗಳು, ನಗರ ಕುಟುಂಬ ಕಲ್ಯಾಣ ಕೇಂದ್ರಗಳು, ಔಷಧಾಲಯಗಳು, ಅಂಗನವಾಡಿ ಕೇಂದ್ರಗಳು ಹಾಗೂ ಶಾಲೆಗಳಲ್ಲಿ ಪೋಲಿಯೋ ಬೂತ್‌ಗಳನ್ನು ಸ್ಥಾಪಿಸಲಾಗಿದೆ. ಅಲ್ಲದೆ, ಬಸ್ ನಿಲ್ದಾಣಗಳು, ರೈಲು ನಿಲ್ದಾಣಗಳು, ಸ್ವಯಂಸೇವಾ ಸಂಸ್ಥೆಗಳ ಆಸ್ಪತ್ರೆಗಳು, ಮಾಲ್‌ಗಳು, ಖಾಸಗಿ ನರ್ಸಿಂಗ್ ಹೋಮ್‌ಗಳು, ವೈದ್ಯಕೀಯ ಮಹಾವಿದ್ಯಾಲಯಗಳು, ಪ್ರಮುಖ ಉದ್ಯಾನವನಗಳು, ಮೆಟ್ರೋ ನಿಲ್ದಾಣಗಳು ಹಾಗೂ ಕೊಳಚೆ ಪ್ರದೇಶಗಳಂತಹ ಜನನಿಬಿಡ ಸ್ಥಳಗಳಲ್ಲಿ ಸ್ಥಿರ ಹಾಗೂ ಸಂಚಾರಿ ತಂಡಗಳನ್ನು ನಿಯೋಜಿಸಲಾಗಿದೆ.

ಈ ಬೂತ್‌ಗಳ ಮೇಲ್ವಿಚಾರಣೆಗಾಗಿ ಪ್ರಾಧಿಕಾರದ ಆರೋಗ್ಯಾಧಿಕಾರಿಗಳು, ಉಪ ಆರೋಗ್ಯಾಧಿಕಾರಿಗಳು ಹಾಗೂ ಆರೋಗ್ಯ ವೈದ್ಯಾಧಿಕಾರಿಗಳನ್ನು ನೋಡಲ್ ಅಧಿಕಾರಿಗಳಾಗಿ ನೇಮಿಸಲಾಗಿದೆ.

*ಹತ್ತಿರದ ಪೋಲಿಯೋ ಬೂತ್‌ಗೆ ಭೇಟಿ ನೀಡಿ:*

ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳಲ್ಲಿ ಪೋಷಕರು ತಮ್ಮ ಮಕ್ಕಳನ್ನು ಹತ್ತಿರದ ಪೋಲಿಯೋ ಬೂತ್‌ಗಳಿಗೆ ಸುಲಭವಾಗಿ ತರಳಲು ಅನುಕೂಲವಾಗುವಂತೆ ಬೂತ್‌ಗಳ ಸ್ಥಳಗಳನ್ನು https://gba.karnataka.gov.in/polio/ ಮ್ಯಾಪಿಂಗ್ ಮಾಡಲಾಗಿದೆ. ಸಾರ್ವಜನಿಕರು ತಮ್ಮ ಸಮೀಪದ ಬೂತ್‌ಗೆ ಭೇಟಿ ನೀಡಿ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ಮನವಿ ಮಾಡಿದರು.

*ಪೋಲಿಯೋ ಮುಕ್ತ ನಗರ ನಿರ್ಮಾಣಕ್ಕೆ ಕೈಜೋಡಿಸಿ:*

ಸಾರ್ವಜನಿಕರು ತಮ್ಮ ಮಕ್ಕಳಿಗೆ ಈ ಹಿಂದೆ ಎಷ್ಟೇ ಬಾರಿ ಪೋಲಿಯೋ ಹನಿ ಹಾಕಿಸಿದ್ದರೂ ಸಹ, ಕಾರ್ಯಕ್ರಮದ ದಿನದಂದು 5 ವರ್ಷದೊಳಗಿನ ಎಲ್ಲಾ ಮಕ್ಕಳನ್ನು ಸಮೀಪದ ಬೂತ್‌ಗೆ ಕರೆತಂದು ಎರಡು ಹನಿ ಪೋಲಿಯೋ ಲಸಿಕೆ ಹಾಕಿಸಬೇಕು. ಪೋಲಿಯೋ ಮುಕ್ತ ನಗರ ಹಾಗೂ ಪೋಲಿಯೋ ಮುಕ್ತ ವಿಶ್ವ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಪಾಲಿಕೆಯು ಮನವಿ ಮಾಡಿದೆ.

*ಜಿಬಿಎ ವ್ಯಾಪ್ತಿಯಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ವಿವರ:*

• ಒಟ್ಟು ಜನಸಂಖ್ಯೆ : 1,23,13,207
• ಒಟ್ಟು ಮನೆಗಳು : 29,30,605
• 0-5 ವರ್ಷದ ಮಕ್ಕಳ ಸಂಖ್ಯೆ : 11,47,872
• ಕೊಳಚೆ ಪ್ರದೇಶಗಳ ಸಂಖ್ಯೆ : 1,417
• ವಲಸೆ ಜನಾಂಗದ ಪ್ರದೇಶಗಳ ಸಂಖ್ಯೆ : 4,382
• ವಲಸೆ ಜನಸಂಖ್ಯೆ : 1,57,372
• ವಲಸೆ ಜನಾಂಗದ 0-5 ವರ್ಷದ ಮಕ್ಕಳ ಸಂಖ್ಯೆ : 10,747
• ಬೂತ್‌ಗಳ ಸಂಖ್ಯೆ : 3,444
• ಸ್ಥಿರ ತಂಡಗಳ ಸಂಖ್ಯೆ : 660
• ಸಂಚಾರಿ ತಂಡಗಳ ಸಂಖ್ಯೆ : 435
• ಒಟ್ಟು ಲಸಿಕಾ ಕಾರ್ಯಕರ್ತರು : 15,964
• ಒಟ್ಟು ಮೇಲ್ವಿಚಾರಕರು : 817

ಸಭೆಯಲ್ಲಿ ಮುಖ್ಯ ಆರೋಗ್ಯಾಧಿಕಾರಿ ಡಾ. ಎಸ್.ಎಸ್. ಮದನಿ, ನಗರ ಪಾಲಿಕೆಗಳ ಆರೋಗ್ಯಾಧಿಕಾರಿಗಳು, ಆರೋಗ್ಯ ವೈದ್ಯಾಧಿಕಾರಿಗಳು ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಬಿಎ ವ್ಯಾಪ್ತಿಯಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿ : ವೆಂಕಟಾ ಚಲಪತಿನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಗೊಂದಲ, ವಿಪಕ್ಷಗಳಿಗೆ ಕಾರವಾಗಿಯೇ ಉತ್ತರದೇವನಹಳ್ಳಿ ಭೂಸ್ವಾಧೀನ: ಎಕರೆಗೆ ₹2.70 ಕೋಟಿ ಪರಿಹಾರಕ್ಕೆ ಶಿಫಾರಸುTB ಡ್ಯಾಂ ಗೆ ಕ್ರಸ್ಟಿಗೆ ಅಳವಡಿಕೆ ನೀರು ಪೋಲಾಗುವುದನ್ನು ತಡೆಗಟ್ಟ ಅಧಿಕಾರಿವರ್ಗರಸ್ತೆ ಡಾಂಬರಿಕರಣದ ಗುಣಮಟ್ಟ ಕಾಯ್ದುಕೊಂಡು ಕಾಮಗಾರಿ ನಿರ್ವಹಿಸಿ:  ವೆಂಕಟಾಚಲಪತಿಜುಲೈ 1 ರಿಂದ “ಸುರಕ್ಷಿತ ಪಾದಚಾರಿ ಮಾರ್ಗ ಅಭಿಯಾನ” ಆರಂಭ : ಕೃಷ್ಣ ಬೈರೇಗೌಡದೇಶಿಯ ಉಕ್ಕು ಉದ್ಯಮಕ್ಕೆ ಡಿಜಿಟಲ್ ಸ್ಪರ್ಶ; ವಾರ್ಷಿಕ 400 ದಶಲಕ್ಷ ಟನ್ ಉತ್ಪಾದನೆಯತ್ತ ಭಾರತಮಾವು ಬೆಳೆಗಾರರ ಸಂಕಷ್ಟ; ಕೇಂದ್ರದ ಕೃಷಿ ಸಚಿವರನ್ನು ಭೇಟಿಯಾದ ಹೆಚ್.ಡಿ.ಕುಮಾರಸ್ವಾಮಿಆಡುಗೋಡಿಯ ಸರ್ಕಾರಿ ಮಾದರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕಿಟ್ ವಿತರಣೆಪೋಸ್ಟರ್ ಅಭಿಯಾನ ನಮಗೂ ಬರುತ್ತೆ, ಪುಂಡಪೋಕರಿಗಳ ಪೋಸ್ಟರ್‌ಗಳಿಗೆ ನಾನು ಉತ್ತರಿಸಲ್ಲ