LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸ್ವಚ್ಛ ಸರ್ವೇಕ್ಷಣ 2025-26 ರ ವಿಶೇಷ: ಉದ್ಯಾನವನ ಆಟದ ಮೈದಾನ ಸ್ವಚ್ಛ

ಬೆಂಗಳೂರು: ಸ್ವಚ್ಛ ಸರ್ವೇಕ್ಷಣ 2025-26 ರ ವಿಶೇಷ ಸ್ವಚ್ಛತಾ ಅಭಿಯಾನದ ಅಂಗವಾಗಿ 38 ಉದ್ಯಾನವನ ಹಾಗೂ 11 ಆಟದ ಮೈದಾನಗಳ ಸ್ವಚ್ಛತೆ ಮಾಡಲಾಗಿದೆ ಎಂದು ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ತಿಳಿಸಿದರು.

*ನಾಗರೀಕರು, ವಯೋವೃದ್ಧರು, ಮಕ್ಕಳು, ಮಹಿಳೆಯರು ವಾಯುವಿಹಾರಕ್ಕೆ, ನಡಿಗೆಗೆ, ಹಾಗೂ ವಿಶ್ರಾಂತಿಗಾಗಿ ನೈರ್ಮಲ್ಯಕರ ಸ್ಥಳವಾಗಿ ಮಾರ್ಪಾಡಿಗಾಗಿ ಪಾರ್ಕ್ ಗಳ ಸ್ವಚ್ಛತೆ*

*ಮಕ್ಕಳು, ಕ್ರೀಡಾರ್ಥಿಗಳ ಆಟೋಟಕ್ಕೆ ಅನುಕೂಲಕರ ಹಾಗೂ ನೈರ್ಮಲ್ಯ ವಾತಾವರಣ ಸಲುವಾಗಿ ಮೈದಾನಗಳ ಶುಚಿಗೊಳಿಸಲಾಗಿದೆ*

ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡುವುದು ಹಾಗೂ ತ್ಯಾಜ್ಯಮುಕ್ತ ನಗರಪಾಲಿಕೆ ರೂಪಿಸಲು ಹಾಗೂ ಸ್ವಚ್ಛ ಸರ್ವೇಕ್ಷಣ 2025-26 ರ ಶ್ರೇಯಾಂಕ ಪಟ್ಟಿಯಲ್ಲಿ ರಾಷ್ಟ್ರ ಮಟ್ಟದಲ್ಲಿ ಉತ್ತಮ ಸ್ಥಾನ ಗಳಿಸಬೇಕಾಗಿದ್ದು, ಬೆಂಗಳೂರು ಕೇಂದ್ರ ನಗರ ಪಾಲಿಕೆ ವತಿಯಿಂದ ವಿಶೇಷ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಈಗಾಗಲೇ ರೂಪಿಸಲಾಗಿರುವ ಕಾರ್ಯಯೋಜನೆಯ (ಆ್ಯಕ್ಷನ್ ಪ್ಲಾನ್ನ) 2ನೇ ಭಾಗವಾಗಿ ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛ ಸರ್ವೇಕ್ಷಣ 2025-26 ರ *ವಿಶೇಷ ಸ್ವಚ್ಛತಾ ಅಭಿಯಾನದ ಅಂಗವಾಗಿ 38 ಉದ್ಯಾನವನ ಹಾಗೂ 11 ಆಟದ ಮೈದಾನಗಳ ಸ್ವಚ್ಛತೆ ಮಾಡಲಾಗಿದೆ ಎಂದು ಆಯುಕ್ತರಾದ ರಾಜೇಂದ್ರ ಚೋಳನ್* ರವರು ತಿಳಿಸಿದ್ದಾರೆ.

 ಕ್ಷೇತ್ರವಾರು ಶುಚಿಗೊಳಿಸಲಾದ ಪಾರ್ಕ್ ಗಳ ಸಂಖ್ಯೆ ವಿವರ:*


1) ಶಾಂತಿನಗರ ಕ್ಷೇತ್ರದ ವ್ಯಾಪ್ತಿಯಲ್ಲಿ 3
2) ಸಿ. ವಿ. ರಾಮನ್ ನಗರ ಕ್ಷೇತ್ರದ ವ್ಯಾಪ್ತಿಯಲ್ಲಿ- 14
3) ಗಾಂಧಿನಗರ ಕ್ಷೇತ್ರದ ವ್ಯಾಪ್ತಿಯಲ್ಲಿ-5
4) ಚಾಮರಾಜಪೇಟೆ ಕ್ಷೇತ್ರದ ವ್ಯಾಪ್ತಿಯಲ್ಲಿ-5
5) ಚಿಕ್ಕಪೇಟೆ ಕ್ಷೇತ್ರದ ವ್ಯಾಪ್ತಿಯಲ್ಲಿ-7,
6) ಶಿವಾಜಿನಗರ ಕ್ಷೇತ್ರದ ವ್ಯಾಪ್ತಿಯಲ್ಲಿ-5
-----------------------------------------
*ಒಟ್ಟು 38 ಪಾರ್ಕ್ ಗಳ ಸ್ವಚ್ಛತೆ ಮಾಡಲಾಗಿದೆ*

*ವಿಧಾನಸಭಾ ಕ್ಷೇತ್ರವಾರು ಶುಚಿಗೊಳಿಸಲಾದ ಆಟದ ಮೈದಾನಗಳ ಸಂಖ್ಯೆ ವಿವರ:*


1) ಶಾಂತಿನಗರ ಕ್ಷೇತ್ರದ ವ್ಯಾಪ್ತಿಯಲ್ಲಿ-7
2) ಗಾಂಧಿನಗರ ಕ್ಷೇತ್ರದ ವ್ಯಾಪ್ತಿಯಲ್ಲಿ-1
3) ಚಾಮರಾಜಪೇಟೆ ಕ್ಷೇತ್ರದ ವ್ಯಾಪ್ತಿಯಲ್ಲಿ-1
4) ಶಿವಾಜಿನಗರ ಕ್ಷೇತ್ರದ ವ್ಯಾಪ್ತಿಯಲ್ಲಿ-2
-----------------------------------------
*ಒಟ್ಟು 11 ಆಟದ ಮೈದಾನಗಳ ಸ್ವಚ್ಛತೆ ಮಾಡಲಾಗಿದೆ*

ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿನ ನಾಗರೀಕರು, ವಯೋವೃದ್ಧರು, ಮಕ್ಕಳು, ಮಹಿಳೆಯರು ವಾಯುವಿಹಾರಕ್ಕೆ, ನಡಿಗೆಗೆ ಉದ್ಯಾನವನಗಳಿಗೆ ಹೆಚ್ಚಾಗಿ ಬೆಳಿಗ್ಗೆ ಮತ್ತು ಸಂಜೆ ಸಮಯದಲ್ಲಿ ಹೋಗುತ್ತಾರೆ. ಉದ್ಯಾನವನದಲ್ಲಿ ಸ್ವಚ್ಛತೆ ಹಾಗೂ ಉತ್ತಮ ವಾತಾವರಣ ನಿರ್ಮಿಸಿ, ವಿಶ್ರಾಂತಿಗಾಗಿ ಕುಳಿತುಕೊಳ್ಳಲು ಆಸನಗಳ ಸ್ವಚ್ಛತೆ ಕಾಪಾಡುವುದು ಅಗತ್ಯವಿದೆ. ಈ ನಿಟ್ಟಿನಲ್ಲಿ *ಸ್ವಚ್ಛತಾ ಅಭಿಯಾನದ 2ನೇ ಭಾಗವಾಗಿ ಪಾರ್ಕ್ ಗಳನ್ನು ಆಯ್ಕೆ ಮಾಡಿಕೊಂಡು ಒಟ್ಟು 38 ಪಾರ್ಕ್ ಗಳನ್ನು ಸ್ವಚ್ಛಗೊಳಿಸಲಾಗಿದೆ* ಎಂದು ಆಯುಕ್ತರಾದ ರಾಜೇಂದ್ರ ಚೋಳನ್ ರವರು ತಿಳಿಸಿದ್ದಾರೆ.

ಅದೇ ರೀತಿಯಲ್ಲಿ *ಮಕ್ಕಳು, ಕ್ರೀಡಾರ್ಥಿಗಳ ಆಟದ ಮೈದಾನಗಳಿಗೆ ಆಟೋಟಕ್ಕಾಗಿ ಅನುಕೂಲಕರ ವಾತಾವರಣ ಹಾಗೂ ನೈರ್ಮಲ್ಯ ಕಾಪಾಡುವ ಸಲುವಾಗಿ ಮೈದಾನಗಳನ್ನು ಸ್ವಚ್ಛಗೊಳಿಸಲು ಯೋಜನೆ ರೂಪಿಸಿ ಶುಚಿಗೊಳಿಸಲಾಗಿದೆ* ಎಂದು ಆಯುಕ್ತರು ತಿಳಿಸಿದ್ದಾರೆ.

ಅಭಿವೃದ್ಧಿ ಅಪರ ಆಯುಕ್ತರಾದ ದಲ್ಜಿತ್ ಕುಮಾರ್ ರವರ ಮೇಲುಸ್ತುವಾರಿಯಲ್ಲಿ ನಡೆದ ಈ ಸ್ವಚ್ಛತಾ ಅಭಿಯಾನದಲ್ಲಿ ಡಿಜಿಎಂ ಭೀಮೇಶ್ ನಾಯಕ್, ಆಯಾಯ ವಿಭಾಗಗಳ ಎಜಿಎಂ ಗಳು, ಪೌರಕಾರ್ಮಿಕರು, ಆಟೋ ಟಿಪ್ಪರ್ ಸಿಬ್ಬಂದಿಗಳು ಭಾಗಿಯಾಗಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ