LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರು ನಗರ ಸ್ವಚ್ಛತೆ ಹೆಚ್ಚಿನ ಕಾಳಜಿ ವಹಿಸಿ: ಜಗದೀಶ್ ಜಿ

ಬೆಂಗಳೂರು : ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ಶ್ರೀ ಜಗದೀಶ್ ಜಿ ರವರು  ಕೇಂದ್ರ ನಗರ ಪಾಲಿಕೆಯ ಚಿಕ್ಕಪೇಟೆ ವಿಭಾಗದ ಪೌರಕಾರ್ಮಿಕರ ಮಸ್ಟರಿಂಗ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.news_1781980013_1_759.webp

ವೇಳೆ ಮಾತನಾಡಿದ ಅವರು  ವಾರ್ಡ್-118ರ ಚಿಕ್ಕಪೇಟೆ ವಿಭಾಗದ ಮಸ್ಟರಿಂಗ್ ಪಾಯಿಂಟ್‌ಗೆ ಭೇಟಿ ಹಾಗೂ ಪರಿಶೀಲನೆ ನಡೆಸಿ ಪ್ರತಿನಿತ್ಯ  ಬೆಂಗಳೂರು ನಗರ ಸ್ವಚ್ಛತೆಗೆ ಪೌರಕಾರ್ಮಿಕರು ಶ್ರಮಿಸುತ್ತಿದ್ದು, ಇನ್ನೂ ಹೆಚ್ಚಿನ ಮುತುವರ್ಜಿಯಿಂದ ಸ್ವಚ್ಛತೆಯ* ಕೆಲಸ ನಿರ್ವಹಿಸಲು ಸ್ವಚ್ಛತಾ ಸಿಬ್ಬಂದಿಗಳಿಗೆ ಸೂಚನೆ ನೀಡಿದರು. 

*ಪೌರಕಾರ್ಮಿಕರೊಂದಿಗೆ ಸಂವಾದ*

ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಮಾನ್ಯ ಆಯುಕ್ತರು  ಪರಿಶೀಲನೆ ವೇಳೆ ಪೌರಕಾರ್ಮಿಕರೊಂದಿಗೆ ನೇರವಾಗಿ ಸಂವಾದ ನಡೆಸಿ, ಅವರ ದಿನನಿತ್ಯದ ಕಾರ್ಯನಿರ್ವಹಣೆ, ಕೆಲಸದ ಪರಿಸ್ಥಿತಿಗಳು ಹಾಗೂ ಸ್ಥಳದಲ್ಲಿನ ಸೌಲಭ್ಯಗಳ ಕುರಿತು ಮಾಹಿತಿ ಪಡೆದರು. ಸಾರ್ವಜನಿಕ ಸ್ವಚ್ಛತಾ ಸೇವೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಲು ಸಮನ್ವಯ ಮತ್ತು ಶಿಸ್ತಿನೊಂದಿಗೆ ಕಾರ್ಯನಿರ್ವಹಿಸುವಂತೆ ಸಿಬ್ಬಂದಿಗೆ ಸೂಚಿಸಿದರು.

*ಸುರಕ್ಷತಾ ಪರಿಕರಗಳು ಮತ್ತು ಹಾಜರಾತಿ ವ್ಯವಸ್ಥೆ ಪರಿಶೀಲನೆ*

ಪೌರಕಾರ್ಮಿಕರು ಸಮವಸ್ತ್ರ, ಕೈ ಗವಸು ಸೇರಿದಂತೆ ಅಗತ್ಯ ಸುರಕ್ಷತಾ ಪರಿಕರಗಳನ್ನು ಕಡ್ಡಾಯವಾಗಿ ಬಳಸುತ್ತಿರುವ ಬಗ್ಗೆ ಆಯುಕ್ತರು ಪರಿಶೀಲನೆ ನಡೆಸಿದರ ಜೊತೆಗೆ ಬಯೋಮೆಟ್ರಿಕ್ ಸೇರಿದಂತೆ ಹಾಜರಾತಿ ದಾಖಲಿಸುವ ವ್ಯವಸ್ಥೆ ಹಾಗೂ ಸಂಬಂಧಿತ ದಾಖಲೆಗಳ ನಿರ್ವಹಣೆಯನ್ನು ಪರಿಶೀಲಿಸಿದರು.  

*ಸುವಿಧಾ ಕ್ಯಾಬಿನ್ ಮತ್ತು ಸಿಬ್ಬಂದಿ ಸೌಲಭ್ಯಗಳಿಗೆ ಮೆಚ್ಚುಗೆ*

ನಗರದ ಸರ್.ಪುಟ್ಟಣ್ಣ ಚೆಟ್ಟಿ ಪುರಭವನ (ಟೌನ್ ಹಾಲ್) ಬಳಿ ಸ್ವಚ್ಛತಾ ಸಿಬ್ಬಂದಿಗಳಿಗಾಗಿ ನಿರ್ಮಿಸಲಾಗಿರುವ *ಸುವಿಧಾ ಕ್ಯಾಬಿನ್* ನಲ್ಲಿ ಬಟ್ಟೆ ಬದಲಾಯಿಸುವ ಕೊಠಡಿ (Changing Room), ಶೌಚಾಲಯ ಸೇರಿದಂತೆ ವಿವಿಧ ಮೂಲಭೂತ ಸೌಲಭ್ಯಗಳನ್ನು ವೀಕ್ಷಿಸಿದ ಆಯುಕ್ತರು, ಅವುಗಳ ಸ್ವಚ್ಛತೆ ಹಾಗೂ ನಿರ್ವಹಣೆಯನ್ನು ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು. news_1781980013_2_519.webp

*ಕಾರ್ಯವಿಧಾನ ಮತ್ತು ಸಿಬ್ಬಂದಿಯ ಜವಾಬ್ದಾರಿಗಳ ಕುರಿತು ಮಾಹಿತಿ ಪಡೆದರು*

ಕಾರ್ಯನಿರ್ವಹಿಸುವ ಸ್ವಚ್ಛತಾ ಸಿಬ್ಬಂದಿಯ ಹಾಗೂ ಕಿರಿಯ ಆರೋಗ್ಯ ಪರಿವೀಕ್ಷಕರ (JHI) ರವರ ದಿನನಿತ್ಯದ ಕಾರ್ಯವೈಖರಿ, ವಿಭಾಗವಾರು ಮೇಲ್ವಿಚಾರಣೆ ಹಾಗೂ ಬೆಂಬಲ ವ್ಯವಸ್ಥೆಗಳ ಕುರಿತು ಆಯುಕ್ತರು ಅಧಿಕಾರಿಗಳಿಂದ ಮಾಹಿತಿ ಪಡೆದರು. ಪ್ರತಿ ಸಿಬ್ಬಂದಿಯು ತನ್ನ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಸೂಚನೆ ನೀಡಿದರು.

*ಕ್ಯೂಆರ್ ಕೋಡ್ ಆಧಾರಿತ ವಾಹನ ಮೇಲ್ವಿಚಾರಣೆ/ ಪರಿಶೀಲನೆ*

ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿ ಪ್ರದೇಶಗಳಲ್ಲಿ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಅಳವಡಿಸಲಾಗಿರುವ ಕ್ಯೂಆರ್ (QR) ಕೋಡ್ ವ್ಯವಸ್ಥೆ ಬಗ್ಗೆ ಆಯುಕ್ತರು ಗಮನಿಸಿ ಮೊಬೈಲ್ ಆಧಾರಿತ ಸ್ಕ್ಯಾನಿಂಗ್ ಮೂಲಕ ವಾಹನಗಳ ಕಾರ್ಯಾಚರಣೆಯನ್ನು ಮೇಲ್ವಿಚಾರಣೆ ನಡೆಸಿ, ನಿಗದಿತ ಅವಧಿಯಲ್ಲಿ ವಾಹನಗಳ ಸಂಚಾರ ಮತ್ತು ಕಾರ್ಯನಿರ್ವಹಣೆಯನ್ನು ಪರಿಣಾಮಕಾರಿಯಾಗಿ ನಡೆಸುವಂತೆ ಸೂಚಿಸಿದರು.

*ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಪರಿಶೀಲನೆ*

ಸ್ವಚ್ಛತಾ ಸಿಬ್ಬಂದಿಯ ಹಾಜರಾತಿ ದಾಖಲಿಸಲು ಬಳಸಲಾಗುತ್ತಿರುವ ಬಯೋಮೆಟ್ರಿಕ್ ವ್ಯವಸ್ಥೆಯನ್ನು ಆಯುಕ್ತರು ಪರಿಶೀಲಿಸಿ ಬೆರಳಚ್ಚು ಅಥವಾ ಮುಖ ಗುರುತಿಸುವ (Face Recognition) ತಂತ್ರಜ್ಞಾನದ ಮೂಲಕ ಹಾಜರಾತಿ ದಾಖಲಿಸುವ ವ್ಯವಸ್ಥೆಯ ಮಾಹಿತಿಯನ್ನು ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದರು. 

*ಕಾರ್ಯನಿರ್ವಹಣೆಗೆ ಸಕಾರಾತ್ಮಕ ಪ್ರತಿಕ್ರಿಯೆ*

ಒಟ್ಟಾರೆ ಪರಿಶೀಲನೆಯ ನಂತರ ಸ್ಥಳದಲ್ಲಿನ ವ್ಯವಸ್ಥೆಗಳು, ಸಿಬ್ಬಂದಿಯ ಕಾರ್ಯನಿಷ್ಠೆ ಹಾಗೂ ನಿರ್ವಹಣಾ ಕ್ರಮಗಳ ಬಗ್ಗೆ ಆಯುಕ್ತರು ಸಕಾರಾತ್ಮಕ ಅಭಿಪ್ರಾಯ ವ್ಯಕ್ತಪಡಿಸಿ, ಇದೇ ರೀತಿಯ ಗುಣಮಟ್ಟ ಮತ್ತು ಶಿಸ್ತನ್ನು ಮುಂದುವರಿಸಿಕೊಂಡು ಸಾರ್ವಜನಿಕ ಸೇವೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸುವಂತೆ ಸೂಚಿಸಿದರು.

 ಈ ಸಂದರ್ಭದಲ್ಲಿ  ಡಿಜಿಎಂ ಭೀಮೇಶ್ ನಾಯಕ್, ಮಾರ್ಷಲ್ ಸೂಪರ್ವೈಸರ್, ಮಾರ್ಷಲ್ ಗಳು,  ಕಿರಿಯ ಆರೋಗ್ಯ ಪರಿವೀಕ್ಷಕರುಗಳು (JHI), ಹಾಗೂ ಪೌರಕಾರ್ಮಿಕರು ಹಾಜರಿದ್ದರು.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
 ಖೋಪೋಲಿಯಲ್ಲಿ ಅಕ್ಟೋಬರ್ 30 ರಿಂದ ಭಾರತೀಯ ಶಾಲೆಗಳ ಶಿಕ್ಷಣ ಶೃಂಗಸಭೆಹಿಲ್ಟನ್ ಗಾರ್ಡನ್ ಇನ್ ಬೆಂಗಳೂರು ಎಂಬಸಿ ಟೆಕ್‌ವಿಲ್ಲಾದಿಂದ ದೇಸಿ ಕ್ವೋಶೆಂಟ್‌ಗೆ ಚಾಲನೆಏಸರ್‌ನಿಂದ CSR ನ ಅಡಿಯಲ್ಲಿ  ನೇತ್ರದೀಪ್ ಕಣ್ಣಿನ ಆರೈಕೆ ಕೇಂದ್ರ ಆರಂಭಕಲೀಲಾ ಚಿತ್ರದ ಮುಹೂರ್ತ ಪಂಚಮುಖಿ ಗಣೇಶ ದೇವಾಲಯದಲ್ಲಿ ಚಾಲನೆವಿದ್ಯಾರ್ಥಿಗಳು ವೃತ್ತಿ ಜೊತೆಗೆ ಪ್ರವೃತ್ತಿಯಲ್ಲೂ ಹೆಚ್ಚು ಗಮನ ಹರಿಸಬೇಕು: ಡಾ. ಚಂದ್ರ ಮೌಳಿ ಗಡ್ಡ ಮನಗೂನಗರದ ರಸ್ತೆ ಸಮಸ್ಯೆಗಳ ಪತ್ತೆಗೆ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ತಂತ್ರಜ್ಞಾನ ಬಳಕೆ : ಆಯುಕ್ತ ಕೆ. ಎನ್. ರಮೇಶ್ಪ್ರತಿ 10 ಭಾರತೀಯ ಮಕ್ಕಳಲ್ಲಿ ಕೇವಲ ಮೂವರಿಗೆ ಮಾತ್ರ ಹೊಂದಾಣಿಕೆಯಾಗುವ ಮೂಳೆ ಮಜ್ಜೆ ದಾನಿ ಲಭ್ಯಕುಮಾರಣ್ಣ ಬಾಂಬು ಹಾಕುವ ಟೈಮು ಬಂದೇಬಿಡ್ತಾ?ಶಿಕ್ಷಕರಿಂದಾಗಿಯೇ ರಾಜ್ಯದ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ: ಸಚಿವ ಮಧು ಬಂಗಾರಪ್ಪ ಬಣ್ಣನೆಕಳಂಕಿತ ಪಶುವೈದ್ಯಾಧಿಕಾರಿ ಮೇಲೆ ಕ್ರಮ ಕೈಕೊಂಡು,ಅಕಳಂಕಿತರಿಗೆ ನ್ಯಾಯ ನೀಡಿ: ಡಾ.ಹನುಮಂತಪ್ಪ