LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತಮಿಳುನಾಡಿಗೆ ಬಿಡುವಷ್ಟು  ಕಾವೇರಿ‌ ನೀರಿಲ್ಲ: ಎಂ ಬಿ ಪಾಟೀಲ

ಬೆಂಗಳೂರು: ರಾಜ್ಯದ ಕಾವೇರಿ ಜಲಾನಯನ ಪ್ರದೇಶದಲ್ಲಿ ಈ ವರ್ಷ ಒಳ್ಳೆಯ ಮಳೆಯೇ ಆಗಿಲ್ಲ. ಹೀಗಾಗಿ ಈ ವ್ಯಾಪ್ತಿಯ ಜಲಾಶಯಗಳಲ್ಲಿ ನೀರಿಲ್ಲ. ಹೀಗಿರುವಾಗ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ 4.50 ಟಿಎಂಸಿ ನೀರು ಹರಿಸುವಂತೆ ರಾಜ್ಯಕ್ಕೆ ಹೇಳಿರುವುದು ಸರಿಯಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.news_1785414081_0_547.webp

ಬುಧವಾರ ಇಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಅವರು ಉತ್ತರಿಸಿದ್ದಾರೆ.

ಚೆನ್ನಾಗಿ ಮಳೆಯಾದರೆ ಕಾವೇರಿ ನೀರಿನ ಹಂಚಿಕೆಯಲ್ಲಿ ಯಾವ ಸಮಸ್ಯೆಯೂ ಬರುವುದಿಲ್ಲ. ಅಂತಹ ವರ್ಷಗಳಲ್ಲಿ ನಾವು ನಿಗದಿತ 177 ಟಿಎಂಸಿಗಿಂತ ಹೆಚ್ಚು ನೀರನ್ನೇ ತಮಿಳುನಾಡಿಗೆ ಹರಿಸುತ್ತಿದ್ದೇವೆ. ಆದರೆ ಬರಗಾಲ ಬಂದಾಗ ಯಾವ ಸಂಕಷ್ಟ ಸೂತ್ರವೂ‌ ಇಲ್ಲ. ಇದಕ್ಕೆಲ್ಲ ಮೇಕೆದಾಟು ಜಲಾಶಯ ನಿರ್ಮಾಣವೇ ಉತ್ತರ ಎಂದು ಅವರು ಪ್ರತಿಪಾದಿಸಿದ್ದಾರೆ.

ಕಾವೇರಿ ನೀರು ಹಂಚಿಕೆಯ ಅಂತಿಮ ತೀರ್ಪಿನಲ್ಲಿ ನಮಗೆ  ಹೆಚ್ಚುವರಿಯಾಗಿ ಸಿಕ್ಕಿದ 14 ಟಿಎಂಸಿ ನೀರೂ ಸೇರಿ ಒಟ್ಟು 65 ಟಿಎಂಸಿ ನೀರನ್ನು ನಾವು ಸಂಗ್ರಹಿಸಿ ಇಟ್ಟುಕೊಳ್ಳಲು ವ್ಯವಸ್ಥೆ ಬೇಕಾಗಿದೆ. ಹೀಗಾಗಿ ನಾನು ಹಿಂದೆ ಜಲ ಸಂಪನ್ಮೂಲ ಸಚಿವನಾಗಿದ್ದಾಗಲೇ ಮೇಕೆದಾಟು ಯೋಜನೆಯ ಪರಿಕಲ್ಪನೆ ಬಂತು. ಇದರಿಂದ ತಮಿಳುನಾಡಿಗೂ ಪ್ರಯೋಜನವಿದೆ. ಆದರೆ ಅಲ್ಲಿಯ ಆಂತರಿಕ ರಾಜಕಾರಣವು ಇದಕ್ಕೆ ಆಸ್ಪದ ಕೊಡುತ್ತಿಲ್ಲ. ಇದರ ಬದಲು ಅವರು ಮೇಕೆದಾಟು ಜಲಾಶಯದಿಂದ ತಮಿಳುನಾಡಿಗೂ ಲಾಭವಿದೆ ಎನ್ನುವ ಸರಳ ಸತ್ಯವನ್ನು ಒಪ್ಪಿಕೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಹಿಂದೆ ಜಲ ಸಂಪನ್ಮೂಲ ಖಾತೆಯನ್ನೂ ನಿರ್ವಹಿಸಿರುವ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು ಈಗಿನ ಜಲ ಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಕೂತು, ಈಗಿನ ಬಿಕ್ಕಟ್ಟಿಗೆ ಪರಿಹಾರವನ್ನು ಹುಡುಕಲಿದ್ದಾರೆ. ಕೇಂದ್ರ ಸರಕಾರದ ಸಮಿತಿ ಕೂಡ ಈಗಿನ‌ ನೀರು ಸಂಗ್ರಹಣೆಗೆ ಸಂಬಂಧಿಸಿದ ವಿಡಿಯೋ ಮತ್ತು ಅಂಕಿಅಂಶಗಳನ್ನು ಕೂಲಂಕಷವಾಗಿ ಪರಿಶೀಲಿಸಬೇಕು ಎಂದು ಪಾಟೀಲ ನುಡಿದಿದ್ದಾರೆ.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಬಿಡುವಷ್ಟು  ಕಾವೇರಿ‌ ನೀರಿಲ್ಲ: ಎಂ ಬಿ ಪಾಟೀಲಪರಿಸರ ಸಂಬಂಧಿ ಅನುಮತಿ ಸಿಕ್ಕರೆ 3 ತಿಂಗಳಲ್ಲಿ ವಿಜಯಪುರ ಏರ್‌ಪೋರ್ಟ್ ಕಾರ್ಯಾರಂಭ: ಎಂ ಬಿ ಪಾಟೀಲಬೆಳ್ಳಂದೂರು ಎಸ್‌ಟಿಪಿಯ ಸಮಗ್ರ ತನಿಖೆ ಮುಂದುವರಿಕೆ; ಕಾರ್ಮಿಕರ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮ: ಜಲಮಂಡಳಿ ಅಧ್ಯಕ್ಷೆ ಡಾ. ಎನ್. ಮಂಜುಳಾಮೇಕೆದಾಟು ಯೋಜನೆಯನ್ನು ತಕ್ಷಣ ಆರಂಭಿಸಿ  2 ವರ್ಷಗಳೊಳಗೆ ಪೂರ್ಣಗೊಳಿಸಿ: ಮುಖ್ಯಮಂತ್ರಿ ಚಂದ್ರು ಆಗ್ರಹ ಸರ್ಕಾರಿ ಶಿಕ್ಷಣ ಸಂಸ್ಥೆಯ ಜಾಗ ಕಬಳಿಸಲು ಕೇಂದ್ರ ಸಚಿವರ ಉನ್ನಾರಕಾಮನ್ವೆಲ್ತ್ ಗೇಮ್ ನಲ್ಲಿ ಭಾರತಕ್ಕೆ ಕಂಚಿನ ಮುಕುಟಮಾಲೂರು ನ್ಯಾಯಾಧೀಶೆಯ ಬೀದಿಜಗಳ? ನೊಂದವರ ಕಣ್ಣೀರು! ವಕೀಲರ ಸಂಘದಿಂದ ಹೈ ಮೆಟ್ಟಿಲುಆ.5ಕ್ಕೆ ಮುಜರಾಯಿ ದೇವಾಲಯಗಳ ಅರ್ಚಕರ,ಆಗಮಿಕರ ನೌಕರರ ಸಂಘದಿಂದ ಸಮಾವೇಶ ಅಭಿನಂದನ ಸಮಾರಂಭರಸ್ತೆ ಬದಿ ಧೂಮಪಾನಕ್ಕೆ ಕಡಿವಾಣ: ಸಾರ್ವಜನಿಕರಿಗೆ ತೊಂದರೆಯಾಗದಂತೆ ವ್ಯಾಪಾರ ಮಾಡಿ-ಶಾಸಕ ಎಸ್.ಸುರೇಶ್ ಕುಮಾರ್ಜುಲೈ 25ನ್ನು "ಯುವೋದಯ ದಿನ'ವಾಗಿ ಘೋಷಿಸಬೇಕು: ಕೆಪಿಸಿಸಿ ವಕ್ತಾರ ಎಚ್.ಎ. ವೆಂಕಟೇಶ್ ಆಗ್ರಹ