LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಂದಿಗಲ್ಲ-ಇಂದಿಗಲ್ಲ-ಮುಂದೆ ಎಂದೆಂದಿಗೂ ಬಸವ ತತ್ವ ಶಾಶ್ವತ ಮತ್ತು ಪ್ರಸ್ತುತ: ಸಿಎಂ




ಬೆಂಗಳೂರು: ನಾವೆಲ್ಲರೂ ಶೂದ್ರರು. ಜಾತಿ ಯಾವುದಾದರೂ ಶೂದ್ರರೆಲ್ಲರೂ ಒಂದೇ.‌ ಚಲನೆ ಇಲ್ಲದ ಜಾತಿ ವ್ಯವಸ್ಥೆಯನ್ನು ವಿರೋಧಿಸಿ ಬಸವಣ್ಣ ಹೊಸ ಧರ್ಮವನ್ನೇ ಸ್ಥಾಪಿಸಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ವಿಶ್ವಗುರು ಬಸವಣ್ಣ ಅವರನ್ನು "ಕರ್ನಾಟಕ ಸಾಂಸ್ಕೃತಿಕ ನಾಯಕ" ಎಂದು ಘೋಷಿಸಿದ ವರ್ಷಾಚರಣೆ ಸಂದರ್ಭದಲ್ಲಿ ಆಯೋಜಿಸಲಾಗಿದ್ದ 'ಬಸವ ಸಂಸ್ಕೃತಿ ಅಭಿಯಾನ-2025' ರ ಸಮಾರೋಪ ಸಮಾರಂಭದಲ್ಲಿ ಶರಣ ಸಂಸ್ಕೃತಿಯ 301 ಶರಣರು, ಗುರುಗಳು, ಸ್ವಾಮೀಜಿಗಳ ಸಾನಿದ್ಯದಲ್ಲಿ ಸಮುದಾಯದ ಸುಮಾರು 2 ಲಕ್ಷಕ್ಕೂ ಅಧಿಕ ಮಂದಿಯ ಸಮ್ಮುಖದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ನಾನು ಬಸವಣ್ಣನವರ ಅಭಿಮಾನಿ. ಬಸವ ತತ್ವದಲ್ಲಿ‌ ನಂಬಿಕೆ-ಬದ್ದತೆ ಇಟ್ಟುಕೊಂಡಿದ್ದೀನಿ. ಅಂದಿಗಲ್ಲ-ಇಂದಿಗಲ್ಲ- ಮುಂದೆ ಎಂದೆಂದಿಗೂ ಬಸವ ತತ್ವ ಶಾಶ್ವತ ಮತ್ತು ಪ್ರಸ್ತುತ ಎನ್ನುವುದು ನನ್ನ ನಂಬಿಕೆ. ಸಹಬಾಳ್ವೆ ಮತ್ತು ಸಹಿಷ್ಣತೆಯನ್ನು ಬಸವಣ್ಣನವರು ಬದುಕಿನುದ್ದಕ್ಕೂ ಸಾರಿದರು. ನಾನೂ ಇದನ್ನು ಪಾಲಿಸುತ್ತೇನೆ ಎಂದರು.

ಬಸವಣ್ಣನವರ ಆಶಯಗಳನ್ನು ಈಡೇರಿಸುವ ತೀರ್ಮಾನ ಮಾಡಿ

ಬಸವ ಜಯಂತಿಯ ದಿನವೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಾನು ಅದೇ ದಿನ ಎಲ್ಲರಿಗೂ ಬದುಕುವ ಸಮಾನ ಅವಕಾಶಗಳನ್ನು ಕಲ್ಪಿಸುವ ಬಸವಣ್ಣನವರ ಆಶಯಗಳನ್ನು ಈಡೇರಿಸುವ ತೀರ್ಮಾನ ಮಾಡಿ ಹತ್ತು ಹಲವು ಭಾಗ್ಯಗಳ, ಗ್ಯಾರಂಟಿಗಳ ಮೂಲಕ ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರ ಬದುಕಿಗೆ ಅವಕಾಶಗಳನ್ನು ಕಲ್ಪಿಸಿದೆ. ಎಲ್ಲಾ ಸರ್ಕಾರಿ ಕಚೇರಿಗಳಲ್ಲೂ ಬಸವಣ್ಣನವರ ಭಾವಚಿತ್ರ ಇಡುವುದನ್ನು ಕಡ್ಡಾಯ ಮಾಡಿದ್ದು ಇದೇ ಕಾರಣಕ್ಕೆ ಎಂದರು‌.

ಜಾತಿಯಿಂದ ಯಾರೂ ಶ್ರೇಷ್ಠರಲ್ಲ. ಹಾಗೆಯೇ ಪ್ರತಿಭೆ, ಜ್ಞಾನ ಕೂಡ ಯಾವುದೇ ಒಂದು ಜಾತಿಯ ಸ್ವತ್ತು ಅಲ್ಲ. ನಾನು ಅರ್ಜಿ ಹಾಕಿಕೊಂಡು ಕುರುಬ ಜಾತಿಯಲ್ಲಿ ಹುಟ್ಟಿಲ್ಲ. ನಾನು ಶೂದ್ರ ಎನ್ನುವ ಕಾರಣಕ್ಕೆ ಶಿಕ್ಷಣ ಪಡೆಯುವ ಅರ್ಹತೆ ಇಲ್ಲ ಎನ್ನುವುದು ಪಟ್ಟಭದ್ರರ ಷಡ್ಯಂತ್ರ ಎಂದರು.

ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸುವ ಮೂಲಕ ಇಡೀ ಸರ್ಕಾರ ಬಸವಣ್ಣನವರಿಗೆ ಗೌರವ ಸೂಚಿಸಿದೆ. ಜಾತಿ ವ್ಯವಸ್ಥೆ, ಅಂದಿಗಲ್ಲ-ಇಂದಿಗಲ್ಲ-ಮುಂದೆ ಎಂದೆಂದಿಗೂ ಬಸವ ತತ್ವ ಶಾಶ್ವತ

ಜಾತಿ-ವರ್ಗ ರಹಿತ ಮಾನವ ಸಮಾಜದ ನಿರ್ಮಾಣ ಬಸವಣ್ಣನವರ ಕನಸಾಗಿತ್ತು. ನಾವೆಲ್ಲರೂ ಮೊದಲು ಮನುಷ್ಯರು, ಬಳಿಕ ಭಾರತೀಯರು. ಹೀಗಾಗಿ ನಾವು ಮನುಷ್ಯ ನಿರ್ಮಿತ ಜಾತಿ, ಧರ್ಮದ, ಅಸಮಾನತೆಯ ತಾರತಮ್ಯಗಳನ್ನು ಸಹಿಸಬಾರದು, ಆಚರಿಸಬಾರದು ಎಂದು ಕರೆ ನೀಡಿದರು.

ನಾನು ಕಾನೂನು ವಿದ್ಯಾರ್ಥಿ ಆದ ಗಳಿಗೆಯಿಂದ ನಾನು ಬಸವಣ್ಣನವರ ಅನುಯಾಯಿ. ಅಂಬೇಡ್ಕರ್ ಅವರೂ ತಮ್ಮ ಸಂವಿಧಾನದಲ್ಲಿ ಬಸವಣ್ಣನವರ ಆಶಯಗಳನ್ನೇ ಹೇಳಿದ್ದಾರೆ. ಹೀಗಾಗಿ ಸಂವಿಧಾನ ಮತ್ತು ಶರಣ ಸಂಸ್ಕೃತಿ ಒಂದೇ ಆಗಿದೆ. ನಮ್ಮ ಸರ್ಕಾರ ಸಂವಿಧಾನದ ಪೀಠಿಕೆ ಓದಿಸುವುದನ್ನು ಅಭಿಯಾನದ ರೀತಿ ನಡೆಸುತ್ತಿದ್ದೇವೆ ಎಂದರು.

ನುಡಿದಂತೆ ನಡೆದಾಗ ಮಾತ್ರ ನಿಜವಾದ ಬಸವ ಅನುಯಾಯಿ ಗಳಾಗುತ್ತೇವೆ

ಸ್ವಾತಂತ್ರ್ಯ, ಸಮಾನತೆ, ಬ್ರಾತೃತ್ವ ಸಂವಿಧಾನದ ಆಶಯ ಆದರೆ ಬಸವಣ್ಣನವರೂ ಜಾತಿ ರಹಿತ, ವರ್ಗ ರಹಿತ ಬ್ರಾತೃತ್ವದ ಸಮಾಜ ನಿರ್ಮಾಣಕ್ಕೆ ಮುಂದಾಗಿದ್ದರು. ಹೀಗಾಗಿ ಬಸವಣ್ಣನವರು ಯಾವತ್ತಿಗೂ ಪ್ರಸ್ತುತ ಎಂದರು‌.

ಬಸವಣ್ಣನವರು ನುಡಿದಂತೆ ನಡೆದರು. ನಾವು ಬಸವ ಅನುಯಾಯಿಗಳೂ ನುಡಿದಂತೆ ನಡೆದಾಗ ಮಾತ್ರ ನಿಜವಾದ ಬಸವ ಅನುಯಾಯಿ ಗಳಾಗುತ್ತೇವೆ ಎಂದರು.

ನಮ್ಮಲ್ಲಿ ಅನೇಕ ಜಾತಿ, ಅನೇಕ‌ ಧರ್ಮಗಳಿವೆ. ನಾವೆಲ್ಲರೂ ಶೂದ್ರರು. ಚಾತುವರ್ಣ ವ್ಯವಸ್ಥೆಯಲ್ಲಿ ನಾಲ್ಕನೇ ಸ್ಥಾನದಲ್ಲಿ ಇರುವವರು. ಶೂದ್ರರು ಜಾತಿ ಯಾವುದೇ ಆದರೂ ನಾವೆಲ್ಲರೂ ಒಂದೇ ಎನ್ನುವುದನ್ನು ಅರಿಯಬೇಕು ಎಂದರು.

ಈ ಅಸಮಾನತೆ ಹೋಗದಿದ್ದರೆ, ಅಸಮಾನತೆಗೆ ಒಳಗಾಗಿರುವ ಸಮುದಾಯಗಳು ಸ್ವಾತಂತ್ರ್ಯ ಸೌಧವನ್ನು ದ್ವಂಸ ಮಾಡುತ್ತಾರೆ ಎನ್ನುವ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಎಚ್ಚರಿಕೆಯ ಮಾತುಗಳನ್ನು ನಾವು ನೆನಪಿಡಬೇಕು ಎಂದರು.

*ಮುಂದಿನ ವರ್ಷ ವಚನ ವಿಶ್ವ ವಿದ್ಯಾಲಯ ಸ್ಥಾಪನೆ: ಸಿಎಂ*

ವಚನ ವಿಶ್ವ ವಿದ್ಯಾಲಯ ಸ್ಥಾಪಿಸುವ ಬೇಡಿಕೆ ಬಗ್ಗೆ ಸರ್ಕಾರದ ಒಪ್ಪಿಗೆ ಇದ್ದು, ಮುಂದಿನ ವರ್ಷ ವಚನ ವಿವಿ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ನಮ್ಮ ಮೆಟ್ರೋಗೆ "ಬಸವ ಮೆಟ್ರೋ" ಎಂದು ನಾಮಕರಣ ಮಾಡುವ ಬಗ್ಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡುತ್ತೇವೆ. ಇದು ಪೂರ್ಣವಾಗಿ ರಾಜ್ಯ ಸರ್ಕಾರದ ಯೋಜನೆ ಆಗಿದ್ದರೆ ಇವತ್ತೇ "ಬಸವ ಮೆಟ್ರೋ" ಎಂದು ಘೋಷಿಸಿ ಬಿಡುತ್ತಿದ್ದೆ ಎಂದರು.

ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಬೃಹತ್ ಕಾರ್ಯಕ್ರಮದಲ್ಲಿ ಲಿಂಗಾಯತ ಧರ್ಮ ಚಳವಳಿಯ ಪ್ರಮುಖರು, ಪ್ರಗತಿಪರ ಚಿಂತಕರು, ಹೋರಾಟಗಾರರು ಉಪಸ್ಥಿತರಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶರಣ ಸಂಸ್ಕೃತಿ ಬಗೆಗಿನ ಬದ್ಧತೆಯನ್ನು ಶ್ಲಾಘಿಸಿ ಅಭಿನಂದಿಸಿದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ