LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಇಂದಿರಾ ಗಾಂಧಿ ಭವನದ ನಿರ್ಮಾಣ ಕಾರ್ಯ ಒಂದು ವರ್ಷದಲ್ಲಿ ಮುಗಿಯಬೇಕು: ಸಿಎಂ ಸಿದ್ದರಾಮಯ್ಯ

ಮೈಸೂರು : ಕಾಂಗ್ರೆಸ್ ಪಕ್ಷದ ಶ್ರೀಮತಿ ಇಂದಿರಾ ಗಾಂಧಿ ಭವನದ ನಿರ್ಮಾಣ ಕಾರ್ಯ ಒಂದು ವರ್ಷದಲ್ಲಿ ಮುಗಿಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಶ್ರೀಮತಿ ಇಂದಿರಾಗಾಂಧಿ ಕಾಂಗ್ರೆಸ್ ಭವನದ ಭೂಮಿ ಪೂಜೆ ನೆರೆವೇರಿಸಿ ನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರು.

ಗ್ರಾಮೀಣ ಮತ್ತು ನಗರ ಜಿಲ್ಲೆಗಳಿಗೆ ಕಾಂಗ್ರೆಸ್ ಪಕ್ಷಕ್ಕೆ ಸ್ವಂತ ಕಟ್ಟಡ ಇರಲಿಲ್ಲ. ದೇವರಾಜ ಅರಸು ಅವರ ಕಾಲದಲ್ಲಿ ಈ ಭೂಮಿಯಲ್ಲಿ ನೀಡಲಾಗಿತ್ತು. ತಿವಾರಿಯವರು ಅವರು ಇದನ್ನು ಜೋಪಾನ ಮಾಡಿದ್ದು, ಕಾಂಗ್ರೆಸ್ ಭವನಕ್ಕೆ ಸಂಕುಸ್ಥಾಪನೆಯಾಗಿರುವುದು ಸಂತೋಷದ ವಿಷಯ ಎಂದರು.

*ಶಕ್ತಿ ಮೀರಿ ಎಲ್ಲರೂ ವಂತಿಗೆ ನೀಡಬೇಕು*

ಕಾಂಗ್ರೆಸ್ಸಿನ ಮುಖಂಡರು, ಕಾರ್ಯಕರ್ತರು, ಅಧ್ಯಕ್ಷರು, ಮಹಿಳೆಯರಿಗೆ, ಅನುಕೂಲವಾಗುವ ಭವ್ಯ ಕಾಂಗ್ರೆಸ್ ಭವನ ನಿರ್ಮಾಣವಾಗುತ್ತಿದೆ.ಇದಕ್ಕೆ ಶಕ್ತಿ ಮೀರಿ ಎಲ್ಲರೂ ವಂತಿಗೆ ನೀಡಬೇಕು ಎಂದು ಮುಖ್ಯಮಂತ್ರಿಗಳು ಮನವಿ ಮಾಡಿದರು.

ಕಾರ್ಯಕರ್ತರ ವಂತಿಗೆ ಹಣದಿಂದಲೇ ಈ ಭವನ ನಿರ್ಮಾಣವಾಗುತ್ತಿದೆ. ಯತೀಂದ್ರ ಸಿದ್ದರಾಮಯ್ಯ ಅವರು ಕಟ್ಟಡ ಸಮಿತಿಗೆ ಸಂಚಾಲಕರಾಗಿದ್ದು, ಅಧ್ಯಕ್ಷರೂ ಸೇರಿದಂತೆ ಎಲ್ಲರೂ ಶ್ರಮ ಹಾಗೂ ಮುತುವರ್ಜಿ ವಹಿಸಿ ಕಟ್ಟಡವನ್ನು ಒಂದು ವರ್ಷದೊಳಗೆ ನಿರ್ಮಾಣವಾಗುವಂತೆ ವ್ಯವಸ್ಥೆ ಮಾಡಬೇಕು. ಕಾರ್ಯಕರ್ತರು ಕೂಡ ಎಲ್ಲ ರೀತಿಯ ಸಹಕಾರವನ್ನು ನೀಡಬೇಕು ಎಂದರು.

ಕರ್ನಾಟಕದಲ್ಲಿ ಮೊದಲನೇ ಬಾರಿಗೆ ಶ್ರೀಮತಿ ಇಂದಿರಾ ಗಾಂಧಿ ಅವರ ಹೆಸರಿನಲ್ಲಿ ಭವನ ನಿರ್ಮಾಣವಾಗುತ್ತಿದೆ.ಕಾಂಗ್ರೆಸ್ಸಿನ ಎಲ್ಲಾ ಮುಖಂಡರು ಶಕ್ತ್ಯಾನುಸಾರ ದೇಣಿಗೆ ನೀಡಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಮಾಜಿ ಶಾಸಕ ಮಂಜುನಾಥ್ ಅವರ ತಂದೆ ಪ್ರೇಮ್ ಕುಮಾರ್ ಅವರು ಐದು ಲಕ್ಷ ರೂಪಾಯಿಗಳ ದೇಣಿಗೆ ನೀಡಿದ್ದು, ಅವರಿಗೆ ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಧನ್ಯವಾದಗಳನ್ನು ತಿಳಿಸಿದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ