LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಚನ್ನಪಟ್ಟಣದಲ್ಲಿ ಜೆಡಿಎಸ್‌ ಪಕ್ಷಕ್ಕೆ ದೊಡ್ಡಮಟ್ಟದಲ್ಲಿ ಅಭಿಮಾನಿಗಳಿದ್ದಾರೆ

ರಾಮನಗರ : ನಾನು ಎಲ್ಲಿ ಕಳೆದುಕೊಂಡಿದ್ದೇನೋ ಅಲ್ಲಿಯೇ ಹುಡುಕುತ್ತೇನೆ. ಇಲ್ಲಿಯೇ ಮುಂದಿನ ರಾಜಕೀಯ ಮುಂದುವರೆಸುತ್ತೇನೆ. ಕ್ಷೇತ್ರದಲ್ಲಿ ನಮ್ಮ ಪಕ್ಷದ ಮೇಲೆ ದೊಡ್ಡ ಮಟ್ಟದ ಅಭಿಮಾನ ಇದೆ.ಪಕ್ಷದ ಕಾರ್ಯಕರ್ತರ ಜೊತೆಗೆ ನಾವು ಸದಾ ಇರುತ್ತೇನೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ತಿಳಿಸಿದರು.

ಚನ್ನಪಟ್ಟಣ ತಾಲ್ಲೂಕಿನ ಶ್ರೀರಾಂಪುರ ಗ್ರಾಮದ ಮಂಜುನಾಥ್ ಅವರನ್ನ ಭೇಟಿ ಮಾಡಿದ ನಂತರ ನಿಖಿಲ್ ಕುಮಾರಸ್ವಾಮಿ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ಚುನಾವಣೆಗೆ ಗೃಹಲಕ್ಷ್ಮಿ ಹಣ ಹಾಕ್ತಾರೆ

ಚುನಾವಣೆ ಎರಡು ದಿನ ಇರುವಾಗ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಹಣ ಹಾಕ್ತಾರೆ. ಇದನ್ನ ಚುನಾವಣಾ ಆಯೋಗ ಗಮನಿಸಬೇಕು. ಸರ್ಕಾರದ ಹಣ ಕನ್ನಡಿಗರ ತೆರಿಗೆ ಹಣವನ್ನು ಚುನಾವಣೆ ವೇಳೆ ಹಾಕ್ತಾರೆ.ನಾವು ಹೋರಾಟ ಈ ವಿಚಾರದಲ್ಲಿ ಮಾಡಲ್ಲ ಹೋರಾಟ ಮಾಡಲು ಸರ್ಕಾರದ ಸಾಕಷ್ಟುವೈಫಲ್ಯಗಳಿವೆ, ಹಲವು ವಿಚಾರಗಳಿವೆ. ಮುಂದೆ ನಾವು ಹೋರಾಟ ಮಾಡ್ತೇವೆ ಎಂದು ಕಾಂಗ್ರೆಸ್‌ ನಾಯಕರ ವಿರುದ್ಧ ಕಿಡಿ ಕಾರಿದರು.

ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿದ್ದಕ್ಕೆ ಮುಸ್ಲಿಂ ಮತಗಳು ಬಂದಿಲ್ಲ ಎಂಬ ಮಾಧ್ಯಮದವರು ಪ್ರಶ್ನೆಗೆ ಪ್ರತಿಕ್ರಿಯಿಸಿ ಅವರು , ಈ ಚುನಾವಣೆಯಲ್ಲಿ ಹೆಚ್ಚಿನ ಮತ ಬಂದಿದೆ. ಆದರೆ ಒಂದು ಸಮುದಾಯದ ಮತಗಳು ಬಂದಿಲ್ಲ. ದೇವೇಗೌಡರ ಕೊಡುಗೆಯನ್ನ ನೆನಪಿಸಿಕೊಂಡಿಲ್ಲ. ನಮ್ಮ ಅವಶ್ಯಕತೆ ಅವರಿಗೆ ಇಲ್ಲ ಅನಿಸುತ್ತೆ. ಹಾಗಾಗಿ ನಾವು ಸಹ ಅವರನ್ನ ಬಿಟ್ಟು ಸ್ಟ್ರಾಟರ್ಜಿ ಮಾಡಬೇಕಾಗುತ್ತೆ ಎಂದರು.

ನಾವು ಕಾಂಗ್ರೆಸ್‌ನವರ ಬಳಿ ಹೋಗಿರಲಿಲ್ಲ. ಅವರೇ ನಮ್ಮ ಬಳಿ ಬಂದರು ಸರ್ಕಾರ ಮಾಡಿದ್ದೆವು.ಆದರೆ ಅವರು ನಮಗೆ ಅನ್ಯಾಯ ಮಾಡಿದ್ದಕ್ಕೆ ನಾವು ಬಿಜೆಪಿಗೆ ಹೋಗಿದ್ದೇವೆ. ನನ್ನ ಸೋಲಿನ ಅಂತರ ನೋಡಿದಾಗ ಆದರ ಹಳವನ್ನು ಯಾರು ಹುಡುಕುತಿಲ್ಲ, ಆ ಸಮುದಾಯದ ವನ್ನು ಬದಿಗಿಟ್ಟು ಮಾತಾಡಿದರೆ. ನಾವು ಸಮಬಲ ಹೋರಾಟ ಮಾಡಿದ್ದೇನೆ ಹಳ್ಳಿಗಳಲ್ಲಿ ನಮ್ಮ ನಿರೀಕ್ಷಿಗೂ ಮೀರಿ ಜನ ನಮಗೆ ಆಶೀರ್ವಾದ ಮಾಡಿದ್ದಾರೆ ಎಂದರು.

ನಾನು ಸೋತಿದ್ದೇನೆ ಎಂದು ನಾನು ಮನೆಯಲ್ಲಿ ಕುರುವು ಜಾಯಮಾನ ನಂದಲ್ಲ. ಈ ಹೋರಾಟ ಹೊಸದೇನು ಅಲ್ಲ ನಮ್ಮ ಪಕ್ಷಕ್ಕೆ ನಾನು ಹೋರಾಟದ ಕಿಚ್ಚನ್ನು ನಾನು ರೂಡಿಸಿಕೊಂಡಿದ್ದೇನೆ. ಕಾಂಗ್ರೆಸ್ ನಡವಳಿಕೆ ಸರ್ಕಾರದ ವೈಫಲ್ಯಗಳ ಬಗ್ಗೆ ಜನಗಳಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನಾನು ಹೋರಾಟ ಮಾಡುತ್ತೇನೆ ಎಂದು ತಿಳಿಸಿದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ