LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದೇಶದ ಅಭ್ಯುದಯದಲ್ಲಿ ಶಾಸನ ಸಭೆಗಳ ಪಾತ್ರ ಮಹತ್ತರ: ಸಭಾಪತಿ ಬಸವರಾಜ ಹೊರಟ್ಟಿ ಅಭಿಮತ

ಬೆಂಗಳೂರು / ಬೋಸ್ಟನ್ (ಅಮೇರಿಕಾ): ಜಗತ್ತಿನ ಬಹುದೊಡ್ಡ ಪ್ರಜಾಪ್ರಭುತ್ವ ದೇಶ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಭಾರತದ ಸವಾರ್ಂಗೀಣ ಅಭ್ಯುದಯದಲ್ಲಿ ಶಾಸನ ಸಭೆಗಳ ಹಾಗೂ ಜನಪ್ರತಿನಿಧಿಗಳ ಪಾತ್ರ ಅತ್ಯಂತ ಮಹತ್ತರವಾದುದು ಎಂದು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅಭಿಪ್ರಾಯಪಟ್ಟರು.

ಅಮೇರಿಕಾದ ಬೋಸ್ಟನ್ ನಗರದಲ್ಲಿ “ರಾಜ್ಯ ಶಾಸಕರ ರಾಷ್ಟ್ರೀಯ ಸಮಾವೇಶ” ಹಾಗೂ “ರಾಷ್ಟೀಯ ಶಾಸಕರ ಸಮಾವೇಶ” ಭಾರತ ಸಂಸ್ಥೆಗಳ ಆಶ್ರಯದಲ್ಲಿ ನಡೆಯುತ್ತಿರುವ "ಶಾಸಕಾಂಗ ಶೃಂಗಸಭೆ 2025" ರ ವಿಚಾರ ಗೋಷ್ಠಿಯಲ್ಲಿ ತಮ್ಮ ನಾಲ್ಕು ದಶಕಗಳ ಸಂಸದೀಯ ಅನುಭವಗಳನ್ನು ಬಸವರಾಜ ಹೊರಟ್ಟಿ ಹಂಚಿಕೊಂಡರು.

ದೇಶದ ಉನ್ನತಿಯಲ್ಲಿ ಶಾಸನ ಸಭೆಗಳ ಹಾಗೂ ಜನಪ್ರತಿನಿಧಿಗಳ ಕ್ರೀಯಾಶೀಲತೆ ಹಾಗೂ ಪಕ್ಷಬೇಧವಿಲ್ಲದ ಅಭಿವೃದ್ದಿ ಪರ ಚಿಂತನೆಯಿಂದ ಮಾತ್ರ ರಾಷ್ಟ್ರದ ಭವಿಷ್ಯ ಉಜ್ವಲವಾಗಬಲ್ಲದು. ಶಾಸನ ಸಭೆಗಳ ಕಾರ್ಯ ಚಟುವಟಿಕೆಗಳು ಸಮಾಜದ ಮೂಲಭೂತ ಅವಶ್ಯಕತೆಗಳ ಮೇಲೆ ಕೇಂದ್ರಿಕೃತವಾಗಿ ದೇಶದಲ್ಲಿರುವ ಬಡತನ, ಜನರ ಸಂಕಷ್ಟ, ಬವಣೆಗಳ ನಿವಾರಣೆ ನಿಟ್ಟಿನಲ್ಲಿ ಚಿಂತನೆ ನಡೆಸುವ “ಚಿಂತಕರ ಚಾವಡಿ”ಗಳಾಗಿ ಪರಿವರ್ತನೆಯಾದಾಗ ಮಾತ್ರ ಪ್ರಜಾಪ್ರಭುತ್ವದ ನೈಜ ಆಶಯಗಳು ಈಡೇರಿಸಲು ಸಾಧ್ಯವಾಗುತ್ತದೆ ಎಂದರು.

ಸಾಮಾನ್ಯ ಜನರ ಬದುಕು, ಬವಣೆಗಳ ಬಗೆ ತಿಳಿದುಕೊಳ್ಳಲು ಜನಪ್ರತಿನಿಧಿಗಳು ಸಾರ್ವಜನಿಕರೊಂದಿಗೆ ನೇರ ಸಂಪರ್ಕ ಹೊಂದುವುದು ಅವಶ್ಯಕವಾಗಿದೆ. ಇದರಿಂದ ನಿಜರೂಪದಲ್ಲಿ ಸಾರ್ವಜನಿಕರ ಬದುಕು ಹಸನಗೊಳಿಸಲು ಸಾಧ್ಯ ಎಂದರು.

ಜಾತಿ, ಧರ್ಮ ಲಿಂಗಗಳ ಬೇಧವಿಲ್ಲದೆ ಜನರ ಮತಗಳಿಂದ ಜನಪ್ರತಿನಿಧಿಯಾಗುವ ಅವಕಾಶ ಪ್ರಜಾಪ್ರಭುತ್ವ ಕಲ್ಪಿಸಿಕೊಟ್ಟಿದ್ದು, ಪ್ರತಿಯೊಬ್ಬ ಜನಪ್ರತಿನಿಧಿಯು ವಿಶ್ವಾಸರ್ಹತೆಯಿಂದ ಔದಾರ್ಯವನ್ನು ಮೆರೆದು ದೇಶದ ಅಭ್ಯುದಯಕ್ಕೆ ಕಟಿಬದ್ದರಾಗಿ ಸಂಸದೀಯ ಮೌಲ್ಯಗಳ ರಕ್ಷಣೆಗೆ ಮುಂದಾಗಬೇಕಿದೆ. ಇಂದಿನ ಆಧುನಿಕ ದಿನಮಾನಗಳಲ್ಲಿ ಅಭಿವೃದ್ದಿಯೇ ಪ್ರತಿಯೊಬ್ಬರ ಮೂಲ ಮಂತ್ರವಾಗಬೇಕಿದೆ ಎಂದು ಬಸವರಾಜ ಹೊರಟ್ಟಿ, ನಾಡಿನ ಸುಸ್ಥಿರ ಹಾಗೂ ಸಮಗ್ರ ಬೆಳವಣಿಗೆಯಲ್ಲಿ ಶಾಸನ ಸಭೆಗಳು ಹಾಗೂ ಜನಪ್ರತಿನಿಧಿಗಳ ಪಾತ್ರ ಹಿಂದೆಂದಿಗಿಂತಲೂ ಇಂದು ಹೆಚ್ಚಾಗಿದ್ದು, ಪ್ರತಿಯೊಬ್ಬ ಜನಪ್ರತಿನಿಧಿಯು ಆಧುನಿಕ ಸಂವಹನ ತಂತ್ರಗಾರಿಕೆಗಳನ್ನು ಅಳವಡಿಸಿಕೊಂಡು ಅಭಿವೃದ್ದಿ ಬಗೆಗೆ ಬದ್ಧತೆ ಹೊಂದಿ ದೇಶದ ಏಳಿಗೆಗೆ ಶ್ರಮಿಸಲು ಮುಂದಾಗಬೇಕಿದೆ ಎಂದರು.

ಶಾಸನ ಸಭೆಗಳು ಆಧುನಿಕ ತಂತ್ರಜ್ಞಾನಕ್ಕೆ ಪೂರಕವಾಗಿ ತಮ್ಮನ್ನು ಸನ್ನದ್ಧಗೊಳಿಸಿಕೊಂಡು ದೇಶದ ಅಗತ್ಯ ಬೇಡಿಕೆಗಳ ಈಡೇರಿಕೆಗೆ ಪಣ ತೊಡಬೇಕಾದ ಅವಶ್ಯಕತೆ ಇದೆ, ದೇಶದ ಸವಾರ್ಂಗೀಣ ಅಭಿವೃದ್ದಿಗೆ ಪ್ರತಿಯೊಬ್ಬ ಜನಪ್ರತಿನಿಧಿಯು ನಿರ್ಧಿಷ್ಠ ನೀತಿ ಸಂಹಿತೆಗಳನ್ನು ಅಳವಡಿಸಿಕೊಂಡು ಅವುಗಳನ್ನು ಸಮರ್ಪಕವಾಗಿ ಕಾರ್ಯ ರೂಪುಗೊಳಿಸುವಲ್ಲಿ ಸಂಕಲ್ಪ ಬದ್ಧರಾಗುವ ಮೂಲಕ ದೇಶದ ಒಳಿತಿಗೆ ತಮ್ಮನ್ನು ತಾವು ಸಮರ್ಪಿಸಿಕೊಳ್ಳುವ ಅಗತ್ಯತೆಯನ್ನು ಬಸವರಾಜ ಹೊರಟ್ಟಿ ಪ್ರತಿಪಾದಿಸಿದರು.

ಅಮೇರಿಕಾದ ಬೋಸ್ಟನ್‍ನಲ್ಲಿ ಶಾಸಕಾಂಗ ಶೃಂಗಸಭೆ ನಡೆಸುವಲ್ಲಿ ಬಹುವಾಗಿ ಶ್ರಮಿಸಿರುವ ಡಾ. ರಾಹುಲ್ ಕರಾಡ್ ಹಾಗೂ ತಂಡವನ್ನು ಇದೇ ವೇಳೆ ಸಭಾಪತಿ ಬಸವರಾಜ ಹೊರಟ್ಟಿ ಅಭಿನಂದಿಸಿದರು.

ಮೂರು ದಿನಗಳ ಕಾಲ ನಡೆಯುತ್ತಿರುವ ಶೃಂಗ ಸಭೆಯಲ್ಲಿ ಪ್ರಜಾತಂತ್ರ ಗಟ್ಟಿಗೊಳಿಸುವಿಕೆಯಲ್ಲಿ ಶಾಸನ ಸಭೆಗಳ ಪಾತ್ರ, ಶಾಸನ ಸಭೆಗಳ ಪಕ್ಷಾತೀತ ನಿರ್ವಹಣೆ, ಶಾಸನ ಸಭೆಗಳಿಗೆ ಅರ್ಥಿಕ ಸ್ವಾಯತ್ತತೆ ಸೇರಿದಂತೆ ಹತ್ತು ಹಲವು ವಿಷಯಗಳ ಕುರಿತು ಶೃಂಗ ಸಭೆಯಲ್ಲಿ ಗೋಷ್ಠಿಗಳು, ವಿಚಾರ ಸಂಕಿರಣ, ಸಂವಾದಗಳು ಜರುಗಲಿವೆ.

ಭಾರತ ದೇಶದ ಸಂಸದರು, ವಿವಿಧ ರಾಜ್ಯಗಳ ವಿಧಾನ ಸಭೆ ಹಾಗೂ ವಿಧಾನ ಪರಿಷತ್ತಿನ ಸದಸ್ಯರು, ಸಚಿವರುಗಳು, ರಾಜಕೀಯ ತಜ್ಞರು, ನೀತಿ ನಿರೂಪಕರು, ರಾಜಕೀಯ ಮುತ್ಸದ್ದಿಗಳು ಸೇರಿದಂತೆ ಸುಮಾರು 15,000 ಕ್ಕೂ ಹೆಚ್ಚು ಗಣ್ಯರು ಪಾಲ್ಗೊಂಡಿದ್ದಾರೆ.

ಸಭಾಪತಿ ಬಸವರಾಜ ಹೊರಟ್ಟಿ ನೇತೃತ್ವದ ತಂಡ ಶೃಂಗ ಸಭೆಯ ಅಂಗವಾಗಿ ಅಮೇರಿಕಾದ ಮ್ಯಾಸಚೂಸೆಟ್ಸ್ ಸ್ಟೇಟ್ ಹೌಸ್ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಹಾರ್ವರ್ಡ್ ವಿಶ್ವವಿದ್ಯಾಲಯ ಭೇಟಿ ನೀಡಿ ಅಮೇರಿಕಾದಲ್ಲಿರುವ ಭಾರತೀಯ ಮೂಲದ ಶೈಕ್ಷಣಿಕ ತಜ್ಞರೊಂದಿಗೆ ಸಂವಾದ ನಡೆಸಿದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ