LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಿ.ಎಲ್.ಡಿ.ಇ. ಸಂಸ್ಥೆ ಸಹಯೋಗದಲ್ಲಿ ಕ್ಷೀರ ಯೋಜನೆಗೆ ಪ್ರಯೋಗಾರ್ಥ ಚಾಲನೆ

ವಿಜಯಪುರ: ಮುಂದಿನ ಐದು ವರ್ಷಗಳಲ್ಲಿ ವಿಜಯಪುರ ಜಿಲ್ಲೆಯು ದೇಶದಲ್ಲಿ ಅತೀ ಹೆಚ್ಚು ಹಾಲು ಉತ್ಪಾದಿಸುವ‌ ಮೊದಲ ಮೂರು ಜಿಲ್ಲೆಗಳಲ್ಲಿ ಒಂದಾಗಲಿದೆ ಎಂದು ಪದ್ಮಶ್ರೀ ಪುರಸ್ಕೃತ ಉದ್ಯಮಿ ಪ್ರಶಾಂತ್ ಪ್ರಕಾಶ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಶನಿವಾರ ಬಿ.ಎಲ್.ಡಿ.ಇ ಸಂಸ್ಥೆ, ಕೃಷಿಕಲ್ಪ ಫೌಂಡೇಶನ್ ಹಾಗೂ ತಿಪಟೂರಿನ ಅಕ್ಷಯಕಲ್ಪ ಫೌಂಡೇಶನ್ ಸಹಯೋಗದಲ್ಲಿ ಜಿಲ್ಲೆಯಲ್ಲಿ ಸುಸ್ಥಿರ ಹೈನುಗಾರಿಕೆ ಉತ್ತೇಜಿಸಲು ಕ್ಷೀರ ಪೈಲಟ್ ಯೋಜನೆಗೆ ಸರಕಾರಿ ಶಾಲಾ ಮಕ್ಕಳಿಗೆ ಹಾಲು ಕುಡಿಸುವ ಮೂಲಕ ವಿನೂತನವಾಗಿ ಚಾಲನೆ ನೀಡಿ ಅವರು ಮಾತಾಡಿದರು.

ಕಳೆದ 15-20 ವರ್ಷಗಳ ಕಾಲ ನವ್ಯೋದ್ಯಮಗಳಿಗೆ ಉತ್ತೇಜನ ನೀಡಿ ನಗರಾಭಿವೃದ್ಧಿಯತ್ತ ಗಮನ ಹರಿಸಿದ್ದೆ. ಸಚಿವ ಎಂ.ಬಿ. ಪಾಟೀಲರ ಸಹಯೋಗದಲ್ಲಿ ಈಗ ಗ್ರಾಮೀಣ ಭಾಗಗಳಲ್ಲೂ ಕೈಗಾರಿಕೆಗಳ ಆರಂಭಕ್ಕೆ ಆದ್ಯತೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಈ ಯೋಜನೆಗೆ ಚಾಲನೆ ನೀಡಲು ಬಿ.ಎಲ್.ಡಿ.ಇ ಡೀಮ್ಡ್ ವಿವಿ ಕುಲಾಧಿಪತಿ ಬಸನಗೌಡ ಎಂ.ಪಾಟೀಲ ಈಗಾಗಲೇ 15 ಸಭೆ ಮಾಡಿದ್ದಾರೆ. ತಂತ್ರಜ್ಞಾನ ಬಳಸಿ ಹಾಲು ಉತ್ಪಾದನೆ ಹೆಚ್ಚಿಸಲು ರೂಪುರೇಷೆ ಸಿದ್ಧಪಡಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಸಚಿವ ಎಂ.ಬಿ. ಪಾಟೀಲ ಮಾತನಾಡಿ, ಇದು ರೈತರು, ಮಹಿಳೆಯರು ಮತ್ತು ಯುವಜನ ಪರ ಯೋಜನೆಯಾಗಿದೆ. ನಾವು ಕೈಗೊಂಡ ಕೋಟಿ ವೃಕ್ಷ ಅಭಿಯಾನದಂತೆ ಎಲ್ಲರೂ ಇದರಲ್ಲೂ ತೊಡಗಿಸಿ ಕೊಳ್ಳಬೇಕು. ಹೈನುಗಾರಿಕೆ ಮೂಲಕ ತೋಟಗಾರಿಕೆ, ಹೈನುಗಾರಿಕೆಗಳನ್ನು ವೈಜ್ಞಾನಿಕವಾಗಿ ಅಳವಡಿಸಿಕೊಂಡು ಉತ್ಪಾದನೆ ಹೆಚ್ಚಿಸಲು ಇದು ನೆರವಾಗಲಿದೆ. ಇದರಿಂದ ಆರ್ಥಿಕ ಸಬಲೀಕರಣ ಆಗಲಿದೆ ಎಂದಿದ್ದಾರೆ.

ಕೃಷಿಕಲ್ಪ ಫೌಂಡೇಶನ್ ಸಿಇಒ ಸಿ.ಎಂ.ಪಾಟೀಲ ಮಾತನಾಡಿ, ಬಸನಗೌಡ ಪಾಟೀಲರು ಮೂರು ವರ್ಷಗಳಿಂದ ಈ ಯೋಜನೆ ಜಾರಿಗೆ ಪ್ರಯತ್ನಿಸುತ್ತಿದ್ದರು. ಇದಕ್ಕಾಗಿ ಜಿಲ್ಲೆಯ 16 ಹಳ್ಳಿಗಳಲ್ಲಿ ಸಮಗ್ರ ಅಧ್ಯಯನ ನಡೆಸಲಾಗಿದೆ. ಯೋಜನೆ ಜಾರಿಗೆ ಸೂಕ್ತವಾದ ಐದು ಗ್ರಾಮಗಳನ್ನು ಆಯ್ಕೆ ಮಾಡಿ ತಿಪಟೂರಿನ ಮಾದರಿಯಲ್ಲಿ ರೈತರ ಆದಾಯ ಹೆಚ್ಚಿಸಲು ಕ್ರಮ ಕೈಗೊಂಡಿದ್ದೇವೆ. ಈ ನಿಟ್ಟಿನಲ್ಲಿ ರೈತರಿಗೆ ತರಬೇತಿ ನೀಡಲಾಗಿದೆ. ಬಿ.ಎಲ್.ಡಿ.ಇ ಸಂಸ್ಥೆಯ ಇನಕ್ಯೂಬೆಶನ್ ಸೆಂಟರ್ ಸಹಯೋಗದಲ್ಲಿ ಸ್ಟಾರ್ಟಪ್ ಗಳಿಗೂ ಅವಕಾಶ ನೀಡಲಾಗುವುದು. ರೈತ ಉತ್ಪಾದಕ ಸಂಸ್ಥೆಗಳ ಆದಾಯ ಹೆಚ್ಚಳ, ಮಾರುಕಟ್ಟೆ ಸೃಷ್ಟಿ, ಕ್ಷೀರ ಮತ್ತು ಉದ್ಯಮಶೀಲತೆ ಬೆಳವಣಿಗೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಅಕ್ಷಯಕಲ್ಪ ಫೌಂಡೇಶನ್ ಸಂಸ್ಥಾಪಕ ಶಶಿಕುಮಾರ್ ಮಾತನಾಡಿ, 40 ವರ್ಷಗಳಲ್ಲಿ ಮೂರನೇ ಎರಡರಷ್ಟು ಕೃಷಿಭೂಮಿ ಹಾಳಾಗಿದೆ. ಮುಂದಿನ 60 ವರ್ಷಗಳಲ್ಲಿ ಕೃಷಿಯೋಗ್ಯ ಭೂಮಿ ಸಂಪೂರ್ಣ ಮಾಯವಾಗಲಿದೆ. ಒಂದು ಶತಮಾನದ ಹಿಂದೆ ಇದ್ದ ಕೃಷಿ ಉತ್ಪಾದನೆ ಈಗ ಕಡಿಮೆಯಾಗಿದೆ. ಮಣ್ಣಿನ ಗುಣ ಕಾಪಾಡಿಕೊಂಡು ಕೃಷಿ ಉತ್ಪಾದನೆ ಹೆಚ್ಚಿಸಲು ಸಂಸ್ಥೆಯು ಈ ಯೋಜನೆಯಡಿ ಕೆಲಸ ಮಾಡಲಿದೆ. ಸ್ಥಳೀಯವಾಗಿ ಗೊಬ್ಬರ ತಯಾರಿಕೆ, ಹೈನುಗಾರಿಕೆ ಉಪವಸ್ತುಗಳನ್ನು ಉತ್ಪಾದಿಸಲು ತರಬೇತಿ, ಜಾನುವಾರುಗಳ ಆರೋಗ್ಯ ಸಂರಕ್ಷಣೆ, ವೈಜ್ಞಾನಿಕವಾಗಿ ಮೇವು ಉತ್ಪಾದನೆ, ಹಾಲು ಸಂಸ್ಕರಣೆಗೆ ಸೂಕ್ತ ತರಬೇತಿ ನೀಡಿ ಹಾಲು ಉತ್ಪಾದನೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಡಾ.ಕೆ. ಆನಂದ್ ಮಾತನಡಿದರು. ಬಿ.ಎಲ್.ಡಿ.ಇ ಡೀಮ್ಡ್ ವಿವಿ ಕುಲಾಧಿಪತಿ ಬಸನಗೌಡ ಎಂ.ಪಾಟೀಲ, ವಿಜಯಪುರ ಮತ್ತು ಬಾಗಲಕೋಟೆ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಈರನಗೌಡ ಕರಿಗೌಡ್ರ, ವಿಜಯಪುರ- ಬಾಗಲಕೋಟೆ ಹಾಲು ಉತ್ಪಾದಕರ ಸಂಘದ ವ್ಯವಸ್ಥಾಪಕ ನಿರ್ದೇಶಕ ಶಿವಕುಮಾರ ಸ್ವಾಮಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಪ್ರಭುರಾಜ ಹಿರೇಮಠ, ಪಶು ಸಂಗೋಪನೆ ಇಲಾಖೆ ಉಪನಿರ್ದೇಶಕ ಡಾ. ಅಶೋಕ ಗೊಣಸಗಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ರೈತರೊಂದಿಗೆ ಕ್ಷೀರ ಯೋಜನೆಯ ಕುರಿತು ಸಂವಾದ ನಡೆಸಲಾಯಿತು.

ಸಂಗೀತ ವಿಜಯಪುರದಲ್ಲಿ ಬಿ.ಎಲ್.ಡಿ.ಇ ಸಂಸ್ಥೆ, ಕೃಷಿಕಲ್ಪ ಫೌಂಡೇಶನ್ ಹಾಗೂ ಅಕ್ಷಯಕಲ್ಪ ಫೌಂಡೇಶನ್ ಸಹಯೋಗದಲ್ಲಿ ಜಿಲ್ಲೆಯಲ್ಲಿ ಸುಸ್ಥಿರ ಹೈನುಗಾರಿಕೆ ಉತ್ತೇಜಿಸಲು ಕ್ಷೀರ ಪೈಲಟ್ ಯೋಜನೆಗೆ ಸರಕಾರಿ ಶಾಲಾ ಮಕ್ಕಳಿಗೆ ಹಾಲು ಕುಡಿಸುವ ಮೂಲಕ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಉದ್ಯಮಿ ಪ್ರಶಾಂತ್ ಪ್ರಕಾಶ್, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಬಿ.ಎಲ್.ಡಿ.ಇ ಡೀಮ್ಡ್ ವಿವಿ ಕುಲಾಧಿಪತಿ ಬಸನಗೌಡ ಎಂ.ಪಾಟೀಲ, ಜಿಲ್ಲಾಧಿಕಾರಿ ಡಾ.ಆನಂದ್, ಅಕ್ಷಯಕಲ್ಪ ಫೌಂಡೇಶನ್ ಸಂಸ್ಥಾಪಕ ಶಶಿಕುಮಾರ್, ಕೃಷಿಕಲ್ಪ ಫೌಂಡೇಶನ್ ಸಿಇಒ ಸಿ.ಎಂ.ಪಾಟೀಲ, ವಿಜಯಪುರ- ಬಾಗಲಕೋಟೆ ಕೆಎಂಎಫ್ ಅಧ್ಯಕ್ಷ ಈರನಗೌಡ ಕರಿಗೌಡ್ರ ಉಪಸ್ಥಿತರಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ