LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತುಮಕೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಸಂಬಂಧ ಸಭೆ

ಬೆಂಗಳೂರು:ಬೆಂಗಳೂರಿನ ಖಾಸಗಿ ಹೊಟೇಲ್ ರೆಯಾಡಿಸನ್‌ನಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಹಾಗು ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರ ನೇತೃತ್ವದಲ್ಲಿ ನಡೆದ ತುಮಕೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಸಂಬಂಧ ಸಭೆ ನಡೆಸಲಾಯಿತು.

ಸಹಕಾರಿ ಸಚಿವರಾದ ಕೆ.ಎನ್.ರಾಜಣ್ಣ ಅವರು ಏರ್ಪಡಿಸಿದ್ದ ಔತಣಕೂಟದಲ್ಲಿ ಗೃಹಸಚಿವರಾದ ಡಾ.ಜಿ.ಪರಮೇಶ್ವರ್,ದೆಹಲಿಯ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕರಾದ ಟಿ.ಬಿ.ಜಯಚಂದ್ರ,ಗುಬ್ಬಿಯ ಎಸ್.ಆರ್.ಶ್ರೀನಿವಾಸ್, ತಿಪಟೂರಿನ ಷಡಕ್ಷರಿ, ಪಾವಗಡ ಶಾಸಕರಾದ ವಿ.ವೆಂಕಟೇಶ್,ಕುಣಿಗಲ್‌ನ ಹೆಚ್.ಡಿ.ರಂಗನಾಥ್, ಮಾಜಿ ಸಚಿವರಾದ ವೆಂಕಟರವಣಪ್ಪ, ಮಾಜಿ ಶಾಸಕರಾದ ಡಿ.ಸಿ.ಗೌರಿಶಂಕರ್,ಹೆಚ್.ನಿಂಗಪ್ಪ, ಡಾ.ರಫೀಕ್ ಅಹಮದ್,ಬಿ.ಎಂ.ಎಲ್.ಕಾಂತರಾಜು,ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇಕ್ಬಾಲ್ ಅಹಮದ, ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರಗೌಡ ಸೇರಿದಂತೆ ಹಲವು ಮುಖಂಡರು 2024ರ ಲೋಕಸಭಾ ಚುನಾವಣೆಯ ತುಮಕೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ಆಯ್ಕೆ ಕುರಿತಂತೆ ಚರ್ಚೆ ನಡೆಸಿದರು.

ಅಂತಿಮವಾಗಿ ತುಮಕೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ಆಯ್ಕೆಯ ಸಂಪೂರ್ಣ ಜವಾಬ್ದಾರಿಯನ್ನು ಗೃಹ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ಹಾಗೂ ಸಹಕಾರಿ ಸಚಿವರಾದ ಕೆ.ಎನ್.ರಾಜಣ್ಣ ಅವರಿಗೆ ನೀಡಿದ್ದು, ಅವರು ಆಯ್ಕೆ ಮಾಡುವ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವುದಾಗಿ ಸಭೆಯಲ್ಲಿದ್ದ ಎಲ್ಲರೂ ಒಪ್ಪಿಗೆ ಸೂಚಿಸಿದರು.

ಸಹಕಾರ ಸಚಿವರದ ಕೆ.ಎನ್.ರಾಜಣ್ಣ ಅವರು ಏರ್ಪಡಿಸಿದ್ದ ಔತಣಕೂಟದ ವೇಳೆ ನಿಕಟಪೂರ್ವ ಶಾಸಕರಾದ ಡಿ.ಸಿ.ಗೌರಿಶಂಕರ್ ಅವರು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿರಾದ ಡಾ.ಜಿ.ಪರಮೇಶ್ವರ್, ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ,ಮಾಜಿ ಸಚಿವರುಗಳಾದ ವೆಂಕಟರವಣಪ್ಪ, ಟಿ.ಜಿ.ಜಯಚಂದ್ರ, ಎಸ್.ಆರ್.ಶ್ರೀನಿವಾಸ್,ಶಾಸಕರಾದ ಡಾ.ಹೆಚ್.ಡಿ.ರಂಗನಾಥ್,ಕೆ.ಷಡಕ್ಷರಿ ಹಾಗೂ ಮಾಜಿ ಶಾಸಕರುಗಳಿಗೆ ಅತ್ಮೀಯವಾಗಿ ಅಭಿನಂದಿಸಿದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ