LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅನಧಿಕೃತ ಫ್ಲೆಕ್ಸ್ ಗಳ ತೆರವು ಕಾರ್ಯಾಚರಣೆ: 3800ಕ್ಕೂ ಹೆಚ್ಚು ಫ್ಲೆಕ್ಸ್ ತೆರವು - 48 FIR ದಾಖಲು

ಬೆಂಗಳೂರು: ನಗರದಲ್ಲಿ ಅನಧಿಕೃತವಾಗಿ ಫ್ಲೆಕ್ಸ್/ಬ್ಯಾನರ್ ಅಳವಡಿಸುವವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಅದರಂತೆ ಇದುವರೆಗೆ ಪೊಲೀಸ್ ಠಾಣೆಯಲ್ಲಿ 76 ದೂರುಗಳನ್ನು‌ ನೀಡಿದ್ದು, 48 ಎಫ್‌ಐಆರ್ ದಾಖಲಿಸಲಾಗಿದೆ.

ಪಾಲಿಕೆ ವ್ಯಾಪ್ತಿಯಲ್ಲಿ ಯಾವುದೇ ಅನಧಿಕೃತ ಜಾಹೀರಾತುಗಳು ಇರದಂತೆ ಸನ್ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಶ್ರೀ *ಡಿ.ಕೆ ಶಿವಕುಮಾರ್* ರವರು ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದು, ಅದರಂತೆ ಮುಖ್ಯ ಆಯುಕ್ತರು ಸೂಚನೆ ನೀಡಿರುತ್ತಾರೆ. ಅದರಂತೆ ಕಂದಾಯ ವಿಭಾಗದ ವಿಶೇಷ ಆಯುಕ್ತರಾದ *ಮುನೀಶ್ ಮೌದ್ಗಿಲ್* ರವರು ಎಲ್ಲಾ 8 ವಲಯಗಳ ಅಧಿಕಾರಿಗಳ ಜೊತೆ ಪ್ರತಿನಿತ್ಯ ಪರಿಶೀಲನಾ ಸಭೆ ನಡೆಸುತ್ತಿದ್ದು, ಯಾವುದೇ ಅನಧಿಕೃತ ಜಾಹೀರಾತುಗಳು ಇರದಂತೆ ಸೂಚನೆ ನೀಡುವ ಜೊತೆಗೆ ಅನಧಿಕೃತವಾಗಿ ಫ್ಲೆಕ್ಸ್/ಬ್ಯಾನರ್ಸ್ ಹಾಕುವವರ ಮೇಲೆ ಎಫ್.ಐ.ಆರ್ ದಾಖಲಿಸಲು ಸೂಚನೆ ನೀಡಿದ್ದಾರೆ.

ನಗರದಾದ್ಯಂತ ದಿನಾಂಕ: 01-06-2024 ರಿಂದ ನಿನ್ನೆಯವರೆಗೆ 3843 ಫ್ಲೆಕ್ಸ್, ಬ್ಯಾನರ್, ಎಲ್.ಇ.ಡಿ ಹಾಗೂ ಹೋರ್ಡಿಂಗ್ಸ್ ಗಳನ್ನು ತೆರವುಗೊಳಿಸಲಾಗಿದೆ. ಪೊಲೀಸ್ ಠಾಣೆಯಲ್ಲಿ 76 ದೂರುಗಳನ್ನು ದಾಖಲಿಸಿದ್ದು, ಅದರಲ್ಲಿ 48 ಎಫ್.ಐ.ಆರ್ ಗಳನ್ನು ದಾಖಲಿಸಲಾಗಿದೆ. 75,000 ರೂ. ದಂಡ ವಿಧಿಸಲಾಗಿದೆ.*

ಅನಧಿಕೃತ ಜಾಹೀರಾತು ಅಳವಡಿಸದಿರಲು ಕೋರಿದೆ:

ಪಾಲಿಕೆಯ ವ್ಯಾಪ್ತಿಯಲ್ಲಿ ಪ್ರಸ್ತುತ ಜಾರಿಯಲ್ಲಿರುವ “ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಹೊರಾಂಗಣ ಜಾಹೀರಾತು ಫಲಕ ಮತ್ತು ಸಾರ್ವಜನಿಕ ಸಂದೇಶದ ಉಪ ವಿಧಿಗಳು-2018"ರಲ್ಲಿ ಯಾವುದೇ ವಸತಿ ಪ್ರದೇಶಗಳಲ್ಲಿ, ಖಾಸಗಿ ಸ್ವತ್ತುಗಳಲ್ಲಿ ಜಾಹೀರಾತು ಫಲಕಗಳನ್ನು ಅಳವಡಿಸಿ ವಾಣಿಜ್ಯ ಜಾಹೀರಾತುಗಳನ್ನು, ಎಲ್.ಇ.ಡಿ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು ಹಾಗೂ ಸಾರ್ವಜನಿಕ ಮತ್ತು ವೈಯಕ್ತಿಕ ಜಾಹೀರಾತುಗಳು, ಶುಭಾಶಯಗಳು, ಸಭೆ ಸಮಾರಂಭಗಳು ಕುರಿತ ಜಾಹೀರಾತು / ಪ್ರಕಟಣೆಗಳ ಪ್ಲೆಕ್ಸ್, ಬ್ಯಾನರ್, ಬಂಟಿAಗ್ಸ್, ಭಿತ್ತಿಪತ್ರ, ಬಾವುಟಗಳು ಇತ್ಯಾದಿ ಅಳವಡಿಸುವುದನ್ನು ನಿಷೇದಿಸಲಾಗಿದೆ. ಆದ್ದರಿಂದ ಯಾರೊಬ್ಬರೂ ಕೂಡಾ ಅನಧಿಕೃತವಾಗಿ ಜಾಹೀರಾತು ಅಳವಡಿಸದಿರಲು ಕೋರಿದೆ.

ಅನಧಿಕೃತ ಜಾಹೀರಾತುಗಳಿಂದ ನಗರದ ಸೌಂದರ್ಯ ಹಾಳು:

ನಗರದ ರಸ್ತೆ ಬದಿ, ಪಾದಚಾರಿ ಮಾರ್ಗ, ಮೇಲುಸೇತುವೆ ಸೇರಿದಂತೆ ಇನ್ನಿತರೆ ಕಡೆ ಅನಧಿಕೃತವಾಗಿ ಪ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್ ಅಳವಡಿಸುವುದರಿಂದ ನಾಗರೀಕರ ಸುಗಮ ಸಂಚಾರಕ್ಕೆ ಅಡ್ಡಿಯಾಗುವುದರ ಜೊತೆಗೆ ನಗರದ ಸೌಂದರ್ಯ ಹಾಳಾಗುತ್ತಿದೆ. ಅಲ್ಲದೆ ಪರಿಸರಕ್ಕೆ ಮಾರಕವಾಗಿರುತ್ತದೆ.

ದೂರವಾಣಿ 1533ಗೆ ಕರೆ ಮಾಡಿ ಅಥವಾ ವಾಟ್ಸಪ್ ಸಂಖ್ಯೆ 9480683939 ಗೆ ಛಾಯಾಚಿತ್ರದ ಸಮೇತ ದೂರು ನೀಡಿ


ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತುಗಳ ಕುರಿತು ನಾಗರೀಕರು ಪಾಲಿಕೆ ಸಹಾಯವಾಣಿ ಸಂಖ್ಯೆಯಾದ 1533 ಅಥವಾ ಜಾಹೀರಾತು ವಿಭಾಗದ ವ್ಯಾಟ್ಸಪ್ ಸಂಖ್ಯೆ *9480683939* ಗೆ ಛಾಯಾಚಿತ್ರ ಅಥವಾ ವೀಡಿಯೋ ಮಾಡಿ ವಿಳಾಸ ಸಹಿತ ಕಳುಹಿಸಿದಲ್ಲಿ ಪಾಲಿಕೆ ವತಿಯಿಂದ ಕೂಡಲೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ