LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅನಧಿಕೃತ ಓ.ಎಫ್.ಸಿ ಕೇಬಲ್‌ಗಳ ತೆರವು ಕಾರ್ಯಾಚರಣೆ ಆರಂಭ

ಬೆಂಗಳೂರು:ಬಿಬಿಎಂಪಿ ವ್ಯಾಪ್ತಿಯ ಮಹದೇವಪುರ ವಲಯ ವ್ಯಾಪ್ತಿಯ ಹೊರ ವರ್ತುಲ ರಸ್ತೆಯಲ್ಲಿ ಅನಧಿಕೃತವಾಗಿ ಅಳವಡಿಸಿರುವ ಒ.ಎಫ್.ಸಿ ಕೇಬಲ್‌ಗಳ ತೆರವು ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ನಗರದಲ್ಲಿ ಅನಧಿಕೃತವಾಗಿ ಅಳವಡಿಸಿರುವ ಓ.ಎಫ್.ಸಿ ಕೇಬಲ್ ಗಳ ತೆರವು ಕಾರ್ಯಾಚರಣೆ ನಡೆಸಲು ಆಯುಕ್ತರಾದ ತುಷಾರ್ ಗಿರಿನಾಥ್ ರವರು ಸೂಚನೆ ನೀಡಿರುತ್ತಾರೆ.

ಅದರಂತೆ ವಲಯ ಆಯುಕ್ತರಾದ ಇಬ್ರಾಯಿಮ್ ಮೈಗುರ್ ಹಾಗೂ ವಲಯ ಜಂಟಿ ಆಯುಕ್ತರಾದ ಡಾ. ದಾಕ್ಷಾಯಿಣಿ ರವರ ನೇತೃತ್ವದಲ್ಲಿ ಇಂದಿನಿಂದ ಮೂರು ದಿನಗಳ ಕಾಲ(3, 4 ಮತ್ತು 6ನೇ ತಾರೀಖು) ಅನಧಿಕೃತವಾಗಿ ಅಳವಡಿಸಿರುವ ಓ.ಎಫ್.ಸಿ ಕೇಬಲ್ ಗಳ ತೆರವು ಕಾರ್ಯಾಚರಣೆ ಪ್ರಕ್ರಿಯೆಯನ್ನು ನಡೆಸಲಾಗುತ್ತದೆ.

ಅದರಂತೆ, ಮಹದೇವಪುರ ವಲಯದಲ್ಲಿ ಬರುವ ಹೊರ ವರ್ತುಲ ರಸ್ತೆಯ ಇಬ್ಬಲೂರು ಜಂಕ್ಷನ್ ನಿಂದ ಲೌರಿ ಜಂಕ್ಷನ್ ಹಾಗೂ ಲೌರಿ ಜಂಕ್ಷನ್ ನಿಂದ ಕಾಡುಗೋಡಿಯವರೆಗೆ ಅನಧಿಕೃತವಾಗಿ ಅಳವಡಿಸಿರುವ ಓಎಫ್‌ಸಿ ಕೇಬಲ್‌ಗಳ ತೆರವು ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ. ಈ ಪೈಕಿ ತೆರವು ಕಾರ್ಯಾಚರಣೆಯಲ್ಲಿ ಅನಧಿಕೃತವಾಗಿ ವಿದ್ಯುತ್ ಕಂಬಗಳ ಮೇಲೆ ಜೋತಾಡುತ್ತಿದ್ದ, ಪಾದಚಾರಿ ಮಾರ್ಗಗಳಲ್ಲಿ ಅಳವಡಿಸಿದ್ದ, ಮೇಲುಸೇತುವೆಗಳ ಮೇಲೆ ಹಾಗೂ ಮರಗಳಿಗೆ ಸುತ್ತಿದ್ದ ಕೇಬಲ್‌ಗಳನ್ನು ತೆರವುಗೊಳಿಸಲಾಗುತ್ತಿದೆ.

ಅನಧಿಕೃತ ಓ.ಎಫ್.ಸಿ ಕೇಬಲ್ ತೆರವು ಕಾರ್ಯಾಚರಣೆಯಲ್ಲಿ ವಿದ್ಯುತ್ ವಿಭಾಗದ 10ಕ್ಕೂ ಹೆಚ್ಚು ತಂಡಗಳನ್ನು ನಿಯೋಜಿಸಲಾಗಿದ್ದು, ವಿದ್ಯುತ್ ವಾಹನದ ಲ್ಯಾಡರ್, ಏಣಿ ಹಾಗೂ ಸಿಬ್ಬಂದಿಗಳ ಸಹಯೋಗದಲ್ಲಿ ರಸ್ತೆಯ ಎರಡೂ ಬದಿ ಸೇರಿ ಸುಮಾರು 10 ಕಿ.ಮೀ‌ ಉದ್ದದ ರಸ್ತೆಯಲ್ಲಿ 14 ಟ್ರ್ಯಾಕ್ಟರ್ ಲೋಡ್ ಅನಧಿಕೃತ ಕೇಬಲ್ ಗಳನ್ನು ಕತ್ತರಿಸಿ ತೆರವುಗೊಳಿಸಲಾಗಿದೆ. ಕತ್ತರಿಸಿರುವ ಕೇಬಲ್‌ಗಳನ್ನು ಟ್ರ್ಯಾಕ್ಟರ್ ಗಳ ಮೂಲಕ ತುಂಬಿಕೊಂಡು ಪಾಲಿಕೆಯ ಖಾಲಿ ಜಾಗದಲ್ಲಿ ಶೇಖರಿಸಲಾಗುತ್ತಿದೆ.

ಸಾರ್ವಜನಿಕರ ಸುರಕ್ಷತೆ ಮತ್ತು ವಾಹನ ಸವಾರರ ಸಂಚಾರಕ್ಕೆ ಯಾವುದೆ ತೊಂದರೆಯಾಗದಿರುಲು ಅನಧಿಕೃತ ಒ.ಎಫ್.ಸಿ ತೆರವುಗೊಳಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಅನಧಿಕೃತ ಕೇಬಲ್‌ಗಳನ್ನು ಅಳವಡಿಸಿದಲ್ಲಿ ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಿ ಸಂಬಂಧಪಟ್ಟ ಸಂಸ್ಥೆಗಳ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು. ಜೊತೆಗೆ ಅನಧಿಕೃತ ಕೇಬಲ್ ತೆರವು ಕಾರ್ಯಾಚರಣೆಗೆ ಸಂಚಾರ ಪೊಲೀಸ್ ವಿಭಾಗ ಹಾಗೂ ಸಾರ್ವಜನಿಕರು ಸಹಕರಿಸುವಂತೆ ವಲಯ ಜಂಟಿ ಆಯುಕ್ತರಾದ ಡಾ. ಕೆ. ದಾಕ್ಷಾಯಿಣಿರವರು ಕೋರಿದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ