LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಾಲ್ತುಳಿತಕ್ಕೆ ರಾಜ್ಯ ಕಾಂಗ್ರೆಸ್ ಸರಕಾರವೇ ಕಾರಣ; ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

ನವದೆಹಲಿ: ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನೂಕುನುಗ್ಗಲುನಿಂದ ಉಂಟಾದ ಕಾಲ್ತುಳಿತಕ್ಕೆ ಹತ್ತಕ್ಕೂ ಹೆಚ್ಚು ಜನರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ತೀವ್ರ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನೂಕುನುಗ್ಗಲುನಿಂದ ಉಂಟಾದ ಕಾಲ್ತುಳಿತಕ್ಕೆ ಹತ್ತಕ್ಕೂ ಹೆಚ್ಚು ಜನರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ನನಗೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ. ಗೆಲುವಿನ ಸಂಭ್ರಮಕ್ಕೆ ಮುನ್ನವೇ ಮುಗ್ಧರ ಜೀವ ನಷ್ಟವಾಗಿರುವುದು ನನಗೆ ಅತೀವ ದುಃಖ ತಂದಿದೆ ಎಂದು ಅವರು ಕಂಬನಿ ಮಿಡಿದಿದ್ದಾರೆ.

ಸರಿಯಾದ ಪೂರ್ವಸಿದ್ಧತೆ ಮಾಡಿಕೊಳ್ಳದೆ, ಯಾವುದೇ ಮುನ್ನೆಚ್ಚರಿಕೆ ವಹಿಸದಿರುವುದೇ ಈ ಮಹಾದುರಂತಕ್ಕೆ ನೇರ ಕಾರಣ. ದುರಂತದ ಹೊಣೆಯನ್ನು ರಾಜ್ಯ ಕಾಂಗ್ರೆಸ್ ಸರಕಾರವೇ ಹೊತ್ತುಕೊಳ್ಳಬೇಕು. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ಕೊಡಿಸುವುದರ ಜತೆಗೆ ಮೃತರ ಕುಟುಂಬಗಳ ನೆರವಿಗೆ ಸರಕಾರ ಕೂಡಲೇ ಧಾವಿಸಬೇಕು ಎಂದು ಕೇಂದ್ರ ಸಚಿವರು ಒತ್ತಾಯ ಮಾಡಿದ್ದಾರೆ.

ಕ್ರೀಡಾಂಗಣ ಹಾಗೂ ವಿಧಾನಸೌಧದ ಬಳಿ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ಬಂದಿದ್ದ ಕ್ರಿಕೆಟ್ ಪ್ರೇಮಿಗಳು ಗಾಬರಿ, ಆತುರಕ್ಕೆ ಒಳಗಾಗದೆ ಕ್ಷೇಮವಾಗಿ ಮನೆ ತಲುಪಬೇಕು ಎಂಬುದು ನನ್ನ ಕಳಕಳಿ. ಪೊಲೀಸರು ಈ ನಿಟ್ಟಿನಲ್ಲಿ ತುರ್ತುಕ್ರಮ ವಹಿಸಿ ಜನರಿಗೆ ನೆರವಾಗಬೇಕು ಎಂದು ಅವರು ಆಗ್ರಹಿಸಿದ್ದಾರೆ.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ