LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಳೆಯಿಂದಾದ ಪ್ರದೇಶಗಳ ಸಮಸ್ಯೆಗಳನ್ನು ನಿವಾರಿಸಲು ತುರ್ತು ಕ್ರಮ

*ಮಾಧ್ಯಮ ಪ್ರಕಟಣೆ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಮಂಗಳವಾರ ಇಡೀ ದಿನ ಮಳೆಯಾದ ಪರಿಣಾಮ ನಗರದ ಮಹದೇವಪುರ ವಲಯ ಹಾಗೂ ಯಲಹಂಕ ವಲಯ ವ್ಯಾಪ್ತಿಯ ಕೆಲ ಪ್ರದೇಶಗಳಲ್ಲಿ ಆಗಿದ್ದ ತೊಂದರೆಗಳನ್ನು, ಬಹುತೇಕ ಕಡೆ ಸಮಸ್ಯೆಗಳನ್ನು ನಿವಾರಿಸಲು ತುರ್ತು ಕ್ರಮವಹಿಸಲಾಗಿದೆ.

ಸಾಯಿಬಾಬ ಲೇಔಟ್:

ಮಹದೇವಪುರ ವಲಯ ಹೊರಮಾವು ಉಪವಿಭಾಗದಲ್ಲಿ ಬರುವ ಸಾಯಿಬಾಬ ಲೇಔಟ್ ಹಾಗೂ ವಡ್ಡರಪಾಳ್ಯ ದಲ್ಲಿ 180ಕ್ಕೂ ಹೆಚ್ಚು ಮನೆಗಳು‌ ಬರಲಿವೆ. ರಾಜಕಾಲುವೆಯಲ್ಲಿ ಮಳೆ ನೀರಿನ ಹರಿವಿನ ಮಟ್ಟ ಹೆಚ್ಚಾಗಿ, ನೀರು ಹಿಮ್ಮುಖವಾಗಿ ಚಲಿಸಿರುವ ಕಾರಣ ರಾಜಕಾಲುವೆಯ ಇಕ್ಕೆಲದಲ್ಲಿರುವ ಲೇಔಟ್ ನಲ್ಲಿ ನೀರು ತುಂಬಿರುತ್ತದೆ. ಈ ಸಂಬಂಧ ಪಾಲಿಕೆ ಅಧಿಕಾರಿಗಳು 2 ದಿನದಿಂದ ಖುದ್ದು ಸ್ಥಳದಲ್ಲಿದ್ದು, ನೀರು ತೆರವುಗೊಳಿಸುವ ಕೆಲಸ ಮಾಡುತ್ತಿದ್ದಾರೆ.

ಅದರಂತೆ, ಲೇಔಟ್ ನಲ್ಲಿ ಬರುವ 9 ರಸ್ತೆಗಳ ಪೈಕಿ 5 ರಸ್ತೆಗಳಲ್ಲಿ ಸಂಪೂರ್ಣ ನೀರನ್ನು ತೆರವುಗೊಳಿಸಲಾಗಿದೆ. ಇನ್ನುಳಿದ 4 ರಸ್ತೆಗಳಲ್ಲಿರುವ ನೀರುನ್ನು ಅಗ್ನಿಶಾಮಕ ಹಾಗೂ ಪಾಲಿಕೆ ವ್ಯವಸ್ಥೆ ಮಾಡಿಕೊಂಡಿರುವ ಪಂಪ್ ಗಳ ಮೂಲಕ ನೀರುನ್ನು ಹೊರಹಾಕುತ್ತಿದ್ದು, ನಾಳೆಯೊಳಗಾಗಿ ನೀರನ್ನು ತೆರವುಗೊಳಿಸಲಾಗುವುದು.

ಸ್ಥಳೀಯ ನಿವಾಸಿಗಳಿಗೆ ಪಾಲಿಕೆ ವತಿಯಿಂದ ಕುಡಿಯುವ ನೀರು, ತಿಂಡಿ ಹಾಗೂ ಊಟದ ವ್ಯವಸ್ಥೆ ಮಾಡಲಾಗಿದೆ. ಅದಲ್ಲದೆ ಮನೆಗಳಿಗೆ ನೀರು ನುಗ್ಗಿರುವಂತಹ ನಿವಾಸಿಗಳಿಗೆ ತಂಗಲು ಹೋಟಲ್ ವ್ಯವಸ್ಥೆ ಮಾಡಲಾಗಿದೆ.

ಸಾಯಿಬಾಬ ಲೇಔಟ್ ನಲ್ಲಿ ಇರುವ ಸಮಸ್ಯೆಯನ್ನು ಬಗೆಹರಿಸುವ ಸಲುವಾಗಿ ವಲಯ ಅಧಿಕಾರಿ/ಸಿಬ್ಬಂದಿಗಳು ಸ್ಥಳದಲ್ಲಿದ್ದು, ಇರುವ ಸಮಸ್ಯೆಯನ್ನು ಬಗೆಹರಿಸುತ್ತಿದ್ದಾರೆ. ಸಾಯಿಬಾಬ ಲೇಔಟ್ ನಲ್ಲಿ ನೀರು ನುಗ್ಗಿರುವ ಮನೆಗಳ ಸಮೀಕ್ಷೆ ನಡೆಸಿ ಅರ್ಹ ಫಲಾನುಭವಿಗಳಿಗೆ ಪರಿಹಾರ ನೀಡಲಾಗುವುದು.

ಕೇಂದ್ರೀಯ ವಿಹಾರ್ ಅಪಾರ್ಟ್ಮೆಂಟ್:

ಯಲಹಂಕ ವಲಯದ ಕೇಂದ್ರೀಯ ವಿಹಾರ್ ಅಪಾರ್ಟ್ಮೆಂಟ್ ನಲ್ಲಿ ನಿಂತಿದ್ದ ನೀರನ್ನು ಇಂದು ಮಧ್ಯಾಹ್ನ 2 ಗಂಟೆಗೆ ಸಂಪೂರ್ಣವಾಗಿ ಹೊರಹಾಕಲಾಗಿದೆ. ಇನ್ನು ಫಾತಿಮಾ ಲೇಔಟ್ ಹಾಗೂ ಇನ್ನಿತರ ಕಡೆ ನೀರು ನುಗ್ಗಿರುವ ಮನೆಗಳ ಸಮೀಕ್ಷೆ ನಡೆಸುತ್ತಿದ್ದು, ಅರ್ಹ ಫಲಾನುಭವಿಗಳಿಗೆ ಪರಿಹಾರ ನೀಡಲಾಗುವುದು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ