ಬೆಂಗಳೂರು : ಭಾರತ ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಹಾಗೂ ಜನಪ್ರಿಯ ಕಾರ್ಮಿಕ ಮುಖಂಡರಾದ ಎಚ್.ವಿ. ಅನಂತ ಸುಬ್ಬರಾವ್ ಅವರು ನಿಧನರಾದ ಸುದ್ದಿ ತಿಳಿದು ದುಃಖವಾಯಿತು.
ಸುದೀರ್ಘ ನಾಲ್ಕು ದಶಕಗಳ ಕಾಲ ಕಾರ್ಮಿಕ ಮುಖಂಡರಾಗಿ ಅನೇಕ ಚಳವಳಿಗಳನ್ನು ಮುನ್ನಡೆಸಿದ್ದ ಹೋರಾಟಗಾರ ಅನಂತ ಸುಬ್ಬರಾವ್ ನನಗೂ ಆತ್ಮೀಯರಾಗಿದ್ದರು. ಅವರ ದಣಿವರಿಯದ ಹೋರಾಟದ ಛಲ ಮತ್ತು ಸೈದ್ಧಾಂತಿಕ ಬದ್ಧತೆ ಹೋರಾಟಗಾರರಿಗೆ ಒಂದು ಮಾದರಿ.
ಅವರ ನಿರ್ಗಮನದಿಂದ ಸಮಾಜಕ್ಕೆ, ಮುಖ್ಯವಾಗಿ ಕಾರ್ಮಿಕ ವರ್ಗಕ್ಕೆ ತುಂಬಲಾರದ ನಷ್ಟವಾಗಿದೆ.
ಮೃತರ ಆತ್ಮಕ್ಕೆ ಚಿರಶಾಂತಿ ಲಭಿಸಲಿ, ಅವರ ಕುಟುಂಬವರ್ಗಕ್ಕೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನನೆ.
ಕಾರ್ಮಿಕರ ಪರವಾಗಿ ಯಾವುದೇ ಸಂದರ್ಭದಲ್ಲೂ ಮುಂದಾಳಥದಲ್ಲಿ ಕೆಲಸ ಮಾಡುತ್ತಿದ್ದ ಅನಂತ ಸುಬ್ಬರ ಇನ್ನೂ ನೆನಪು ಮಾತ್ರ ಅನಂತ ಸುಬ್ಬರಾವ್ ನಿಧನದ ಸುದ್ದಿ ಕೇಳಿ ನಾಡಿನ ರಾಜ್ಯ ರಾಜಕೀಯದ ದುರಿನರು ಕಾರ್ಮಿಕ ಮುಖಂಡರು ಹಿತೈಷಿಗಳು ಸಂತಾಪವನ್ನು ಸೂಚಿಸಿದ್ದಾರೆ.