LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಮನಗರದಲ್ಲಿ SIR ನಿಯಮ ಉಲ್ಲಂಘನೆ; ಚುನಾವಣಾ ಆಯೋಗದ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕೆಂಡಾಮಂಡಲ

ರಾಮನಗರ /ಬೆಂಗಳೂರು: ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರೀ ಲೋಪ ನಡೆದಿದೆ ಎಂದು ಆರೋಪಿಸಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ*ಅವರು ಚುನಾವಣಾ ಆಯೋಗದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.news_1783005836_2_276.webp

ಈ ಕುರಿತು 'X' ಖಾತೆಯಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, ರಾಮನಗರದಲ್ಲಿ SIR ಪ್ರಕ್ರಿಯೆಗೆ ಕಪ್ಪುಚುಕ್ಕೆ! ಮನೆ-ಮನೆಗೆ ಹೋಗಿ ಗಣತಿ ನಮೂನೆ ವಿತರಿಸಬೇಕಾದ BLO ಅಧಿಕಾರಿಗಳು, ರಾಮನಗರ ಟೌನ್ ನಗರಸಭೆಯ ವಾರ್ಡ್ ನಂ-23, ಟಿಪ್ಪುನಗರದ ಕಲ್ಯಾಣ ಮಂಟಪದಲ್ಲಿ 'SIR ಜಾತ್ರೆ' ಮಾಡುತ್ತಿದ್ದಾರೆ. ಇದು ನಿಯಮಗಳನ್ನು ಗಾಳಿಗೆ ತೂರಿ, ಪ್ರಜಾಪ್ರಭುತ್ವಕ್ಕೆ ಮಾಡಿದ ಅಣಕ ಎಂದು ಕಿಡಿಕಾರಿದ್ದಾರೆ.

ರಾಮನಗರ ಕ್ಷೇತ್ರದ ಪ್ರಸ್ತುತ SIR ಪ್ರಕ್ರಿಯೆಯನ್ನು ತಕ್ಷಣವೇ ಸ್ಥಗಿತಗೊಳಿಸಬೇಕು. ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗಳು ಖುದ್ದು ನೇರ ಮೇಲ್ವಿಚಾರಣೆ ವಹಿಸಿಕೊಳ್ಳಬೇಕು. ನಿಯಮ ಉಲ್ಲಂಘಿಸಿ ತಮ್ಮಿಷ್ಟದಂತೆ ವರ್ತಿಸುತ್ತಿರುವ ಭ್ರಷ್ಟ BLO ಅಧಿಕಾರಿಗಳನ್ನು ತಕ್ಷಣ ಅಮಾನತುಗೊಳಿಸಿ, ಕಠಿಣ ಕಾನೂನು ಕೈಗೊಳ್ಳಬೇಕು ಎಂದು ನಿಖಿಲ್  ಕುಮಾರಸ್ವಾಮಿ ಅವರು ಅಗ್ರಹಿಸಿದ್ದಾರೆ.news_1783005835_1_959.webp

ಪಾರದರ್ಶಕತೆಗೆ ಹೆಸರಾದ ಚುನಾವಣಾ ಆಯೋಗ, ರಾಮನಗರದಲ್ಲಿ ಕಾನೂನು ಬಾಹಿರವಾಗಿ ನಡೆಯುತ್ತಿರುವ ಈ ಅಕ್ರಮಗಳ ವಿರುದ್ಧ ಕಣ್ಣುಮುಚ್ಚಿ ಕುಳಿತುಕೊಳ್ಳಬಾರದು. ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಿ, ಪ್ರಜಾಪ್ರಭುತ್ವವನ್ನು ಉಳಿಸಿ ಎಂದು ಅವರು ಒತ್ತಾಯಿಸಿದ್ದಾರೆ.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
 ಖೋಪೋಲಿಯಲ್ಲಿ ಅಕ್ಟೋಬರ್ 30 ರಿಂದ ಭಾರತೀಯ ಶಾಲೆಗಳ ಶಿಕ್ಷಣ ಶೃಂಗಸಭೆಹಿಲ್ಟನ್ ಗಾರ್ಡನ್ ಇನ್ ಬೆಂಗಳೂರು ಎಂಬಸಿ ಟೆಕ್‌ವಿಲ್ಲಾದಿಂದ ದೇಸಿ ಕ್ವೋಶೆಂಟ್‌ಗೆ ಚಾಲನೆಏಸರ್‌ನಿಂದ CSR ನ ಅಡಿಯಲ್ಲಿ  ನೇತ್ರದೀಪ್ ಕಣ್ಣಿನ ಆರೈಕೆ ಕೇಂದ್ರ ಆರಂಭಕಲೀಲಾ ಚಿತ್ರದ ಮುಹೂರ್ತ ಪಂಚಮುಖಿ ಗಣೇಶ ದೇವಾಲಯದಲ್ಲಿ ಚಾಲನೆವಿದ್ಯಾರ್ಥಿಗಳು ವೃತ್ತಿ ಜೊತೆಗೆ ಪ್ರವೃತ್ತಿಯಲ್ಲೂ ಹೆಚ್ಚು ಗಮನ ಹರಿಸಬೇಕು: ಡಾ. ಚಂದ್ರ ಮೌಳಿ ಗಡ್ಡ ಮನಗೂನಗರದ ರಸ್ತೆ ಸಮಸ್ಯೆಗಳ ಪತ್ತೆಗೆ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ತಂತ್ರಜ್ಞಾನ ಬಳಕೆ : ಆಯುಕ್ತ ಕೆ. ಎನ್. ರಮೇಶ್ಪ್ರತಿ 10 ಭಾರತೀಯ ಮಕ್ಕಳಲ್ಲಿ ಕೇವಲ ಮೂವರಿಗೆ ಮಾತ್ರ ಹೊಂದಾಣಿಕೆಯಾಗುವ ಮೂಳೆ ಮಜ್ಜೆ ದಾನಿ ಲಭ್ಯಕುಮಾರಣ್ಣ ಬಾಂಬು ಹಾಕುವ ಟೈಮು ಬಂದೇಬಿಡ್ತಾ?ಶಿಕ್ಷಕರಿಂದಾಗಿಯೇ ರಾಜ್ಯದ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ: ಸಚಿವ ಮಧು ಬಂಗಾರಪ್ಪ ಬಣ್ಣನೆಕಳಂಕಿತ ಪಶುವೈದ್ಯಾಧಿಕಾರಿ ಮೇಲೆ ಕ್ರಮ ಕೈಕೊಂಡು,ಅಕಳಂಕಿತರಿಗೆ ನ್ಯಾಯ ನೀಡಿ: ಡಾ.ಹನುಮಂತಪ್ಪ