LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಾವೇರಿ ನೀರು ಸರಬರಾಜು ಯೋಜನೆಯ 4ನೇ ಹಂತ 2ನೇ  ಘಟ್ಟಗಳಿಗೆ ನೀರು ವ್ಯತ್ಯಯ

ಬೆಂಗಳೂರು: ಕಾವೇರಿ ನೀರು ಸರಬರಾಜು ಯೋಜನೆಯ 4ನೇ ಹಂತ 2ನೇ  ಘಟ್ಟಗಳಿಗೆ ಒಳಪಡುವ  ಪ್ರದೇಶಗಳಲ್ಲಿ  ನೀರು ಪೂರೈಕೆಯಲ್ಲಿ ವ್ಯತ್ಯಯ ವಾಗಲಿದೆಯೆಂದು ಬಿ ಡಬ್ಲ್ಯೂ ಎಸ್ ಎಸ್ ಬಿ ಯ ಸಾರ್ವಜನಿಕ ಸಂಪರ್ಕ ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ ಕಾವೇರಿ ನೀರು ಸರಬರಾಜು ಯೋಜನೆ 4ನೇ ಹಂತ 2ನೇ ಘಟ್ಟದ, 2700 ಮೀ.ಮೀ. ವ್ಯಾಸದ ಕೊಳವೆ ಮಾರ್ಗದಲ್ಲಿನ ಸ್ಕೌರ್‌ ವಾಲ್ವ್ (Scour Valve) ಸೋರಿಕೆಯನ್ನು ತಡೆಗಟ್ಟುವ ಸಲುವಾಗಿ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುತ್ತಿರುವುದರಿಂದ ದಿನಾಂಕ: 16-07-2026ರ ಗುರುವಾರ ಬೆಳಿಗ್ಗೆ 06-00 ಗಂಟೆಯಿಂದ ಸಂಜೆ: 06-00 ಗಂಟೆಯವರೆಗೆ ಒಟ್ಟು 12 ಗಂಟೆಗಳ ಕಾಲ ಜಲರೇಚಕ ಯಂತ್ರಗಾರಗಳನ್ನು ಸ್ಥಗಿತಗೊಳಿಸಲಾಗುತ್ತಿದೆ. ಈ ಜಲರೇಚಕ ಯಂತ್ರಾಗಾರಗಳ ಸ್ಥಗಿತತೆಯಿಂದ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಸಾರ್ವಜನಿಕರು ಮುಂಜಾಗ್ರತೆಯಾಗಿ ಅಗತ್ಯವಿರುವ ನೀರನ್ನು ಶೇಖರಿಸಿಟ್ಟುಕೊಳ್ಳುವಂತೆ ಹಾಗೂ ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸಲು ಕೋರಲಾಗಿದೆ.
ಸದರಿ ಮಾಹಿತಿಯನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಪತ್ರಿಕೆಗಳಲ್ಲಿ ಪ್ರಕಟಿಸಲು ಹಾಗೂ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಪ್ರಸಾರ ಮಾಡಲು ಕೋರಿದೆ.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾರ್ಮಿಕರಿಗೆ ಸುರಕ್ಷತಾ ಕಿಟ್ ವಿತರಣೆ: ಕಾರ್ಮಿಕರ ಶ್ರಮಕ್ಕೆ ಗೌರವ ನೀಡುವುದು ನಮ್ಮ ಕರ್ತವ್ಯ : ಜಿ.ಆರ್. ದಿನೇಶ್ಕಾವೇರಿ ನೀರು ಸರಬರಾಜು ಯೋಜನೆಯ 4ನೇ ಹಂತ 2ನೇ  ಘಟ್ಟಗಳಿಗೆ ನೀರು ವ್ಯತ್ಯಯಅನಧಿಕೃತ ಜಾಹೀರಾತುಗಳನ್ನು ಮುಲಾಜಿಲ್ಲದೆ ತೆರವುಗೊಳಿಸಿ : ಕೃಷ್ಣ ಬೈರೇಗೌಡಬಿಡದಿ ಟೌನ್ ಶಿಪ್ ಯೋಜನೆ ಕೈ ಬಿಡದಿದ್ದರೆ ಗಾಂಧೀಜಿ ಪ್ರತಿಮೆ ಮುಂದೆ ಧರಣಿಹೂವಿನ ಹಡಗಲಿ ಇಂಜಿನಿಯರಿಂಗ್‌ ಕಾಲೇಜಿಗೆ ಎಂ.ಪಿ. ಪ್ರಕಾಶ್‌ ಹೆಸರಿಡುವಂತೆ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ : ಮಾಜಿ CM ಸಿದ್ದರಾಮಯ್ಯಪಾಲಿಕೆ ವ್ಯಾಪ್ತಿಯಲ್ಲಿ ಶ್ವಾನಗಳಿಗೆ ಲಸಿಕೆ-ಸಂತಾನಹರಣ ಕಾರ್ಯಕ್ರಮದ ಮಾಹಿತಿPM-SRI ಯೋಜನೆಯಡಿ ಯೋಗ ಕರಾಟೆ ತರಬೇತಿ ಒಬ್ಬರೇ ಶಿಕ್ಷಕರಿಂದ ನಡೆಸುವ ಆದೇಶ ಮರುಪರಿಶೀಲಿಸಿಆರೋಗ್ಯದ ಸಮಗ್ರ ಪರಿಕಲ್ಪನೆಗೆ ಯೋಗವೇ ಮಾರ್ಗ : ನ್ಯಾಯಮೂರ್ತಿ  ಡಾ. ವಿ. ಶ್ರೀಶಾನಂದಪುಸ್ತಕಗಳನ್ನು ಕೊಂಡು ಓದುವ ಅಭ್ಯಾಸವನ್ನು ಬೆಳೆಸಿಕೊಳ್ಳಬೇಕು :ಮಾಜಿ ಸಿಎಂ ಸಿದ್ದರಾಮಯ್ಯಬೀದಿಬದಿ ವ್ಯಾಪಾರಿಗಳ ಬದುಕಿನೊಂದಿಗೆ ಚೆಲ್ಲಾಟ ನಿಲ್ಲಿಸಿ - ಎಎಪಿ  ಆಗ್ರಹ