ಬೆಂಗಳೂರು : ಕಾವೇರಿ ನೀರು ಸರಬರಾಜು ಯೋಜನೆಯ 1ನೇ ಹಂತದ ಜಲರೇಚಕ ಯಂತ್ರಾಗಾರದಲ್ಲಿ ಪಂಪ್ ಸಂಖ್ಯೆ-4 ರ Isolation Sluice Valve Bypass ಹಾಗೂ Expansion Bellow ತುರ್ತು ದುರಸ್ತಿ ಕಾಮಗಾರಿಯನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು BWSSB ಸಾರ್ವಿನಿಕ ಸಂಪರ್ಕ ಅಧಿಕಾರಿ ಪ್ರಕಟಣೆಯಲ್ಲಿ ಹೇಳಿದ್ದಾರೆ.
ಸದರಿ ತುರ್ತು ದುರಸ್ತಿ ಕಾಮಗಾರಿಯನ್ನು ಕೈಗೊಳ್ಳುವ ಹಿನ್ನೆಲೆಯಲ್ಲಿ, ಕಾವೇರಿ ನೀರು ಸರಬರಾಜು ಯೋಜನೆ 1ನೇ ಹಂತದ ಜಲರೇಚಕ ಯಂತ್ರಾಗಾರಗಳನ್ನು ದಿನಾಂಕ 22-09-2026 ರಂದು ಬೆಳಿಗ್ಗೆ 06:00 ಗಂಟೆಯಿಂದ ಮಧ್ಯಾಹ್ನ 12:00 ಗಂಟೆಯವರೆಗೆ ಒಟ್ಟು 06 ಗಂಟೆಗಳ ಕಾಲ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುವುದು.
ಈ ಸ್ಥಗಿತದಿಂದ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇರುವುದರಿಂದ, ಸಂಬಂಧಪಟ್ಟ ಪ್ರದೇಶಗಳ ನಾಗರಿಕರು ಮುಂಜಾಗ್ರತಾ ಕ್ರಮವಾಗಿ ಅಗತ್ಯ ಪ್ರಮಾಣದ ನೀರನ್ನು ಮುಂಚಿತವಾಗಿ ಸಂಗ್ರಹಿಸಿಟ್ಟುಕೊಳ್ಳುವಂತೆ ಬೆಂಗಳೂರು ಜಲಮಂಡಳಿ ಮನವಿ ಮಾಡಿದೆ.
ನೀರಿನ ವ್ಯತ್ಯಯ ಉಂಟಾಗುವ ಪ್ರದೇಶಗಳ ವಿವರಗಳನ್ನು ಈ ಮಾಹಿತಿಯೊಂದಿಗೆ ಲಗತ್ತಿಸಲಾಗಿದೆ. ಸಾರ್ವಜನಿಕರು ಬೆಂಗಳೂರು ಜಲಮಂಡಳಿಯೊಂದಿಗೆ ಸಹಕರಿಸುವಂತೆ ಕೋರಲಾಗಿದೆ.