ಬೆಂಗಳೂರು: ಮಕರ ಸಮುದಾಯ ಶೈಕ್ಷಣಿಕ ರಾಜಕೀಯ ಹಾಗೂ ಆರ್ಥಿಕ ವಾಗಿ ಹಿಂದುಳಿದಿದ್ದು ಅದರ ಬಲವರ್ಧನೆಗೆ ಸರ್ಕಾರ ಅಭಿವೃದ್ಧಿ ನಿಗಮ ಕಾರ್ಯ ಆರಂಭ ಮಾಡಬೇಕೆಂದು ರಾಜ್ಯ ನೇಕಾರ ಸಮುದಾಯಗಳ ಒಕ್ಕೂಟದ ಅಧ್ಯಕ್ಷ ಬಿಎಸ್ ಸೋಮಶೇಖರ್ ಅವರು ತಿಳಿಸಿದರು.
ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಹಿಂದುಳಿದ ವರ್ಗಕ್ಕೆ ಸೇರಿದ ನೇಕಾರ ಸಮುದಾಯವು 60 ಲಕ್ಷ ಜನಸಂಖ್ಯೆ ಹೊಂದಿದ್ದು, ಸಮುದಾಯವು ಶೈಕ್ಷಣಿಕ ರಾಜಕೀಯ ಆರ್ಥಿಕವಾಗಿ ಹಿಂದುಳಿದಿದೆ, ಈ ಹಿಂದೆ ಇದ್ದ ಬಿಜೆಪಿ ಸರ್ಕಾರವು ನೇಕಾರ ಸಮುದಾಯಗಳ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲಾಯಿತು “ನೇಕಾರ ಸಮುದಾಯಗಳ ಅಭಿವೃದ್ಧಿ ನಿಗಮ” ವನ್ನು ಸ್ಥಾಪಿಸಲಾಗಿತ್ತು, ರಾಜ್ಯದಲ್ಲಿ ಈಗಿನ ಸರ್ಕಾರದ ಮುಖ್ಯ ಮಂತ್ರಿಗಳಾದಶ್ರೀ ಸಿದ್ದರಾಮಯ್ಯರವರಿಗೆ ನೇಕಾರ ಸಮುದಾಯಗಳ ಅಭಿವೃದ್ಧಿ ನಿಗಮ ಕಾರ್ಯಾರಂಭಕ್ಕೆ ನೇಕಾರ ಸಮುದಾಯಗಳ ಒಕ್ಕೂಟದಿಂದ ಮನವಿ ಮಾಡಿದರು.
ಎರಡನೇ ವಿಚಾರವಾಗಿ ಇತ್ತೀಚೆಗೆ “ಜಾತಿಗಣತಿ” ವಿಷಯ ಹೆಚ್ಚು ಪ್ರಾಮುಖ್ಯತೆಯನ್ನು ಪಡೆಯುತ್ತಿದೆ. ಸಿದ್ದರಾಮಯ್ಯರವರು ಈ ಹಿಂದೆ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಕೈಗೊಂಡಿದ್ದ “ಜಾತಿಗಣತಿ” ಕಾಂತರಾಜ್ ಆಯೋಗ ವರದಿ ಸಮೀಕ್ಷೆ ಪೂರ್ಣಗೊಂಡಿತ್ತು ಮತ್ತೊಮ್ಮೆ ಸಿದ್ದರಾಮಯ್ಯರವರೇ ಮುಖ್ಯಮಂತ್ರಿಗಳಾಗಿದ್ದಾರೆ. ಆದಕಾರಣ ಹಿಂದುಳಿದ ಸಮುದಾಯಗಳಿಗೆ ಹೆಚ್ಚಿನ ರೀತಿಯಲ್ಲಿ ಅನುಕೂಲ ತಂದುಕೊಡಬಲ್ಲ “ಜಾತಿಗಣತಿ” ವರದಿಯನ್ನು ಆದಷ್ಟು ಬೇಗ ಬಿಡುಗಡೆ ಮಾಡಬೇಕೆಂದು ಸರ್ಕಾರಕ್ಕೆ ಇದೇ ವೇಳ ಒತ್ತಾಯಿಸಿದರು.
ನೇಕಾರ ಸಮುದಾಯಗಳು ಸಂಘಟನೆ ಹಾಗೂ ಅಭಿವೃದ್ಧಿ ಉದ್ದೇಶದಿಂದ ಫೆಬ್ರುವರಿ ತಿಂಗಳಿನಲ್ಲಿ ಬಾಗಲಕೋಟೆಯಲ್ಲಿ “ಬೃಹತ್ ನೇಕಾರರ ಸಮುದಾಯಗಳ ಸಮಾವೇಶ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಸಮಾವೇಶಕ್ಕೆ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯರವರನ್ನು ಉದ್ಘಾಟನೆಗೆ ಆಹ್ವಾನಿಸಲಾಗುವುದು ಎಂದು ತಿಳಿಸಿದರು.
ಇನ್ನು ಕಾರ್ಯಕ್ರಮಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಸಮಾಜದ ಬಾಂಧವರು ಬೃಹತ್ ಸಂಖ್ಯೆಯಲ್ಲಿ ನೇಕಾರರು ಬಾಗಲಕೋಟೆ, ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಗದಗ-ಬೆಟಗೇರಿ, ಹಾವೇರಿ, ಬಿಜಾಪುರ, ಕೊಪ್ಪಳ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ನೇಕಾರರು ಬಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಮುದಾಯದ ವಿವಿಧ ಸಮಸ್ಯೆಗಳು, ಬೇಡಿಕೆಗಳ ಬಗ್ಗೆ ನೇಕಾರ ಸಮುದಾಯಗಳ ಒಕ್ಕೂಟದಿಂದ ಸರ್ಕಾರಕ್ಕೆ ವಿವಿಧ ಬೇಡಿಕೆಗಳ ಬಗ್ಗೆ ಮನವಿಯನ್ನು ಸಲ್ಲಿಸಲಾಗುತ್ತದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಒಕ್ಕೂಟದ ವಿವಿಧ ಪದಾಧಿಕಾರಿಗಳು ಸಮಾಜದ ಕುಲಬಾಂಧವರು ಇದೇ ವೇಳೆ ಉಪಸ್ಥಿತರಿದ್ದರು.