ಬೆಂಗಳೂರು: ಇಡೀ ವಿಶ್ವಕ್ಕೆ ಸಂಸ್ಕೃತಿ ಮತ್ತು ಸಂಸ್ಕಾರಗಳ ಪಾಠ ಹೇಳಿಕೊಟ್ಟ ನಮ್ಮ ಭವ್ಯ ಭಾರತದಲ್ಲಿ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲದಂತೆ ಆಗಿರುವುದು ಶೋಚನೀಯ ಸಂಗತಿ ಎಂದು ಹೆಣ್ಣು ಮಕ್ಕಳ ರಕ್ಷಣೆಯ ಆಂದೋಲನದ ಪ್ರಮುಖ ರೂವಾರಿ ಹಾಗು ಒಬ್ಬ ಹೆಣ್ಣು ಮಗುವಿನ ತಂದೆಯಾಗಿ ಪ್ರವೀಣ್ ತಿಳಿಸಿದರು.
ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹೆಣ್ಣು ಮಕ್ಕಳ ಮೇಲೆ ನಿರಂತರವಾಗಿ ಹತ್ತ್ಯಾಚಾರಗಳು ನಡೆಯುತ್ತಲೇ ಇವೆ, ಆದರೆ ಅದಕ್ಕೆ ಕಡಿವಾಣ ಮಾತ್ರ ಬೀಳುತ್ತಿಲ್ಲ, ಅತ್ಯಾಚಾರ ಎಸಗಿರುವ ವ್ಯಕ್ತಿಗಳು ರಾಜಾರೋಷವಾಗಿ ಯಾವ ಕಾನೂನಿಗೂ ಹೆದರದೆ ಇರುವುದು ಸಂಬಂಧಪಟ್ಟ ಪೊಲೀಸ್ ಇಲಾಖೆ ಮೇಲೆ ಹಲವು ಅನುಮಾನ ಮೂಡುವಂತಾಗಿದೆ.
ಹೆಣ್ಣು ಮಕ್ಕಳನ್ನು ಹೊರಗಡೆ ಬಿಡುವುದೇ ದೊಡ್ಡ ಸಮಸ್ಯೆ!
ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಮಾಡಿದವನಿಗೆ ಯಾಕೆ ನಮ್ಮ ದೇಶದ ಕಾನೂನು ಸುವ್ಯವಸ್ಥೆಯಲ್ಲಿ ಕಠಿಣವಾದ ಶಿಕ್ಷೆ ಇಲ್ಲ? ದೇಶದಲ್ಲಿ ಸಮಾನತೆ ಇಲ್ಲ? ಭಾರತ ದೇಶದಲ್ಲಿ ಒಬ್ಬ ಪುರುಷ ಎಷ್ಟು ಸ್ವತಂತ್ರವಾಗಿ ಜೀವನ ಮಾಡುತ್ತಾನೋ ಹಾಗೆ ಮಹಿಳೆಯು ಕೂಡ ಘನತೆ ಮತ್ತು ಗೌರವದಿಂದ ಹಾಗೂ ಪ್ರತಿಷ್ಠೆಯಿಂದ ಸಮಾಜದಲ್ಲಿ ಬದುಕುವಂತ ವ್ಯವಸ್ಥೆಯನ್ನು ನಿರ್ಮಾಣ ಮಾಡಿ ಕೊಡುವುದು ಸರ್ಕಾರದ ಜವಾಬ್ದಾರಿಯಲ್ಲವೇ? ರಾಜ್ಯ ಸರ್ಕಾರದ ಮುಂದೆಯಿಟ್ಟರು. ಹೆಣ್ಣು ಮಕ್ಕಳನ್ನು ಮನೆಯಿಂದ ಹೊರಗಡೆ ಒಂಟಿಯಾಗಿ ಕಲಿಸುವುದೇ ತಲೆನೋವಾಗಿ ಪರಿಣಮಿಸಿದೆ. ಪ್ರಜಾಪ್ರಭುತ್ವ ಇರುವ ದೇಶದಲ್ಲಿ ಪ್ರಜೆಗಳಿಗೆ ಅದರಲ್ಲೂ ಹೆಣ್ಣು ಮಕ್ಕಳಿಗೆ ಸ್ವತಂತ್ರವಾಗಿ ಬದುಕಲು ಹಕ್ಕಿಲ್ಲವೆ? ಇಂಥ ಕೃತ್ಯಗಳಿಗೆ ಸರ್ಕಾರಗಳು ಮಾಡಿರುವ, ವಿಧಿಸಿರುವ ಶಿಕ್ಷೆಗಳು ಎಷ್ಟರ ಮಟ್ಟಿಗೆ ಜಾರಿಯಾಗಿವೆ ಎಂಬುದನ್ನು ಮನಗಾಣಬೇಕು ಎಂದರು.
ಬೇಟಿ ಬಚಾವೋ ಯೋಜನೆ ಬಲಿಷ್ಠಗೊಳಿಸಲು ಆಗ್ರಹ
ಹೆಣ್ಣುಮಕ್ಕಳ ರಕ್ಷಣೆ, ಭದ್ರತೆ, ಹಾಗೂ ಅತ್ಯಾಚಾರಿಗಳಿಗೆ ಮರಣದಂಡನೆ ಶಿಕ್ಷೆ ನೀಡುವ ಉದ್ದೇಶದಿಂದ ಬೇಟಿ ಬಚಾವೋ ಯೋಜನೆ ಹೆಚ್ಚು ಬಲಿಷ್ಠಗೊಳಿಸುವಂತೆ ಕೋರಿ ಅ.17ರಂದು ಮಂಗಳೂರಿನ ಟೌನ್ ಹಾಲ್ ಬಳಿ ಇರುವ ಗಾಂಧಿಪ್ರತಿಮೆಯಿಂದ ದೆಹಲಿಯ ಪ್ರಧಾನ ಮಂತ್ರಿಗಳ ಕಚೇರಿಯವರೆಗೆ ಪಾದಯಾತ್ರೆಯ ಮೂಲಕ ಈಡೇರಿಕೆಗಳನ್ನು ಸಲ್ಲಿಸಲಾಗುತ್ತದೆ ಎಂದು ಪ್ರವೀಣ್, ಹೇಳಿದರು.
ದೇಶದ ಯಾವುದೇ ಒಂದು ಹೆಣ್ಣು ಅತ್ಯಾಚಾರಕ್ಕೆ ಒಳಗಾಗದೆ ಸಮಾಜದಲ್ಲಿ ಘನತೆ, ಗೌರವ ಮತ್ತು ಪ್ರತಿಷ್ಠೆಯಿಂದ ಬದುಕುವಂತೆ ಮಾಡುವ ನಿಟ್ಟಿನಲ್ಲಿ ಈ ಯೋಜನೆಯನ್ನು ಬಲಿಷ್ಠಗೊಳಿಸಲು ಮನವಿ ಸಲ್ಲಿಸಲಾಗುತ್ತದೆ. ಈ ಪಾದಯಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗಿಯಾಗಿ ಯಶಸ್ವಿಗೊಳಿಸುವಂತೆ ಕೋರಿದರು.
ಮುಂದೆ ಹೆಣ್ಣು ಮಕ್ಕಳನ್ನು ಮ್ಯೂಸಿಯಂ ನಲ್ಲಿ ನೋಡಬೇಕು!
ವಿದೇಶಗಳಲ್ಲಿ ಹೆಣ್ಣು ಮಕ್ಕಳಿಗೆ ಇರುವಂತಹ ರಕ್ಷಣೆ ನಮ್ಮ ದೇಶದಲ್ಲಿ ಯಾಕೆ ಇಲ್ಲ ? ಪ್ರತಿ ವರ್ಷ 35 ಸಾವಿರಕ್ಕೂ ಅಧಿಕ ಹೆಣ್ಣು ಮಕ್ಕಳು ಅತ್ಯಾಚಾರಕ್ಕೆ, ಒಳಗಾಗುತ್ತಿದ್ದಾರೆ. ಇದೇ ರೀತಿ ನಮ್ಮ ದೇಶದಲ್ಲಿ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ಅತ್ಯಾಚಾರಗಳು ಮುಂದುವರೆದರೆ ಕೊನೆಗೆ ನಾವು ಹೆಣ್ಣು ಮಕ್ಕಳನ್ನು ಮೂಸಿಯಂನಲ್ಲಿ ನೋಡಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.
ಇಂತಹ ಪ್ರಕರಣಗಳಲ್ಲಿ ಯಾವುದೇ ರಾಜಕೀಯ ಪಕ್ಷಗಳು ಮೂಗು ತೂರಿಸದೆ ಅಪರಾಧಿಗೆ ಶಿಕ್ಷೆ ಆಗಬೇಕು ಅಲ್ಲದೆ ಕಾನೂನು ಸಹ ಬಿಗೊಳಿಸಿ ಮುಂದೆ ಇಂತಹ ತಪ್ಪುಗಳು ನಡೆದಂತೆ ಸಂಬಂಧಪಟ್ಟ ಇಲಾಖೆಗಳು ಕಟ್ಟೇಚ್ಚರ ವಹಿಸಬೇಕಾಗಿದೆ.
ಪತ್ರಿಕಾಗೋಷ್ಠಿಯಲ್ಲಿ ಆಂದೋಲದ ಪ್ರಮುಖರಾದ ಮೂಸಾ ಶ್ರೀ ಶರೀಫ್, ಸಾಫಲ್ ಅಬ್ಬಾಸ್, ಅಬ್ದುಲ್ ಶುಕೋರ್ ಇದೆ ವೇಳೆ ಉಪಸ್ಥಿತರಿದ್ದರು.