ಬೆಂಗಳೂರು: ಕಾಶ್ಮೀರದ ಪಹಲ್ಗಾಮ್ ಉಗ್ರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸಶಸ್ತ್ರ ಪಡೆಗಳು ಕೈಗೊಂಡಿರುವುದು ಆಪರೇಷನ್ ಸಿಂಧೂರ ಕೇವಲ ದಾಳಿಯಲ್ಲ, ಇದು ಭಾರತದ ಸಾರ್ವಭೌಮತ್ವದ ಸಂಕೇತ. ಭಾರತೀಯ ಸೇನೆಯ ಧೈರ್ಯ ಮತ್ತು ಪ್ರಧಾನಿ ನರೇಂದ್ರ ಜೀ ಯವರ ನಿರ್ಭೀತ ನಾಯಕತ್ವಕ್ಕೆ ಅವರು ಧನ್ಯವಾದಗಳು ತಿಳಿಸಿದರು.
ಹೆಣ್ಣು ಮಕ್ಕಳ ಸಿಂಧೂರ ಅಳಿಸಿದ್ದ ಉಗ್ರರಿಗೆ ತಕ್ಕಶಾಸ್ತಿ; ಮೋದಿಜಿಗೆ ಧನ್ಯವಾದ ತಿಳಿಸಿದ ನಿಖಿಲ್ ಕುಮಾರಸ್ವಾಮಿ
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; “ಆಪರೇಷನ್ ಸಿಂಧೂರ್” ಇದು ಕೇವಲ ಒಂದು ದಾಳಿಯಲ್ಲ, ಇದು ಹಣೆಯ ಮೇಲೆ ಹಚ್ಚಿದ ರಾಷ್ಟ್ರೀಯ ಸಿಂಧೂರ. ಭಾರತ ಹೊಡೆದಾಗ ಜಗತ್ತು ನೋಡುತ್ತದೆ… ಮತ್ತು ಸ್ವಲ್ಪ ನಡುಗುತ್ತದೆ ಎಂದರು.
ಭಾರತೀಯ ಸೇನೆಯ ಧೈರ್ಯ ಮತ್ತು ಪ್ರಧಾನಿ ನರೇಂದ್ರ ಮೋದಿಜೀ ಅವರ ನಿರ್ಭೀತ ನಾಯಕತ್ವಕ್ಕೆ ನನ್ನ ನಮನಗಳು. ನವಭಾರತವು ಎಚ್ಚರಿಸುವುದಷ್ಟೇ ಅಲ್ಲ, ಅದು ತನ್ನ ಕರ್ತವ್ಯ ನಿರ್ವಹಿಸುತ್ತದೆ. ಭಯೋತ್ಪಾದಕರ ವಿರುದ್ಧದ ಹೋರಾಟದಲ್ಲಿ ಭಾರತೀಯ ಸೇನೆ ಯಶಸ್ವಿಯಾಗಲಿ.