ಧಾರವಾಡ: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ರವರು, ಧಾರವಾಡದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜನತಾ ದರ್ಶನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು.
ಜಿಲ್ಲೆಯ ಜನರ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲೇ ಆಲಿಸಿ ಪರಿಹಾರ ಕಂಡುಕೊಳ್ಳಲು ನಿರಂತರವಾಗಿ ಜನತಾ ದರ್ಶನ ಆಯೋಜಿಸಲಾಗುತ್ತಿದೆ. ಸಾಕಷ್ಟು ಸಮಸ್ಯೆಗಳಿಗೆ ಪರಿಹಾರವನ್ನೂ ಒದಗಿಸಲಾಗಿದೆ. ಸಾರ್ವಜನಿಕರು ಜನತಾ ದರ್ಶನ ಕಾರ್ಯಕ್ರಮದ ಸದುಪಯೋಗ ಮಾಡಿಕೊಳ್ಳಬೇಕೆಂದು ಸಚಿವರು ಅಭಿಪ್ರಾಯಪಟ್ಟರು.
ಜನತಾ ದರ್ಶನದಲ್ಲಿ ಶಾಸಕರಾದ ಮಹೇಶ ಟೆಂಗಿನಕಾಯಿ, ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ್, ಜಿಲ್ಲಾಧಿಕಾರಿ ದಿವ್ಯಪ್ರಭು ಜಿಆರ್ಜಿ, ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕೋಡ್, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಸ್ವರೂಪ ಟಿ ಕೆ ಸೇರಿದಂತೆ ಹಲವು ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.