ಬೆಂಗಳೂರು:ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ 75ನೇ ಗಣರಾಜ್ಯೋತ್ಸವದ ಆಚರಣೆ ಮಾಡಲಾಯಿತು.
ಈ ದಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ 75 ನೇ ಗಣರಾಜ್ಯೋತ್ಸವದ ಆಚರಣೆಯನ್ನು ಸರಳವಾಗಿ ಆಚರಿಸಲಾಯಿತು.ಗಣರಾಜ್ಯೋತ್ಸವದ ಅಂಗವಾಗಿ ವ್ಯವಸ್ಥಾಪಕ ನಿರ್ದೇಶಕರಾದ ರಾಮಚಂದ್ರನ್.ಆರ್. ಭಾ.ಆ.ಸೇ ರವರು ಧ್ವಜಾರೋಹಣ ನೆರವೇರಿಸಿದರು.
ಮುಂದುವರೆದು ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಸಂಸ್ಥೆಯ ನಿರ್ದೇಶಕರು (ಭದ್ರತಾ &ಜಾಗೃತ )ರವರಾದ. ಕಲಾ ಕೃಷ್ಣಸ್ವಾಮಿ ಭಾಪೋಸೇ ಹಾಗೂ ನಿರ್ದೇಶಕರು ಮಾಹಿತಿ ಮತ್ತು ತಂತ್ರಜ್ಞಾನ ರವರಾದ ಶಿಲ್ಪ.M.ಭಾಆಸೇ. ರವರು, ಮಹತ್ಮ ಗಾಂಧೀಜಿ ಡಾ. ಬಿ ಆರ್.ಅಂಬೇಡ್ಕರ್ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ರವರ ಭಾವಚಿತ್ರಕ್ಕೆ ನಮನ ಸಲ್ಲಿಸಿದರು.
ವ್ಯವಸ್ಥಾಪಕ ನಿರ್ದೇಶಕರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ಗಣತಂತ್ರ ದಿವಸದ ಆಚರಣೆ 77 ವರ್ಷಗಳಿಂದ ಆಚರಿಸಿಕೊಂಡು ಬಂದಿದ್ದೇವೆ, ಬೆಂಗಳೂರು ನಗರ ಸಾರಿಗೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರತಿಯೊಬ್ಬರಿಗೂ ಶುಭಾಶಯಗಳನ್ನು ತಿಳಿಸಿದರು. ವರ್ಷದ ಮೊದಲ ರಾಷ್ಟ್ರೀಯ ಹಬ್ಬವಾಗಿದೆ.
ಈ ಸಂದರ್ಭದಲ್ಲಿ ಸಂಸ್ಥೆಯ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.