ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತರನ್ನು ಗುರುತಿಸಿ ಸಮಾಜಸೇವೆ ಮಾಡುವ,ರಾಜಕೀಯವಾಗಿ ಬೆಳೆಸುವ ಕೆಲಸವನ್ನು ನಾಯಕರು ಹಾಗು ಪಕ್ಷ ಕೆಲಸ ಮಾಡುತ್ತದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಎಂ.ಇ.ಐ.ಸಂಸ್ಥೆ ಅಧ್ಯಕ್ಷರಾದ ಎಸ್.ಮನೋಹರ್ ತಿಳಿಸಿದರು.
ಖಾಸಗಿ ಹೊಟೆಲ್ ನಲ್ಲಿ ವಿಕಲಚೇತನರೊಂದಿಗೆ ಎಂ.ಇ.ಐ.ಸಂಸ್ಥೆ ಅಧ್ಯಕ್ಷರಾದ ಎಸ್.ಮನೋಹರ್ ಹುಟ್ಟುಹಬ್ಬ ಆಚರಣೆ ಮಾಡಿಕೊಂಡು, ಅಭಿನಂದನೆ ಸ್ವೀಕರಿಸಿ ಮಾತನಾಡಿ, ಕಾಂಗ್ರೆಸ್ ಪಕ್ಷ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡ ಪಕ್ಷ, ಬಡವರ ಪರ ಸದಾ ಚಿಂತನೆ ಮಾಡಿ ಯೋಜನೆಗಳನ್ನು ರೂಪಿಸಿ ಬಡವರ ಏಳಿಗೆಗಾಗಿ ಶ್ರಮಿಸುವ ಪಕ್ಷವಾಗಿದೆ, ಅಂತಹ ಪಕ್ಷ ಕಾರ್ಯಕರ್ತ ಎಂದರೆ ಹೆಮ್ಮೆಪಡುವ ಸಂಗತಿಯಾಗಿದೆ ಎಂದರು.
ಕಾಂಗ್ರೆಸ್ ನ ಜನಪರ ಕಾರ್ಯಗಳು ಜನರಿಗೆ ಇಷ್ಟ
ಕಳೆದ ವಿಧಾನಸಭಾ ಚುನಾವಣೆ ರಾಜ್ಯದ ಜನತೆಗೆ 5ಗ್ಯಾರೆಂಟಿ ಯೋಜನೆಗಳ ಭರವಸೆ ನೀಡಿತ್ತು, ಸರ್ಕಾರ ರಚನೆಯಾದ ಮೇಲೆ ಗ್ಯಾರೆಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದು ರಾಜ್ಯದ ಕೊಟ್ಯಂತರ ಜನರ ಪಾಲಿಗೆ ಆಸರೆಯಾಗಿದೆ ಎಂದು ಅಭಿಮಾನ ವ್ಯಕ್ತಪಡಿಸಿದರು. ಕಾಂಗ್ರೆಸ್ ಪಕ್ಷ ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ಸಿದ್ದಾಂತದ ಮೇಲೆ ಪಕ್ಷ ಮತ್ತು ಸರ್ಕಾರ ನಡೆಯುತ್ತಿದೆ.ಎಲ್ಲ ವರ್ಗ, ಧರ್ಮದವರಿಗೆ ಸರಿಸಮಾನ ಅವಕಾಶ, ಪ್ರತಿಯೊಬ್ಬ ಕಾರ್ಯಕರ್ತನಿಗೆ ಸ್ಥಾನಮಾನ ಕಾಂಗ್ರೆಸ್ ಪಕ್ಷದ ನೀಡಿದೆ.
ಬಿಜೆಪಿ ಪಕ್ಷದ ಜನವಿರೋಧಿ ನೀತಿಯನ್ನು ಖಂಡಿಸಿ ಸಾವಿರಾರು ಪ್ರತಿಭಟನೆ ಮಾಡಿ ಜನರ ಪರ ಧ್ವನಿಯಾಗಿ ಹೋರಾಟ ಮಾಡಿದ್ದೇನೆ. ನನ್ನ ಹೋರಾಟಕ್ಕೆ ಸದಾ ಬೆಂಬಲವಾಗಿ ನಿಂತಿರುವ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ಹೃತ್ವೂರ್ವಕ ಧನ್ಯವಾದಗಳು.
ಕಾಂಗ್ರೆಸ್ ಪಕ್ಷದ ಜನಪರ ಕಾರ್ಯಗಳು ಇಂದು ನಾಡಿನ ಜನರಿಗೆ ತಲುಪಿದೆ. ಮನೆ, ಮನೆಗಳಿಗೆ ಕಾಂಗ್ರೆಸ್ ಪಕ್ಷದ ಸಾಧನೆ, ಯೋಜನೆಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಿ, 2028ಕ್ಕೆ ಮತ್ತೋಮ್ಮೆ ಕಾಂಗ್ರೆಸ್ ಪಕ್ಷದ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ತರುವಲ್ಲಿ ನಿರಂತರ ಹೋರಾಟ ಮುಂದುವರೆಯಲಿದೆ ಎಂದು ಹೇಳಿದರು.
ಅರಣ್ಯ ಖಾತೆ ಸಚಿವರಾದ ಈಶ್ವರ್ ಖಂಡ್ರೆ ಮಾತನಾಡಿ, ಸಾಮಾನ್ಯ ಕಾರ್ಯಕರ್ತನಿಗು ಕಾಂಗ್ರೆಸ್ ಪಕ್ಷ ಜವಾಬ್ದಾರಿ ನೀಡುವ ಜೊತೆ ಬೆಳೆಸುವ ಕೆಲಸ ಮಾಡುಯತ್ತದೆ. 30-40 ವರ್ಷಗಳಿಂದ ಪಕ್ಷಕ್ಕೆ ಸಾಕಷ್ಟು ಕೆಲಸಗಳನ್ನು ಮಾಡಿಕೊಂಡು, ಜನೋಪಯೊಗಿ ಕಾರ್ಯದಲ್ಲಿ ತೊಡಗಿದ್ದಾರೆ. ವಿಪಕ್ಷಗಳಿಗೆ ಬಡಿದೆಬ್ಬಿಸುವ ಕೆಲಸ ಮಾಡಿದ್ದಾರೆ. ಅದಕ್ಕೆ ಸಂಬಂಧಿಸಿದಂತೆ ಪಕ್ಷ ಹುದ್ಸೆಗಳನ್ನು ನೀಡುತ್ತ ಬಂದಿದೆ. ಅವರ ಪಕ್ಷದ ನಿಷ್ಟೆ,ಸಿದ್ದಾಂತ,ಹೋರಾಟ ಎಲ್ಲವೂ ವಿಭಿನ್ನವಾಗಿರುತ್ತವೆ ಎಂದರು.
ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿರವರು, ಅರಣ್ಯ ಖಾತೆ ಸಚಿವರಾದ ಈಶ್ವರ್ ಖಂಡ್ರೆ ರವರು, ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷರಾದ ಹೆಚ್.ಎಂ.ರೇವಣ್ಣರವರು ಹೂಗುಚ್ಚ ನೀಡಿ ಶುಭ ಕೋರಿದರು. ಅಲ್ಲದೆ ಪಕ್ಷದ ಕಾರ್ಯಕರ್ತರು,ಅಭಿಮಾನಿಗಳು,ಹಿತೈಷಿಗಳು,ಬಂದು ಮಿತ್ರರು,ಕಾಂಗ್ರೆಸ್ ನಾಯಕರು ಮನೋಹರ್ ಅವರ ಹುಟ್ಟು ಹಬ್ಬಕ್ಕೆ ಶುಭಕೋರಿದರು. ಅಲ್ಲದೆ ಕಾರ್ಯಕ್ರಮಕ್ಕೆ ಆಗಮಿಸಿದವರಿಗೆ ಗಾಯಕರು ಸಂಗೀತ ರಸದೌತಣ ನೀಡಿದರು.
ಕಾಂಗ್ರೆಸ್ ಪಕ್ಷದ ಮುಖಂಡರಾದ ಜನಾರ್ಧನ್,ಆನಂದ್,ಜಯಸಿಂಹ, ಸಲೀಮ್, ಪುಟ್ಟರಾಜು, ಚಂದ್ರಶೇಖರ್,ಕುಶಾಲ್ ಅರವೆಗೌಡ,, ನವೀನ್ ಮಾಧವ, ಚಿನ್ನಿಪ್ರಕಾಶ್ ದರ್ಶನ್ ಭಾಗವಹಿಸಿದ್ದರು.