ಬೆಂಗಳೂರು: ರಾಕ್ಲೈನ್ ಮಾಲ್ ಬಾಕಿ ತೆರಿಗೆ ಪಾವತಿಸದ ಕಾರಣ ಪಾಲಿಕೆ ಕಂದಾಯ ಅಧಿಕಾರಿಗಳು ಈಗ ರಾಕ್ ಲೈನ್ ಮಾಲ್ ಅನ್ನು ಸೀಜ್ ಮಾಡಿದರು.
ದಾಸರಹಳ್ಳಿ ವಲಯ ವ್ಯಾಪ್ತಿಯಲ್ಲಿ ಬರುವ ರಾಕ್ ಲೈನ್ ಮಾಲ್ ಗೆ ಬೀಗ ಜಡಿಯಲಾಗಿದೆ, ಬಾಕಿ ತೆರಿಗೆ ಕಟ್ಟುವಂತೆ ಹಲವು ಭಾರಿ ನೋಟಿಸ್ ಕಳಿಸಿದ್ದರು, ಆಡಳಿತ ಮಂಡಳಿ ತಾಕೆ ಕೆಡಿಸಿಕೊಂಡಿಲ್ಲದ ಕಾರಣ ಇವತ್ತು ಬಿಬಿಎಂಪಿ ಕಂದಾಯ ಅಧಿಕಾರಿಗಳು ಮಾಲ್ ಗೆ ಬೀಗ ಹಾಕಿದರು.
• ರಾಕ್ ಲೈನ್ ಮಾಲ್ ನಿಂದ 2011 ರಿಂದ 2022-23 ರವರೆಗೆ ಬಾಕಿ ಉಳಿಸಿಕೊಂಡಿರುವ 11.51 ಕೋಟಿ ರೂ. ಆಸ್ತಿ ತೆರಿಗೆಯನ್ನು ಪಾಲಿಕೆಗೆ ಪಾವತಿಸಬೇಕಿದೆ.
• ಬಾಕಿ ತೆರಿಗೆ ಪಾವತಿಸಲು ಈಗಾಗಲೇ ಡಿಮಾಂಡ್ ನೋಟೀಸ್ ನೀಡಿದ್ದರು ತೆರಿಗೆಯನ್ನು ಪಾವತಿಸಿರುವುದಿಲ್ಲ.
• ಇಂದು ದಾಸರಹಳ್ಳಿ ವಲಯ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ರಾಕ್ ಲೈನ್ ಮಾಲ್ ಅನ್ನು ಸೀಜ್ ಮಾಡಲಾಗಿದೆ.
ಸ್ಥಳದಲ್ಲಿ ವಲಯ ಆಯುಕ್ತರಾದ ಪ್ರೀತಿ ಗೆಹ್ಲೋಟ್, ವಲಯ ಜಂಟಿ ಆಯುಕ್ತರಾದ ಬಾಲಶೇಖರ್ ದಾಸರಹಳ್ಳಿ ವಲಯ ಅಧಿಕಾರಿಗಳು, ಕಂದಯಾ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ, ಮಾರ್ಷಲ್ ಗಳು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.