ಬೆಂಗಳೂರು : ದ್ವಿತೀಯ ಪಿ.ಯು.ಸಿ ಪರೀಕ್ಷೆ-03 ರ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪರೀಕ್ಷಾ ಕೇಂದ್ರಗಳವರೆಗೆ BMTC ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಉಚಿತವಾಗಿ ಪ್ರಯಾಣಿಸಲು ತಿಳಿಸಲಾಗಿದೆ.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ವಿದ್ಯಾರ್ಥಿ ಸಮುದಾಯದ ಹಿತವನ್ನು ಗಮನದಲ್ಲಿಟ್ಟುಕೊಂಡು ರಿಯಾಯಿತಿ ದರದಲ್ಲಿ ವಿದ್ಯಾರ್ಥಿ ಪಾಸುಗಳನ್ನು ವಾಸಸ್ಥಳದಿಂದ ಶಾಲಾ/ಕಾಲೇಜಿಗೆ ಪ್ರಯಾಣಿಸಲು ಅವಕಾಶ ಕಲ್ಪಿಸಿ ವಿತರಣೆ ಮಾಡುತ್ತಿದೆ.
ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳ ಪರೀಕ್ಷೆ-03 ಬೇರೆ ಬೇರೆ ಕಾಲೇಜುಗಳಲ್ಲಿ ಇರುವುದರಿಂದ ಸಂಸ್ಥೆಯು ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೆಳಕಂಡ ಸೌಲಭ್ಯಗಳನ್ನು ಕಲ್ಪಿಸಿರುತ್ತದೆ.
• ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ದಿನಾಂಕ 09.06.2025 ರಿಂದ 20.06.2025 ರವರೆಗೆ ಪರೀಕ್ಷೆಗಳು ನಡೆಯುವ ದಿನಾಂಕಗಳಂದು ಪರೀಕ್ಷೆಗೆ ಹಾಜರಾಗಲು ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
• ದ್ವಿತೀಯ ಪಿ.ಯು.ಸಿ ಪರೀಕ್ಷಾ ದಿನಾಂಕಗಳಂದು ಪರೀಕ್ಷಾ ಕೇಂದ್ರಗಳ ಮಾರ್ಗಗಳಲ್ಲಿ ಕಡ್ಡಾಯವಾಗಿ ಎಲ್ಲಾ ಮಾರ್ಗಗಳನ್ನು, ಸುತ್ತುವಳಿಗಳನ್ನು ಕಾರ್ಯಾಚರಣೆಗೊಳಿಸಲಾಗುವುದು.
• ಹೆಚ್ಚುವರಿ ಸುತ್ತುವಳಿಗಳ ಕಾರ್ಯಾಚರಣೆಯ ಅಗತ್ಯತೆ ಕಂಡುಬಂದಲ್ಲಿ ಕಾರ್ಯಾಚರಣೆ ಮಾಡಲಾಗುವುದು.
• ಪರೀಕ್ಷಾ ಕೇಂದ್ರಗಳ ಬಳಿ ವಿದ್ಯಾರ್ಥಿಗಳು/ಪೋಷಕರು ಕೋರಿಕೆ ನಿಲುಗಡೆ ಕೋರಿದಲ್ಲಿ, ಕೋರಿಕೆ ನಿಲುಗಡೆ ನೀಡಲು ಕ್ರಮಕೈಗೊಳ್ಳಲಾಗಿದೆ.