ಬೆಂಗಳೂರು; ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ವಿಧಾನಪರಿಷತ್ ಸದಸ್ಯರಾದ ಎಂ.ಆರ್. ಸೀತಾರಾಂ ಇಂದು ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
ಇತ್ತೀಚಿನ ರಾಜಕೀಯ ಬೆಳವಣಿಗೆಗಳು, ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿ ಯೋಜನೆಗಳು ಮತ್ತಿತರ ವಿಷಯಗಳ ಕುರಿತು ಅವರು ಚರ್ಚಿಸಿದರು.
ಎಂ.ಆರ್.ಸೀತಾರಾಂ ಮತ್ತು ಶೃತಿ ಸೀತಾರಾಂ ಅವರು ಸುತ್ತೂರು ಮಠದ ಸ್ವಾಮೀಜಿ ಅವರಿಗೆ ಗೌರವ ಸಮರ್ಪಿಸಿದರು.