ಬೆಂಗಳೂರು: ಬೆಂಗಳೂರು ಕೇಂದ್ರ ನಗರ ಪಾಲಿಕೆ 4 ವಿಭಾಗಗಳ ವ್ಯಾಪ್ತಿಯಲ್ಲಿ 178 ಗುಂಡಿಗಳು, 2,332 ಚ.ಮೀ. ವಿಸ್ತೀರ್ಣದ ಪ್ಯಾಚ್ ವರ್ಕ್, ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಬೆಂಗಳೂರು ಉತ್ತರ ಬಿಜೆಪಿ ಆಯುಕ್ತ- ರಾಜೇಂದ್ರ ಚೋಳನ್ ತಿಳಿಸಿದರು.
ಮುಖ್ಯಮಂತ್ರಿಗಳು, ಕರ್ನಾಟಕ ಸರ್ಕಾರ ರವರ ಅಧ್ಯಕ್ಷತೆಯಲ್ಲಿ ನಿನ್ನೆ ದಿನಾಂಕ: 20-09-2025 ರಂದು ನಡೆದ ಸಭೆಯಲ್ಲಿ ಬೆಂಗಳೂರು ನಗರದಲ್ಲಿ ಗುಂಡಿ ಮುಕ್ತ ರಸ್ತೆಗಳನ್ನಾಗಿಸಲು ಆದೇಶಿಸಿದಿದಂತೆ* ಹಾಗೂ *ಸನ್ಮಾನ್ಯ ಉಪ ಮುಖ್ಯಮಂತ್ರಿಗಳ ನಿರ್ದೇಶನದಂತೆ ದಿನಾಂಕ: 20-09-2025 ರಂದು ಬೆಂಗಳೂರು ಕೇಂದ್ರ ನಗರಪಾಲಿಕೆ* ವ್ಯಾಪ್ತಿಯ 4 ವಿಭಾಗಗಳಲ್ಲಿ 9.45 ಕಿ.ಮೀ ಉದ್ದದ ರಸ್ತೆ ವ್ಯಾಪ್ತಿಯಲ್ಲಿ 178 ಗುಂಡಿಗಳು, 2,332 ಚ.ಮೀ. ವಿಸ್ತೀರ್ಣದ ಪ್ಯಾಚ್ ವರ್ಕ್ ರಸ್ತೆ ಕಾಮಗಾರಿ ಕೈಗೊಳ್ಳಲಾಗಿದೆ* ಎಂದು ಕೇಂದ್ರ ನಗರ ಪಾಲಿಕೆ ಆಯುಕ್ತರಾದ ರಾಜೇಂದ್ರ ಚೋಳನ್ ರವರು ತಿಳಿಸಿದರು.
ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚುವ ಕಾರ್ಯ ನಿರಂತರವಾಗಿ ನಡೆಯುತ್ತಿದ್ದು, ಉಳಿದ ಸ್ಥಳಗಳಲ್ಲಿ ತ್ವರಿತ ಗತಿಯಲ್ಲಿ ಗುಂಡಿಗಳನ್ನು ಮುಚ್ಚಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.