ಬೆಂಗಳೂರು:ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾಗಿ ಎಸ್ ಆರ್ ಶ್ರೀನಿವಾಸ (ವಾಸು), ಶಾಸಕರು, ಗುಬ್ಬಿ ವಿಧಾನಸಭಾ ಕ್ಷೇತ್ರ ರವರು ನಿಗಮದ ಕೇಂದ್ರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.
ರಾಮಲಿಂಗಾ ರೆಡ್ಡಿ, ಸಾರಿಗೆ ಮತ್ತು ಮುಜರಾಯಿ ಸಚಿವರು ನೂತನ ಅಧ್ಯಕ್ಷರಿಗೆ ಶುಭ ಹಾರೈಸಿದರು.ಕೆ.ಎನ್. ರಾಜಣ್ಣ ಮಾನ್ಯ ಸಹಕಾರ ಸಚಿವರು ರವರು , ನೂತನ ಅಧ್ಯಕ್ಷರಿಗೆ ಶುಭಾಶಯ ತಿಳಿಸಿದರು.
ಇದೇ ಸಂದರ್ಭದಲ್ಲಿ ವಿ. ಅನ್ಬುಕುಮಾರ್ ಭಾ.ಆ.ಸೇ. ವ್ಯವಸ್ಥಾಪಕ ನಿರ್ದೇಶಕರು, ಡಾ. ನಂದಿನಿದೇವಿ ಕೆ, ಭಾ.ಆ.ಸೇ, ನಿರ್ದೇಶಕರು (ಸಿಬ್ಬಂದಿ ಮತ್ತು ಜಾಗೃತ) ರವರು ಮಾನ್ಯ ಅಧ್ಯಕ್ಷರಿಗೆ ಶುಭ ಕೋರಿದರು.
ಅಧ್ಯಕ್ಷರು ಕೇಂದ್ರ ಕಚೇರಿಯ ಇಲಾಖಾ ಮುಖ್ಯಸ್ಥರೊಂದಿಗೆ ಸಭೆಯನ್ನು ನಡೆಸಿ,ನಿಗಮದ ಬಗ್ಗೆ ಸಂಕ್ಷಿಪ್ತ ಮಾಹಿತಿ ಪಡೆದರು.