ದೇವನಹಳ್ಳಿ; ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನ ಹಿರಿಯ ನಾಯಕರಾದ ವೀರಪ್ಪ ಮೊಯ್ಲಿ ಹಾಗೂ ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಅವರು ಒಟ್ಟಿಗೆ ತೇರು ಎಳೆದು ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿದರು.
ದೇವನಹಳ್ಳಿ ತಾಲ್ಲೂಕಿನ ಮಾಡಿ ತೂಬಗೆರೆ ಹೋಬಳಿಯ ವೆಂಕಟೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದಲ್ಲಿ ವೀರಪ್ಪ ಮೊಯ್ಲಿ ಹಾಗೂ ರಕ್ಷಾ ರಾಮಯ್ಯ ಅವರು ಪಾಲ್ಗೊಂಡರು.
ಸ್ವತಃ ವೀರಪ್ಪ ಮೊಯ್ಲಿ ಅವರು ರಕ್ಷಾ ರಾಮಯ್ಯ ಅವರನ್ನು ವೆಂಕಟೇಶ್ವರ ಸನ್ನಿಧಿಗೆ ಕರೆದೊಯ್ದುರು. ಇಬ್ಬರೂ ಮುಖಂಡರು ದೇವರಿಗೆ ಪೂಜೆ ಸಲ್ಲಿಸಿದರು. ದೇವಸ್ಥಾನದ ಆಡಳಿತ ಮಂಡಳಿಯವರು ಉಭಯ ನಾಯಕರಿಗೆ ಹಾರ ಹಾಕಿ ಗೌರವ ಸಮರ್ಪಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಬ್ಲಾಕ್ ಅಧ್ಯಕ್ಷರು, ಪಕ್ಷದ ವಿವಿಧ ಘಟಕಗಳ ಮುಖಂಡರು. ಕಾರ್ಯಕರ್ತರು ಅನೇಕ ಭಕ್ತಾದಿಗಳು ಉಪಸ್ಥಿತರಿದ್ದರು.