ಬೆಂಗಳೂರು: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ರಾಣಿ ಅಬ್ಬಕ್ಕ ದೇವಿ ಮೈದಾನದಲ್ಲಿ ಅದ್ದೂರಿಯಾಗಿ ಆಚರಣೆ ಮಾಡಲಾಯಿತು.
ಕ್ಷೇತ್ರದ ಶಾಸಕರು, ಮಾಜಿ ಸಚಿವರಾದ ಗೋಪಾಲಯ್ಯ, ಹೇಮಲತಾ ಗೋಪಾಲಯ್ಯ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕ್ಷೇತ್ರದ ಎಲ್ಲಾ ವಾರ್ಡ್ ನಲ್ಲಿ ಮಹಿಳೆಯರು, ಮಹಿಳಾ ಸಂಘದವರು ತರಹೇವಾರಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ನೀಡಿಯರು. ಕ್ಷೇತ್ರದ ಎಲ್ಲಾ ಸಾರ್ವಜನಿಕರು ದೊಡ್ಡ ಮಟ್ಟದ ಸಮಾರಂಭದಲ್ಲಿ ಭಾಗಿಯಾಗಿದ್ದರು.
ಬೆಳಿಗ್ಗೆಯಿಂದ ಸಂಜೆ ವರೆಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಚಿಕ್ಕ ಮಕ್ಕಳಿಂದ ವಯಸ್ಕರು, ವೃದ್ಧ ಮಹಿಳೆಯರು ವೇದಿಕೆ ಮೇಲೆ ತರಹೇವಾರಿ ಕಾರ್ಯಕ್ರಮಗಳನ್ನ ನೀಡಿ ಸಾಯಿ ಎನ್ನಿಸಿಕೊಂಡರು. ಅಲ್ಲದೆ ನೆರೆದಿದ್ದವರ್ರಿಗೆ ಫಿದ ಆದರು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಮಾಜಿ ಡಿಸಿಎಂ ಹಾಗು ಮಲ್ಲೇಶ್ವರಂ ಕ್ಷೇತ್ರದ ಶಾಸಕ ಅಶ್ವತ್ ನಾರಾಯಣ್ ಅವರು ಭಾಗಿಯಾಗಿದ್ದರು.
ನಂತರ ಮಾತನಾಡಿದ ಅವರು , ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಕ್ಷೇತ್ರದ ಶಾಸಕರಾದ ಗೋಪಾಲಯ್ಯ ಅವರ ನೇತೃತ್ವದಲ್ಲಿ ಅದ್ದೂರಿಯಾಗಿ ನೆರವೇರಿಸಲಾಯಿತು. ಸಮಾಜಕ್ಕೆ ದುಡಿದಿರುವ ಹಾಗು ಸಾಧಕಿ ಮಹಿಳೆಯರನ್ನು ಗುರುತಿಸಿ ಸನ್ಮಾನ ಮಾಡುತ್ತಿರುವುದು ಒಳ್ಳೆಯದು, ಸಾಧಕ ಮಹಿಳೆಯರಿಗೆ ನೀಡುತ್ತಿರುವ ಪ್ರಶಸ್ತಿ ಮತ್ತಷ್ಟು ಸಾದನೆ ಮಾಡಲು ಸಹಕಾರಿಯಾಗುತ್ತದೆ ಎಂದರು.
ಶಾಸಕ ಗೋಪಾಲಯ್ಯ ಮಾತನಾಡಿ, ಕ್ಷೇತ್ರದಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಮಹಿಳಾ ದಿನಾಚರಣೆ ಅಂಗವಾಗಿ ಕ್ಷೇತ್ರದ ಜನರನ್ನು ಅದರಲ್ಲೂ ವಿಶೇಷವಾಗಿ ಮಹಿಳೆಯರನ್ನು ಒಂದು ಕಡೆ ಸೇರಿಸುವುದು ಹಾಗು ಅವರ ಸಾದನೆ,ವಿಶೇಷ ಚಟುವಟಿಕೆಗಳನ್ನು ತೋರಿಸುವ ಸಲುವಾಗಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಮಹಿಳೆಯರನ್ನು ಒಂದುಗೂಡಿಸುವ ಸಲುವಾಗಿ ತರಹೇವಾರಿ ಚಟುವಟಿಕೆ ಕೈಗೊಳ್ಳಲಾಗಿತ್ತು. ಕಾರ್ಯಕ್ರಮ ಅಚ್ಚುಕಟ್ಟಾಗಿ ನಿರ್ವಹಣೆ ಮಾಡಲಾಗಿತ್ತು.
ಕಾರ್ಯಕ್ರಮಕ್ಕೆ ಸಾವಿರಾರು ಜನ ಭಾಗಿಯಾಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಈ ವೇಳೆ ಸ್ಥಳೀಯ ಬಿಬಿಎಂಪಿ ಮಾಜಿ ಸದಸ್ಯ ಜಯರಾಮ್, ಸೇರಿದಂತೆ ಮಹಿಳಾ ಮೋರ್ಚಾದ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದ ರು.